ಖೂಬಾ ಹುಟ್ಟೂರಲ್ಲಿ ಸಂಭ್ರಮಾಚರಣೆ
ಔರಾದ-ಕಮಲನಗರ ತಾಲೂಕಿನ ಗ್ರಾಮಗಳಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ
Team Udayavani, May 25, 2019, 10:53 AM IST
ಔರಾದ: ಭಗವಂತ ಖೂಬಾ ಅವರು ಎರಡನೇ ಬಾರಿಗೆ ಸಂಸರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪಟ್ಟಣದ ಖೂಬಾ ಬಡಾವಣೆಯಲ್ಲಿ ವಿಜಯೋತ್ಸವ ಆಚರಿಸಲಾಯಿತು.
ಔರಾದ: ಅಮರವಾಡಿಯ ಭೂಮಿಪುತ್ರ ಭಗವಂತ ಖೂಬಾ ಅವರು ಬಹುಮತದೊಂದಿಗೆ ಎರಡನೇ ಬಾರಿಗೆ ಸಂಸರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಹುಟ್ಟೂರಿನಲ್ಲಿ ಅದ್ಧೂರಿ ಜನರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.
ಭಗವಂತ ಖೂಬಾ ಅವರು ಔರಾದ ಪಟ್ಟಣದ ನಿವಾಸಿಯಾಗಿದ್ದು, ಸಂಘ ಸಂಸ್ಥೆಗಳಲ್ಲಿ ಉತ್ತಮ ಕೆಲಸ ಮಾಡಿದ್ದರಿಂದ ಪಕ್ಷ ಅವರನ್ನು ಗುರುತಿಸಿ, ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ವಿರುದ್ಧ ಸ್ಪರ್ಧೆ ಮಾಡುವಂತೆ ಆದೇಶ ಮಾಡಿದಾಗ, ಪಕ್ಷದ ವರಿಷ್ಠರ ಆದೇಶಕ್ಕೆ ತಲೆ ಬಾಗಿ, ಶಾಸಕ ಪ್ರಭು ಚವ್ಹಾಣ ಅವರ ಸಹಕಾರದೊಂದಿಗೆ ಗೆಲುವು ಸಾಧಿಸಿದ್ದರು. ಅದರಂತೆ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಿರುದ್ಧ 33 ಸಾವಿರ ಮತಗಳ ಅಂತರದಿಂದ ಜಿಲ್ಲೆಯಲ್ಲಿ ದಾಖಲೆಯ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಔರಾದ ತಾಲೂಕಿನ ಮೊಮ್ಮಗನಾಗಿದ್ದಾರೆ. ಅದರಂತೆ ಸಂಸದ ಭಗವಂತ ಖೂಬಾ ಪಟ್ಟಣದ ನಿವಾಸಿಯಾಗಿದ್ದು, ತಾಲೂಕಿನ ಜನರು ಮೊಮ್ಮಗನಿಗಿಂತ ಮಗನ ಮೇಲೆ ಹೆಚ್ಚು ಪ್ರೀತಿ ತೋರಿಸಿದ್ದಾರೆ. ಹೀಗಾಗಿಯೇ ತಾಲೂಕಿನಲ್ಲಿ 33 ಸಾವಿರ ಮತಗಳ ಲೀಡ್ ಸಿಕ್ಕಿದೆ.
ಎರಡು ತಾಲೂಕಿನಲ್ಲಿ ಸಂಭ್ರಮ:ಔರಾದ ಹಾಗೂ ಕಮಲನಗರ ತಾಲೂಕಿನ ಪ್ರತಿಯೊಂದು ಗ್ರಾಮಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಪ್ರಭು ಚವ್ಹಾಣ, ಖೂಬಾ ಮತ್ತು ಪ್ರಧಾನಿ ಮೋದಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು. ಪಟ್ಟಣದ ಖೂಬಾ ಬಡಾವಣೆಯಲ್ಲಿ ಕುಟುಂಬ ಸದಸ್ಯರು, ಗೃಹಿಣಿಯರು ಮನೆ ಮಗನ ಗೆಲುವಿಗೆ ಕುಣಿದು ಕುಪ್ಪಳಿಸಿದರು.
ಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಮೂರು ಗುಂಪಾಗಿ ಕೆಲಸ ಮಾಡಿರುವಾಗ ಬಿಜೆಪಿ ಶಾಸಕ ಪ್ರಭು ಚವ್ಹಾಣ ಏಕಾಂಗಿಯಾಗಿ ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಕಠಿಣ ಶ್ರಮ ಪಟ್ಟಿರುವುದರಿಂದ ಅಧಿಕ ಮತಗಳು ಬಂದಿವೆ. ಖೂಬಾ ಸಹೋದರರು ಕೂಡ ಈ ಬಾರಿಯ ಚುನಾವಣೆಯಲ್ಲಿ ಶಕ್ತಿ ಮೀರಿ ಕೆಲಸ ಮಾಡಿದ್ದಾರೆ. ಎಡನೇ ಅವಧಿಗೆ ಆಯ್ಕೆಯಾದ ಸಂಸದರು, ಪಟ್ಟಣದಲ್ಲಿ ಜನರಿಗೆ ಈ ಹಿಂದೆ ನೀಡಿದ ಭರವಸೆಗಳನ್ನು ಎರಡನೇ ಅವಧಿಯಲ್ಲಿ ಈಡೇರಿಸುತ್ತಾರೆ ಎನ್ನುವುದು ಜನರ ನಿರೀಕ್ಷೆಯಾಗಿದೆ.
ಹಿಂದೆ ನೀಡಿದ ಭರವಸೆಗಳು: ಉದ್ಭವಲಿಂಗ ಅಮರೇಶ್ವರ ಮಹಾದ್ವಾರ ನಿರ್ಮಾಣ, ಬೀದರ-ನಾಂದೇಡ ರೈಲ್ವೆ ಮಾರ್ಗ, ಬೀದರ-ನಾಂದೇಡ್ ಅಂತಾರಾಜ್ಯ ಹೆದಾರಿ ನಿರ್ಮಾಣ, ದೈನಿಕರ ತರಬೇತಿ ಕೇಂದ್ರ ಸೇರಿದಂತೆ ಪಟ್ಟಣದ ಜನರಿಗೆ ಶಾಶ್ವತ ಕೆಲಸ ಸಿಗುವ ಉದ್ದೇಶದಿಂದ ಕಂಪನಿ ನಿರ್ಮಾಣ ಮಾಡುವ ಕೆಲಸಗಳನ್ನು ಸಂಸದರು ಈ ಅವಧಿಯಲ್ಲಿ ಮಾಡುತ್ತಾರೆ ಎನ್ನುವುದು ಜನರ ಆಶಯವಾಗಿದೆ.
ತಾಲೂಕಿನ ಜನರಿಗೆ ಈ ಹಿಂದೆ ನೀಡಿದ ಎಲ್ಲ ಭರವಸೆಗಳನ್ನು ಎರಡನೇ ಅವಧಿಯಲ್ಲಿ ಈಡೇರಿಸುತ್ತೇನೆ. ತಾಲೂಕಿನ ಹಾಗೂ ಬೀದರ ಜಿಲ್ಲೆಯ ಜನರು ತೋರಿದ ಪ್ರೀತಿ, ವಿಶ್ವಾಸ ಜೀವನ ಪೂರ್ತಿ ಮರೆಯಲು ಸಾಧ್ಯವಿಲ್ಲ.
•ಭಗವಂತ ಖೂಬಾ, ಸಂಸದರು
ಚುನಾವಣೆಯಲ್ಲಿ ತಾಲೂಕಿನ ಜನರು ಹಾಗೂ ಬಿಜೆಪಿ ಕಾರ್ಯಕರ್ತರು ನಿರಂತರ ದುಡಿದಿರುವ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಇಷ್ಟೊಂದು ದಾಖಲೆಯ ಮತಗಳ ಅಂತರದಿಂದ ಗೆಲುವು ಸಾಸಿದ್ದಾರೆ. ಮತದಾರರ ನಂಬಿಕೆಗೆ ನಾವು ನಮ್ಮ ಪಕ್ಷ ಋಣಿಯಾಗಿದ್ದೇವೆ.
•ಪ್ರಭು ಚವ್ಹಾಣ, ಶಾಸಕ
ರವೀಂದ್ರ ಮುಕ್ತೇದಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.