ಮಕ್ಕಳ ಭವಿಷ್ಯಕ್ಕಾಗಿ ಸಮಯ ನೀಡಿ
ಜಿಲ್ಲಾ ಕುಷ್ಠರೋಗ ಅಧಿಕಾರಿಗಳ ಕಚೇರಿಯಲ್ಲಿ ಕಾರ್ಯಕ್ರಮ
Team Udayavani, May 12, 2019, 1:30 PM IST
ಬೀದರ: ಜಿಲ್ಲಾ ಕುಷ್ಠರೋಗ ಅಧಿಕಾರಿಗಳ ಕಾರ್ಯಲಯದಲ್ಲಿ ಸಿಬ್ಬಂದಿಗಳ ಮಕ್ಕಳು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಬೀದರ: ಜಿಲ್ಲಾ ಕುಷ್ಠರೋಗ ಅಧಿಕಾರಿಗಳ ಕಾರ್ಯಾಲಯದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಸಿಬ್ಬಂದಿಗಳ ಮಕ್ಕಳು ಹಾಗೂ ಎಸ್‌ಎಸ್‌ಎಲ್ಸಿ, ಪಿಯುಸಿ ಪರೀಕ್ಷೆಯಲ್ಲ್ಲಿ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ| ರಾಜಶೇಖರ ಪಾಟೀಲ ಮಾತನಾಡಿ, ಮಕ್ಕಳ ಭವಿಷ್ಯ ಉಜ್ವಲವಾಗಲು ಪಾಕರು ಮಕ್ಕಳಿಗೆ ಸಮಯ ನೀಡಬೇಕು. ಇಂದಿನ ದಿನಗಳಲ್ಲಿ ಮಕ್ಕಳು ಒಂದು ಕಡೆ ಆದರೆ, ಪಾಲಕರ ನಡೆ ಇನ್ನೊಂದು ಕಡೆ ಆಗುತ್ತಿದೆ. ಹಣ ಗಳಿಸುವ ನಿಟ್ಟಿನಲ್ಲಿ ಹತ್ತಾರು ಚಿಂತನೆ ಮಾಡುವ ಪಾಲಕರು ಮಕ್ಕಳ ಭವಿಷ್ಯದ ಕಡೆಗೂ ಗಮನ ಹರಿಸಿದರೆ ಮಾತ್ರ ಮಕ್ಕಳು ಉತ್ತಮ ವ್ಯಕ್ತಿಗಳಾಗಿ ಗುರುತಿಸಿಕೊಳ್ಳುತ್ತಾರೆ. ಇಲ್ಲವಾದರೆ ದುಷ್ಟ ದಾರಿಗೆ ಹೋಗುವ ಸಾಧ್ಯತೆಗಳು ಕೂಡ ಇರುತ್ತವೆ ಎಂದರು.
ತಾಲೂಕು ಕಸಾಪ ಕೋಶಾಧ್ಯಕ್ಷ ವೀರಶೆಟ್ಟಿ ಚೆನ್ನಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಮಕ್ಕಳು ನಾಳಿನ ಪ್ರಜೆಗಳು. ಅವರಿಗೆ ಉತ್ತಮ ಮಾರ್ಗದರ್ಶನ ನೀಡುವುದರೊಂದಿಗೆ ಉತ್ತಮ ವಿದ್ಯಾರ್ಥಿಗಳಾಗಿ ಗುರುತಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಪ್ರೋತ್ಸಾಹಿಸಬೇಕು. ನಮ್ಮ ಇಲಾಖೆಯ ಸಿಬ್ಬಂದಿಯವರ ಮಕ್ಕಳನ್ನು ಗೌರವಿಸುವುದು ನಮಗೆ ಹೆಮ್ಮೆ. ಇದರಿಂದ ಎಲ್ಲರೊಂದಿಗೆ ಭಾವನಾತ್ಮಕವಾದ ಸಂಬಂಧ ಬೆಳೆಯಲು ಸಾಧ್ಯವಾಗುತ್ತದೆ ಎಂದರು.
ಈ ವೇಳೆ ರೋನಕ್ ರಾಜಶೇಖರ ಪಾಟೀಲ, ಸುಮಾ ಕಾಶೀನಾಥ ಸಪಾಲ, ಸೋಹಮ್ ಸಂಜಯ ಮಲ್ಗಿಕರ, ಪ್ರಜ್ವಲ ಸೂರ್ಯಕಾಂತ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ರಮೇಶ, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕ ಕಾಶೀನಾಥ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುಭಾಷ ಮುಧಾಳೆ, ಸಂಗಪ್ಪಾ ಕಾಂಬ್ಳೆ, ಶ್ರಾವಣ ಜಾಧವ, ಓಂಕಾರ ಮಲ್ಕೆಕರ, ಪ್ರವೀಣಕುಮಾರ, ಜಿಲ್ಲಾ ಕಚೇರಿಯ ಸಿಬ್ಬಂದಿ ಗೋರಕನಾಥ, ರಾಜೇಶ, ರಮೇಶ, ಇಮಾನವೆಲ್, ಅಬ್ದುಲ್ ಹೈ, ಸಂಜೀವಕುಮಾರ, ಸೂರ್ಯಕಾಂತ ಪಾಟೀಲ, ಕಾಶೀನಾಥ ಕಿರಣಕುಮಾರ, ಪಂಢರಿನಾಥ ಪೂಜಾರಿ, ಶಾಮರಾವ್ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.