ಯೋಜನೆ ಸದ್ಬಳಕೆಯಾಗಲಿ: ದಯಾನಂದ
ಜಿಲ್ಲೆಯ ಯುವಕ-ಯುವತಿ ಸಂಘಗಳಿಗೆ ವಿವಿಧ ಕ್ರೀಡಾ ಸಾಮಗ್ರಿ ವಿತರಣೆ
Team Udayavani, Jul 29, 2019, 12:42 PM IST
ಬೀದರ: ನಗರದ ಮೈಲೂರ್ ನೆಹರು ಯುವ ಕೇಂದ್ರದಿಂದ ಜಿಲ್ಲೆಯ ಯುವ ಸಂಘಗಳ ಪದಾಧಿಕಾರಿಗಳಿಗೆ ಕ್ರೀಡಾ ಸಾಮಗ್ರಿ ವಿತರಿಸಲಾಯಿತು.
ಬೀದರ: ಜಿಲ್ಲೆಯ ನೋಂದಾಯಿತ ಯುವ ಸಂಘ ಹಾಗೂ ಯುವತಿ ಮಂಡಳಿಗಳು ನೆಹರು ಯುವ ಕೇಂದ್ರದ ಯೋಜನೆಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ನೆಹರು ಯುವ ಕೇಂದ್ರದ ಉಪ ನಿರ್ದೇಶಕ ಡಿ.ದಯಾನಂದ ಹೇಳಿದರು.
ನಗರದ ಮೈಲೂರ್ ನೆಹರು ಯುವ ಕೇಂದ್ರದಿಂದ ನಡೆಸ ಸಮಾರಂಭದಲ್ಲಿ ಜಿಲ್ಲೆಯ ಯುವಕ ಸಂಘಗಳು ಹಾಗೂ ಯುವತಿ ಮಂಡಳಿಗಳಿಗೆ ವಿವಿಧ ಕ್ರೀಡಾ ಸಾಮಗ್ರಿ ವಿತರಿಸಿ ಅವರು ಮಾತನಾಡಿದರು.
29 ವರ್ಷದೊಳಗಿರುವ ಜಿಲ್ಲೆಯ ನೋಂದಾಯಿತ ಯುವ ಸಂಘಗಳು ಹಾಗೂ ಯುವತಿ ಮಂಡಳಿಗಳ ಪದಾಧಿಕಾರಿಗಳು ನೆಹರು ಯುವ ಕೇಂದ್ರ ಸಂಘಟನೆ ನಿಯಮದಡಿ ನೋಂದಾಯಿಸಿಕೊಳ್ಳಬಹುದು. ಎಸ್‌ಬಿಎಸ್‌ಐ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಘದ ಕನಿಷ್ಟ 10 ಸದಸ್ಯರ ಪ್ರತ್ಯೇಕ ಪಟ್ಟಿಯನ್ನು ಇಲಾಖೆಗೆ ಸಲ್ಲಿಸಿ, ಈ ತಿಂಗಳ 31ರೊಳಗೆ ಆ ಗ್ರಾಮ, ಪಟ್ಟಣ ಅಥವಾ ನಗರ ಪ್ರದೇಶದಲ್ಲಿನ ಸಾರ್ವಜನಿಕ ಸ್ಥಳ ಗುರುತಿಸಿ ಸ್ವಚ್ಛಗೊಳಿಸುವ ಕಾರ್ಯ ನಡೆಸುವ ಮೂಲಕ ಸಕ್ರಿಯವಾಗಿ ಭಾಗವಹಿಸುವ ಯುವಕ, ಯುವತಿ ಸಂಘಗಳಿಗೆ ಜಿಲ್ಲಾ ಮಟ್ಟದ, ರಾಜ್ಯ ಮಟ್ಟದ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿ ನೀಡಲಾಗುತ್ತದೆ ಎಂದರು.
ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ದಿನೋತ್ಸವ ಅಂಗವಾಗಿ ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಇಲಾಖೆಯು ನೆಹರು ಯುವ ಕೇಂದ್ರದ ನೋಂದಾಯಿತ ಯುವಜನರಿಗಾಗಿ ತಾಲೂಕು ಮಟ್ಟದಿಂದ ರಾಷ್ಟ್ರ ಮಟ್ಟದ ವರೆಗೆ ‘ದೇಶಭಕ್ತಿ ಹಾಗೂ ರಾಷ್ಟ್ರಾಭಿವೃದ್ಧಿಯಲ್ಲಿ ಯುವಜನರು’ ಎಂಬ ವಿಷಯವಾಗಿ ಆಂಗ್ಲ ಹಾಗೂ ಹಿಂದಿ ಭಾಷೆಯಲ್ಲಿ ಭಾಷಣ ಸ್ಪರ್ಧೆ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಯುವ ಸಮನ್ವಯಾಧಿಕಾರಿ ಪಿ.ಶ್ರೀನಿವಾಸ ಮಾತನಾಡಿ, ಜಿಲ್ಲೆಯಲ್ಲಿ ಈ ವರ್ಷದಿಂದ ಒಟ್ಟು 18 ರಾಷ್ಟ್ರ ಯುವ ಪಡೆ ಕಾರ್ಯಕರ್ತರನ್ನು ನೇಮಿಸಿಕೊಳ್ಳಲಾಗುತ್ತಿದೆ. ಈಗಾಗಲೇ ಬೀದರ್ ಗ್ರಾಮೀಣ ಹಾಗೂ ನಗರಕ್ಕೆ ಸಂಬಂಧಪಟ್ಟಂತೆ ಕಾರ್ಯಕರ್ತರನ್ನು ನಿಯೋಜಿಸಲಾಗಿದೆ. ಭಾಲ್ಕಿ, ಹುಮನಾಬಾದ್, ಹುಲಸೂರ ಹಾಗೂ ಚಿಟಗುಪ್ಪ ತಾಲೂಕುಗಳಲ್ಲಿ ಕಾರ್ಯ ನಿರ್ವಹಿಸಲು ತಲಾ ಇಬ್ಬರಂತೆ 29 ವರ್ಷದೊಳಗಿನ ಸಾಮಾಜಿಕ ಕಳಕಳಿಯುಳ್ಳ ಯುವಕ, ಯುವತಿಯರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಈ ತಿಂಗಳ 31ರೊಳಗಾಗಿ ಆಸಕ್ತರು ನಿಗದಿತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಹೇಳಿದರು.
ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಶಿವಕುಮಾರ ಸ್ವಾಮಿ ಪ್ರಾಸ್ತಾವಿಕ ಮಾತನಾಡಿ, 1978ರಿಂದ ಬೀದರ್ ಜಿಲ್ಲೆಯ ಯುವಕ, ಯುವತಿಯರ ಸರ್ವಾಂಗೀಣ ವಿಕಾಸಕ್ಕಾಗಿ ನೆಹರು ಯುವ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಇಲ್ಲಿ ಸೇವೆ ಸಲ್ಲಿಸುವ ರಾಷ್ಟ್ರೀಯ ಯುವ ಪಡೆ ಕಾರ್ಯಕರ್ತರು ಇದೊಂದು ವೃತ್ತಿ ಎಂದು ಪರಿಗಣಿಸದೆ, ಸಮಾಜ ಸೇವೆ ಎಂದು ಪರಿಗಣಿಸಬೇಕು ಎಂದು ಹೇಳಿದರು.
ರಾಷ್ಟ್ರೀಯ ಜಾನಪದ ಬುಡಕಟ್ಟು ಹಾಗೂ ಕಲಾ ಪರಿಷತ್ ಕಾರ್ಯದರ್ಶಿ ರಾಜಕುಮಾರ ಹೆಬ್ಟಾಳೆ ಮಾತನಾಡಿ, ಜಿಲ್ಲೆಯಲ್ಲಿ ನೆಹರು ಯುವ ಕೇಂದ್ರ 3 ದಶಕಕ್ಕೂ ಅಧಿಕ ಕಾಲ ಸೇವೆ ಸಲ್ಲಿಸುತ್ತಿದ್ದರೂ ಇಲ್ಲಿಯ ವರೆಗೆ ಸ್ವಂತ ಕಟ್ಟಡ ಹೊಂದದಿರುವುದು ವಿಪರ್ಯಾಸ. ಜಿಲ್ಲಾಡಳಿತದಿಂದ ನಿವೇಶನ ಪಡೆದರೆ, ಸಾಂಸ್ಕೃತಿ ಇಲಾಖೆಯಿಂದ 25 ಕೋಟಿ ಅನುದಾನ ಪಡೆಯಬಹುದಾಗಿದೆ ಎಂದರು.
ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ರಾಜಕುಮಾರ ಪಸಾರ್ ಮಾತನಾಡಿ, ಸಮಾಜ ಪರಿವರ್ತನೆಯಲ್ಲಿ ಯುವ ಜನರ ಪಾತ್ರ ಮಹತ್ವದ್ದಾಗಿದ್ದು, ನೆಹರು ಯುವ ಕೇಂದ್ರ ಕಳೆದ ಮೂವತ್ತು ವರ್ಷಗಳಿಂದ ಯುವಜನರಿಗೆ ನುರಿತ ತರಬೇತಿ ನೀಡಿ ಸಶಕ್ತರನ್ನಾಗಿ ಮಾಡುತ್ತಲಿದ್ದು, ಸ್ವಾರ್ಥದ ಬೆನ್ನು ಹತ್ತಿರುವ ಇಂದಿನ ಯುವಜನತೆ ನಮ್ಮಂತಹ ಹಿರಿಯರ ಮಾರ್ಗದರ್ಶನ ಪಡೆದು ಸಶಕ್ತರಾಗಬೇಕು ಎಂದು ಹೇಳಿದರು.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿವಯ್ಯ ಸ್ವಾಮಿ, ಪ್ರಭುಲಿಂಗ ಬಿರಾದಾರ, ಅಂಬೇಡ್ಕರ್ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ ವೀರಣ್ಣ ಲೋಣಿ, ಇಲಾಖೆಯ ಸಿಬ್ಬಂದಿ ಮೈನೋದ್ದಿನ್, ಯುವ ಸಂಘ, ಸಂಸ್ಥೆಗಳ ಪ್ರಮುಖರಾದ ಗಂಗಮ್ಮ ಬಾಬುರಾವ್ ಔರಾದ್, ವಂದನಾ ಖೇರ್ಡಾ, ರೇಣುಕಾ ಪಾಟೀಲ, ರಿಯಾಜಪಾಶಾ ಕೊಳ್ಳುರ್ ಸೇರಿದಂತೆ ಇಲಾಖೆಯ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ
Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ
Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
PAK Vs SA: ಸರಣಿ ಕ್ಲೀನ್ ಸ್ವೀಪ್ ಗೈದ ಪಾಕಿಸ್ಥಾನ
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
BCCI: ಇನ್ನೆರಡು ಟೆಸ್ಟ್ ನಿಂದ ಮೊಹಮ್ಮದ್ ಶಮಿ ಹೊರಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.