ಪ್ರವಾಸಿ ತಾಣ ಬೀದರಗೆ ಗೈಡ್‌ ಕೊರತೆ

ಬೀದರನಲ್ಲಿವೆ ಪ್ರಾಚೀನ ಕೋಟೆ-ಸ್ಮಾರಕಗಳುತಾಣಗಳ ಇತಿಹಾಸ ತಿಳಿಸುವವರೇ ಇಲ್ಲದೇಶ-ವಿದೇಶಿ ಪ್ರವಾಸಿಗರ ಭೇಟಿ

Team Udayavani, Nov 15, 2019, 10:45 AM IST

15-November-1

„ಶಶಿಕಾಂತ ಬಂಬುಳಗೆ
ಬೀದರ:
ಗಡಿ ನಾಡು ಬೀದರ ಚಾರಿತ್ರಿಕ ಕೋಟೆ ಕೊತ್ತಲುಗಳು, ಪಾರಂಪರಿಕ ಸ್ಮಾರಕಗಳನ್ನು ಹೊಂದಿರುವ ಐತಿಹಾಸಿಕ ಪ್ರವಾಸಿ ನಗರ. ಇಲ್ಲಿನ ವೈಭವ ಕಣ್ತುಂಬಿಕೊಳ್ಳಲು ದೇಶ ಮಾತ್ರವಲ್ಲ ವಿದೇಶಿಗರು ಭೇಟಿ ನೀಡುತ್ತಾರೆ. ಆದರೆ, ಗೈಡ್‌ ಗಳ ಕೊರತೆಯಿಂದ ಸೂಕ್ತ ಮಾಹಿತಿ ಸಿಗದಿರುವುದು ಪ್ರವಾಸಿಗರಿಗೆ ನಿರಾಶೆಯನ್ನುಂಟು ಮಾಡುತ್ತಿದೆ.

ಕರುನಾಡಿನ ಮುಕುಟ ಬೀದರ ಎಂದಾಕ್ಷಣ ಅದ್ಭುತ ಪ್ರವಾಸಿ ತಾಣವೆಂದು ನೆನಪಾಗುತ್ತದೆ. ನಗರದ ನಾಲ್ಕು ದಿಕ್ಕುಗಳಲ್ಲಿಯೂ ಒಂದಿಲ್ಲೊಂದು ಸ್ಮಾರಕಗಳು, ಅಳಿದುಳಿದ ಪಳೆಯುಳಿಕೆಗಳು ಇಂದಿಗೂ ಪುರಾತನ ಇತಿಹಾಸ ಮತ್ತು ಅರಸರ ಇತಿಹಾಸಕ್ಕೆ ಸಾಕ್ಷಿಯಾಗಿ ನಿಂತಿವೆ. ಪ್ರತಿ ತಾಣಗಳು ತನ್ನದೇಯಾದ ಕಥೆ ಹೇಳುತ್ತವೆ. ಇದನ್ನು ಅರಿತುಕೊಳ್ಳಲು ದೇಶ-ವಿದೇಶದ ಸಂಶೋಧನಾ ವಿದ್ಯಾರ್ಥಿಗಳು, ತಜ್ಞರು ಮತ್ತು ಪ್ರವಾಸಿಗರು ನಿತ್ಯ ನೂರಾರು ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದರೆ, ಇವರಿಗೆ ಮಹತ್ವ, ಹಿನ್ನೆಲೆಯನ್ನು ತಿಳಿಸುವವರು ಯಾರೂ ಇಲ್ಲದಂತಾಗಿದೆ.

ಕೇಂದ್ರ ಪುರಾತತ್ವ ಇಲಾಖೆಯ ಅಧಿಧೀನದ ರಾಷ್ಟ್ರೀಯ ಸಂರಕ್ಷಿತ ಸ್ಮಾರಕವಾಗಿರುವ ಬೀದರನ ಬಹುಮನಿ ಕೋಟೆಯು ದಕ್ಷಿಣ ಭಾರತದಲ್ಲೇ ಸುಭದ್ರ ಹಾಗೂ ಭವ್ಯ ಕೋಟೆ. ಕೋಟೆ ಒಳಾಂಗಣದಲ್ಲಿ ಅದ್ಭುತ ಉದ್ಯಾನ ಹಸಿರು ಹೊದಿಸಿದಂತಾಗಿದ್ದು, ಮತ್ತಷ್ಟು ಮೆರಗನ್ನು ಹೆಚ್ಚಿಸಿದೆ. ಆದರ್ಶ ಸ್ಮಾರಕ ಪಟ್ಟಿ ಹಾಗೂ ವರ್ಲ್ಡ್ ಮೋನುಮೆಂಟ್‌ ಫಂಡ್‌ಗೆ ಆಯ್ಕೆಯಾಗಿರುವ ಬಹುಮನಿ ಕೋಟೆ ಹಲವು ಸ್ಮಾರಕಗಳನ್ನು ತನ್ನ ತೆಕ್ಕೆಯಲ್ಲಿ ಹಿಡಿದಿಟ್ಟುಕೊಂಡಿದೆ.

ಅಷ್ಟೇ ಅಲ್ಲ ಗವಾನ್‌ ಮದರಸಾ, ಬರೀದಶಾಹಿ ಗುಂಬಜ್‌ಗಳು, ಚೌಬಾರಾ, ಚೌಕಂಡಿ, ಅಷ್ಟೂರಿನ ಪಾಳು ಬಿದ್ದ ಗುಂಬಜ್‌ಗಳು, ಜಲಸಂಗಿ, ಉಮಾಪೂರ ಮತ್ತು ನಾರಾಯಣಪೂರದ ದೇವಸ್ಥಾನ ಸೇರಿದಂತೆ ಅನೇಕ ತಾಣಗಳು ತನ್ನದೇಯಾದ ಪರಂಪರೆ ಹೊಂದಿದ್ದು, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿವೆ. ಇವುಗಳನ್ನು ಹುಡುಕಿಕೊಂಡು ಬರುವ ಪ್ರವಾಸಿಗರು ವೀಕ್ಷಣೆಗಾಗಿ ಹರಸಾಹಸ ಪಡುತ್ತಿದ್ದಾರೆ. ಹೈದ್ರಾಬಾದ್‌ ಸಮೀಪದಲ್ಲಿರುವುದರಿಂದ ಅಲ್ಲಿನ ಮತ್ತು ಅಲ್ಲಿಗೆ ಬರುವ ವಿದೇಶಿಗರು ಬೀದರಗೆ ಭೇಟಿ ನೀಡುತ್ತಾರೆ. ಅಮೆರಿಕ, ಫ್ರಾನ್ಸ್‌, ಬೆಲ್ಜಿಯಂ, ಶ್ರೀಲಂಕಾ ಸೇರಿ ಹಲವು ದೇಶದ ಪ್ರವಾಸಿಗರ ತಂಡ ಬರುತ್ತದೆ.

ಕೈಯಲ್ಲೊಂದು ಮಾಹಿತಿ ಪುಸ್ತಕ, ಕೊರಳಲ್ಲಿ ಕ್ಯಾಮೆರಾ ಹಾಕಿಕೊಂಡು ನಗರದಲ್ಲಿ ಸುತ್ತಾಡುವ ಪ್ರವಾಸಿಗರಿಗೆ ಮಾಹಿತಿ ಕೊಡಬಲ್ಲ ಗೈಡ್‌ಗಳು ಇಲ್ಲದ ಕಾರಣ ಏನು ನೋಡಬೇಕೆಂಬ ಗೊಂದಲದಿಂದ ಪರದಾಡಿ, ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕೆಲವೊಮ್ಮೆ ಹೈದರಾಬಾದನಿಂದ ಗೈಡ್‌ಗಳನ್ನು ಜತೆಯಲ್ಲಿ ಕರೆದುಕೊಂಡು ಬಂದರೂ ತಪ್ಪು ಮಾಹಿತಿ ನೀಡುತ್ತಿರುವ ಮಾತುಗಳು ಕೇಳಿಬಂದಿವೆ.

ಹಿಂದೆ ಜಿಲ್ಲಾ ಧಿಕಾರಿಯಾಗಿದ್ದ ಡಾ| ಪಿ.ಸಿ. ಜಾಫರ್‌ ಅವರು ಗೈಡ್‌ಗಳ ಕೊರತೆ ನೀಗಿಸಲು ಮುಂದಾಗಿದ್ದರು. ಎಸ್‌ಸಿ-ಎಸ್‌ಟಿಯ 50 ಯುವಕರಿಗೆ ಗೈಡ್‌ಗಳ ತರಬೇತಿ ಕಲ್ಪಿಸಿಕೊಟ್ಟು, ಆ ಮೂಲಕ ಸ್ವಾವಲಂಬಿ ಜೀವನ ನಡೆಸಲು ಅವಕಾಶ ಮಾಡಿಕೊಟ್ಟಿದ್ದರು. ಆದರೆ, ತರಬೇತಿ ಪಡೆದವರಲ್ಲಿ ಯಾರೂ ಗೈಡ್‌ಗಳಾಗಿ ವೃತ್ತಿ ನಡೆಸಲು ಆಸಕ್ತಿ ತೋರಲೇ ಇಲ್ಲ. ನಂತರ ಜಿಲ್ಲಾಡಳಿತ ಅಥವಾ ಪುರಾತತ್ವ ಇಲಾಖೆ ಆಗಲಿ ಇಂಥ ಯಾವುದೇ ಪ್ರಯತ್ನಕ್ಕೆ ಮುಂದಾಗಲಿಲ್ಲ. ಹಾಗಾಗಿ ಗೈಡ್‌ಗಳ ಕೊರತೆ ಹಾಗೆಯೇ ಮುಂದುವರೆದಿದೆ.

ಪ್ರವಾಸೋದ್ಯಮ ಬೆಳವಣಿಗೆಗೆ ವಿಫುಲ ಅವಕಾಶ ಹೊಂದಿರುವ ಬೀದರನಲ್ಲಿ ಗೈಡ್‌ಗಳ ಕೊರತೆಯೂ ಸಹ ತೊಡಕಾಡುತ್ತಿದೆ. ಅಧಿ ಕಾರಿಗಳ ನಿರ್ಲಕ್ಷ್ಯದಿಂದ ಬೀದರ ಕುರಿತು ತಪ್ಪು ಸಂದೇಶ ರವಾನೆಯಾಗುವ ಸಾಧ್ಯತೆಯೂ ಇದೆ. ಈಗಲೇ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕಿದೆ. ರಾಜ್ಯದ ಇತರ ಪಾರಂಪರಿಕ ತಾಣಗಳಂತೆ ಬೀದರನಲ್ಲೂ ಗೈಡ್‌ಗಳನ್ನು ನೇಮಿಸಬೇಕಿದೆ.

ಟಾಪ್ ನ್ಯೂಸ್

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.