ಜಿಲ್ಲೆಯಲ್ಲಿ ಕಾವೇರಿದ ಚುನಾವಣೆ ಕದನ
2018 ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಶೇ. 45.59, ಬಿಜೆಪಿ ಶೇ.38.87ರಷ್ಟು ಮತ
Team Udayavani, Apr 11, 2019, 12:48 PM IST
ಬೀದರ: ಬರದ ನಾಡು ಎಂದೇ ಖ್ಯಾತಿ ಪಡೆದ ಗಡಿ ಜಿಲ್ಲೆ ಬೀದರನಲ್ಲಿ ಬಿಸಿಲ
ಝಳ ದಿನದಿಂದ ದಿನಕ್ಕೆ ಹೆಚ್ಚಾದಂತೆ ಚುನಾವಣೆ ಕಾವೂ ಕೂಡ ಹೆಚ್ಚಾಗುತ್ತಿದೆ. ಕಾಂಗ್ರೆಸ್-ಬಿಜೆಪಿ ಎರಡು ಪಕ್ಷಗಳು ಸಮಯ ವ್ಯರ್ಥ ಮಾಡದೇ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಚರಿಸಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿ ಪತ್ಯ ಮೆರೆದಿದ್ದು, ಇದೀಗ ಆ ಮತಗಳನ್ನು ತಮ್ಮ ಪಕ್ಷದ ಕಡೆಗೆ ವಾಲಿಸಬೇಕೆಂದು ಬಿಜೆಪಿ ಪ್ರಯತ್ನಿಸುತ್ತಿದೆ.
ಬೀದರ ಲೋಕಸಭೆ ವ್ಯಾಪ್ತಿಯ 8 ವಿಧಾನಸಭೆ ಕ್ಷೇತ್ರಗಳಲ್ಲಿ ಕಳೆದ ವರ್ಷ
ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಶೇ.45.59 ಮತ ಪಡೆದಿದ್ದರೆ,
ಬಿಜೆಪಿ ಶೇ.38.87 ಮತ ಪಡೆದಿತ್ತು. ಕಾಂಗ್ರೆಸ್ ಐದು ಕ್ಷೇತ್ರದಲ್ಲಿ ಜಯ
ಗಳಿಸಿತ್ತು. ಆದರೆ, ಬಿಜೆಪಿ ಕೆವಲ ಎರಡು ಕ್ಷೇತ್ರದಲ್ಲಿ ಮಾತ್ರ ಗೆಲವು ಕಂಡಿತ್ತು.
ಯಾರಿಗೆ ಎಷ್ಟು ಲಾಭ?: ಬೀದರ ಲೋಕಸಭೆ ವ್ಯಾಪ್ತಿಯ ಎಂಟು
ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 5 ಕಡೆ ವಿಜಯಿಯಾದರೆ,
ಬಿಜೆಪಿ ಎರಡು ಕಡೆ ಹಾಗೂ ಜೆಡಿಎಸ್ ಒಂದು ಕಡೆ ತನ್ನ ಶಾಸಕರನ್ನು ಹೊಂದಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಇರುವುದರಿಂದ ಕಾಂಗ್ರೆಸ್ ಪಕ್ಷ ಸೂಕ್ತವಾಗಿ ಬಳಸಿಕೊಂಡರೆ ಹೆಚ್ಚಿನ ಬಲ ಬರಬಹುದಾಗಿದೆ. ಅಲ್ಲದೆ, ಚಿಂಚೋಳಿ ಶಾಸಕ ಜಾಧವ್ ಬಿಜೆಪಿಗೆ ಸೇರ್ಪಡೆಯಾಗಿರುವುದು ಭಗವಂತ್ ಖೂಬಾಗೆ ಬಲ ಬಂದಂತಾಗಿದೆ.
ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳು ಬೇರೆ ಬೇರೆ ಆಧಾರದಲ್ಲಿ
ನಡೆಯುತ್ತವೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿವೆ.
ವಿಧಾನಸಭೆ ಕ್ಷೇತ್ರವಾರು ವಿವರ: ಲೋಕಸಭೆ ಚುನಾವಣೆಯಲ್ಲಿ ಒಟ್ಟಾರೆ,
17,50,370 ಮತದಾರರು ಹಕ್ಕು ಹೊಂದಿದ್ದಾರೆ. 8 ವಿಧಾನಸಭೆ ಕ್ಷೇತ್ರದಲ್ಲಿ
ಒಟ್ಟಾರೆ 1,999 ಮತ ಕೇಂದ್ರಗಳಲ್ಲಿ ಮತದಾನ ನಡೆಯಲಿದೆ.
ದುರ್ಯೋಧನ ಹೂಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.