ಜನ್ಮದಿನದಂದು ಸಸಿ ನೆಟ್ಟು ಪರಿಸರ ಉಳಿಸಿ: ಚಿದ್ರಿ
Team Udayavani, Jul 6, 2019, 4:09 PM IST
ಬೀದರ: ಬಗದಲ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮವನ್ನು ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ ಉದ್ಘಾಟಿಸಿದರು.
ಬೀದರ: ಮನೆಗೊಂದು ಮರ ಊರಿಗೊಂದು ವನವಾಗಬೇಕು. ವಿದ್ಯಾರ್ಥಿಗಳು ಅವರ ಜನ್ಮದಿನದಂದು ಸಸಿಗಳನ್ನು ನೆಟ್ಟು ಪರಿಸರ ಉಳಿಸುವ ಕಾರ್ಯ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಗೀತಾ ಪಂಡಿತರಾವ್ ಚಿದ್ರಿ ಸಲಹೆ ನೀಡಿದರು.
ಬಗದಲ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರ ಜಿಲ್ಲಾ ಪಂಚಾಯತ, ಸಾಮಾಜಿಕ ಅರಣ್ಯ ವಿಭಾಗ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಂಯುಕ್ತಾಶ್ರಯದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರ ದಿನೇದಿನೆ ನಾಶವಾಗುತ್ತಿದೆ. ಅರಣ್ಯ ಪ್ರದೇಶಕ್ಕೆ, ರೈತರ ಬೆಳೆಗಳಿಗೆ ಮತ್ತು ಕುಡಿಯಲು ನೀರಿಲ್ಲದಂತಾಗುತ್ತಿದೆ. ಇದು ಅತ್ಯಂತ ನೋವಿನ ಸಂಗತಿ. ನಾವು ಮರಗಳನ್ನು ಕಡಿಯುತ್ತ ಅರಣ್ಯ ನಾಶ ಮಾಡುತ್ತಿರುವುದೇ ಇದಕ್ಕೆ ಕಾರಣ. ಇದು ಬದಲಾಗಬೇಕು. ಪರಿಸರ ನಮ್ಮ ಜೀವ ಇದ್ದಂತೆ. ಅದನ್ನು ಉಳಿಸಿಬೆಳೆಸುವ ಹೊಣೆ ಎಲ್ಲರ ಮೇಲಿದೆ ಎಂದು ಹೇಳಿದರು.
ಪರಿಸರ ಉಳಿಯಲು ಮಾಡಬೇಕಾದ ಮೊದಲ ಕಾರ್ಯ ಏನೆಂದರೆ ನಾವು ಪ್ರತಿಯೊಬ್ಬರು ಸಸಿಗಳನ್ನು ನೆಡಬೇಕು. ಯಾವುದೇ ಕಾರ್ಯಕ್ರಮ ಇರಲಿ ಆ ವೇಳೆ ನಾವು ಸಸಿ ನೆಡುವಂತಹ ಒಳ್ಳೆಯ ಪರಿಪಾಠ ರೂಢಿಸಿಕೊಳ್ಳಬೇಕು. ನಾನು ಸಸಿ ನೆಡುವ ಕೆಲಸವನ್ನು ತಪ್ಪದೇ ಮಾಡುತ್ತೇನೆ ಎಂದು ಪ್ರತಿಯೊಬ್ಬರು ಶಪತ ಮಾಡಿದಲ್ಲಿ ಖಂಡಿತಾ ಪರಿಸರ ಉಳಿಯಲು ಸಾಧ್ಯವಾಗುತ್ತದೆ ಎಂದರು.
ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ.ಗಾಮನಗಟ್ಟಿ ಮಾತನಾಡಿ, ಇಡೀ ದೇಶದಲ್ಲಿ ಈ ಒಂದು ವಾರ ಅರಣ್ಯದ ಹಬ್ಬವಿದ್ದಂತೆ. ಜುಲೈ 1ರಿಂದ 7ರ ವರೆಗೆ ಸಸಿಗಳನ್ನು ನೆಡುವ ಮೂಲಕ ಅರಣ್ಯ ಸಂರಕ್ಷಣೆಗೆ ಮುಂದಾಗಿದ್ದೇವೆ ಎಂದು ತಿಳಿಸಿದರು.
ಈ ವರ್ಷ ಜಿಲ್ಲೆಯ ಸೀಮಿತ ಅರಣ್ಯ ಪ್ರದೇಶದಲ್ಲಿ 3 ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ರಸ್ತೆ ಬದಿಯ ನೆಡುತೋಪ ಮತ್ತು ನಗರ ಪ್ರದೇಶದ ರಸ್ತೆಗಳಲ್ಲಿ ಎತ್ತರವಾದ ಪ್ರದೇಶಗಳಲ್ಲಿ ಎತ್ತರವಾದ ಒಂದು ಲಕ್ಷ ಸಸಿಗಳನ್ನು ನೆಟ್ಟು ಪೋಷಿಸುವ ಗುರಿ ಹೊಂದಲಾಗಿದೆ. ಮತ್ತು ಕೃಷಿ ಅರಣ್ಯ ನೆಡುತೋಪುಗಾಗಿ ರೈತರಿಗೆ ಹಾಗೂ ಸಾರ್ವಜನಿರಿಗೆ ವಿತರಣೆಗಾಗಿ 6 ಲಕ್ಷ ಸಸಿಗಳನ್ನು ಬೆಳೆಸಲಾಗಿದೆ. ಮಳೆಗಾಲದಲ್ಲಿ ಎಲ್ಲ ಸಸಿಗಳನ್ನು ನೆಟ್ಟು ಗುರಿ ಸಾಧಿಸಲಾಗುತ್ತದೆ ಎಂದು ತಿಳಿಸಿದರು.
ಮರಗಳ ಸಂರಕ್ಷಣೆಯಿಂದ ಮಣ್ಣಿನ ತೇವಾಂಶ ಹೆಚ್ಚಲಿದೆ. ಮರಗಳಿಂದಾಗುವ ಲಾಭಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಇನ್ನೂ ಹೆಚ್ಚು ಗಿಡಗಳನ್ನು ಬೆಳೆಸುವುದರ ಮೂಲಕ ಅರಣ್ಯ ಪ್ರದೇಶವನ್ನು ವಿಸ್ತರಿಸುತ್ತೇವೆ ಎಂದು ಹೇಳಿದರು.
ಪ್ರಾದೇಶಿಕ ಅರಣ್ಯ ವಿಭಾಗದ ಉಪ ಸಂರಕ್ಷಣಾಧಿಕಾರಿ ಶಿವಶಂಕರ್ ಮಾತನಾಡಿ, ಪ್ರತಿಯೊಬ್ಬರು ಪರಿಸರ ರಕ್ಷಣೆಗೆ ಮುಂದಾಗಬೇಕು. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು. ಇಲ್ಲಿನ ವಿದ್ಯಾರ್ಥಿಗಳಿಗೆ 100 ಸಸಿಗಳು ಕೊಡುತ್ತೇವೆ. ಯಾವ ವಿದ್ಯಾರ್ಥಿಗಳು ಅವುಗಳನ್ನು ಸರಿಯಾಗಿ ಬೆಳೆಸುತ್ತಾರೋ ಅವರಿಗೆ ಚಿಂಚೋಳಿ ಅರಣ್ಯ ಪ್ರದೇಶಕ್ಕೆ ಪ್ರವಾಸ ಕರೆದುಕೊಂಡು ಹೋಗುವುದಾಗಿ ಹೇಳಿದರು.
ಬಗದಲ್ ಜಿಲ್ಲಾ ಪಂಚಾಯತ ಸದಸ್ಯ ಅಫ್ರೂೕಜ್ ಖಾನ್, ಚಿಟ್ಟಾ ಜಿಲ್ಲಾ ಪಂಚಾಯತ್ ಕ್ಷೇತ್ರ ಸದಸ್ಯ ಶಕುಂತಲಾ ಕಾಶೀನಾಥ್ ಬೆಲ್ದಾಳೆ, ಸಾಮಾಜಿಕ ಅರಣ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಜೇಂದ್ರ, ಸಾಮಾಜಿಕ ಅರಣ್ಯ ವಲಯ ಅರಣ್ಯಾಧಿಕಾರಿಗಳಾದ ಶಿವರಾಜ ಮೇಟಿ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಚನ್ನಬಸವ ಹೆಡೆ ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್ ವಿವಾಹ ಸಾಧ್ಯ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.