ಸರ್ಕಾರಿ ವೈದ್ಯರ ಖಾಸಗಿ ಕರ್ತವ್ಯ ಸಹಿಸಲ್ಲ

ಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ ಅಧ್ಯಕ್ಷೆ ಗೀತಾ ಚಿದ್ರಿ ತಾಕೀತು

Team Udayavani, Jul 12, 2019, 3:51 PM IST

12-JUly-34

ಬೀದರ: ಜಿಲ್ಲಾ ಪಂಚಾಯತ ಅಧ್ಯಕ್ಷೆ ಗೀತಾ ಚಿದ್ರಿ ನೇತೃತ್ವದಲ್ಲಿ ಮಾಸಿಕ ಕೆಡಿಪಿ ಸಭೆ ನಡೆಯಿತು.

ಬೀದರ: ಸ್ವಚ್ಛತೆ ಕೊರತೆಯಿಂದಾಗಿ ಸಾಕಷ್ಟು ರೋಗಗಳು ಬರುತ್ತವೆ. ಹಾಗಾಗಿ ಜಿಲ್ಲೆಯಲ್ಲಿರುವ ಎಲ್ಲ ಸರ್ಕಾರಿ ಆಸ್ಪತ್ರೆಗಳನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು. ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ದೂರುಗಳಿವೆ. ಹೀಗಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷೆ ಗೀತಾ ಪಂಡಿತರಾವ್‌ ಚಿದ್ರಿ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್‌ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಸ್ಪತ್ರೆಗೆ ಬರುವ ರೋಗಿಗಳಿಗೆ ಉಚಿತವಾಗಿ ಬೆಡ್‌ ಮಾತ್ರ ನೀಡಲಾಗುತ್ತಿದ್ದು ಔಷಧಕ್ಕೆ ಹೊರಗಡೆ ಕಳುಹಿಸಲಾಗುತ್ತಿದೆ ಏಕೆ ಎಂದು ಪ್ರಶ್ನಿಸಿದರು. ತಾಲೂಕು ಆಸ್ಪತ್ರೆಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಇರುವ ದೂರುಗಳು ಬರುತ್ತಿವೆ. ಇರುವ ವೈದ್ಯರು ಸಹ ಸರಿಯಾದ ಸಮಯಕ್ಕೆ ಸೇವೆಯಲ್ಲಿ ಸಿಗುತ್ತಿಲ್ಲ ಎಂದು ಅನೇಕರು ದೂರುತ್ತಿದ್ದಾರೆ. ಖಾಸಗಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ವೈದ್ಯರ ವಿರುದ್ಧ ಆರೋಗ್ಯ ಅಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕು ಎಂದು ಸೂಚಿಸಿದ ಅವರು, ಕಾಲಕಾಲಕ್ಕೆ ವೈದ್ಯರ ಸಭೆ ನಡೆಸಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಂ.ಎ.ಜಬ್ಟಾರ ಅವರಿಗೆ ನಿರ್ದೇಶನ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿಎಚ್ಒ ಜಬ್ಟಾರ್‌ ಅವರು, ಜಿಲ್ಲಾಸ್ಪತ್ರೆ ಸೇರಿದಂತೆ ಸಾರ್ವಜನಿಕ ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಅಲ್ಲೇ ಔಷದ ನೀಡಿ ಚಿಕಿತ್ಸೆ ನೀಡಲಾಗುತ್ತಿದೆ. ಹೊರಗಡೆ ಔಷಧಕ್ಕೆ ಕಳುಹಿಸುತ್ತಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ಅಂಥ ಘಟನೆ ಬೆಳಕಿಗೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಮಜಾಯಿಸಿ ನೀಡಿದರು.

ವಸತಿ ಯೋಜನೆ: ಜಿಲ್ಲಾ ಮಟ್ಟದ ಅಧಿಕಾರಿಗಳು ಕಾಲಕಾಲಕ್ಕೆ ವಸತಿ ನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸರ್ಕಾರದ ಎಲ್ಲ ಸೌಲಭ್ಯಗಳು ಸಮರ್ಪಕವಾಗಿ ಸಿಗುವಂತೆ ನೋಡಿಕೊಳ್ಳಬೇಕು ಎಂದು ಗೀತಾ ಚಿದ್ರಿ ಅವರು, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ಕೆಲವು ವಸತಿ ನಿಲಯಗಳಿಗೆ ಭೇಟಿ ನೀಡಿದಾಗ ಶುಚಿತ್ವದ ಕೊರತೆ, ಕಳಪೆ ಆಹಾರ ನೀಡಿರುವುದು ಸೇರಿದಂತೆ ನಾನಾ ಸಮಸ್ಯೆಗಳು ಕಾಣಿಸಿವೆ. ವಸತಿ ನಿಲಯಗಳಲ್ಲಿ ಹೆಚ್ಚಾಗಿ ಬಡ ವಿದ್ಯಾರ್ಥಿಗಳೇ ಇರುವುದರಿಂದ ಸರ್ಕಾರದಿಂದ ಸಾಕಷ್ಟು ಸೌಲಭ್ಯಗಳನ್ನು ನೀಡಲಾಗಿದೆ. ಇದರ ಸದುಪಯೋಗವಾಗಬೇಕು. ವಸತಿ ನಿಲಯಗಳ ಸುಧಾರಣೆಗೆ ಪ್ರಾಯಾಣಿಕವಾಗಿ ಪ್ರಯತ್ನಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲಿ 66 ವಸತಿ ನಿಲಯಗಳಿವೆ. ಇದರಲ್ಲಿ ಸ್ವಂತ 55 ಕಟ್ಟಡಗಳಿದ್ದು, 11 ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿವೆ. 3 ಕಟ್ಟಡಗಳ ನಿರ್ಮಾಣ ಕಾಮಗಾರಿ ಚಾಲ್ತಿಯಲ್ಲಿದೆ. ಇಲಾಖೆಯ ವಸತಿ ನಿಲಯಗಳ ಫಲಿತಾಂಶ ಉತ್ತಮ ಸ್ಥಿತಿಯಲ್ಲಿದೆ. ಎಸ್ಸೆಸ್ಸೆಲ್ಸಿಯಲ್ಲಿ ಶೇ.75 ಹಾಗೂ ಪಿಯುಸಿಯಲ್ಲಿ ಶೇ.64.3ರಷ್ಟು ಫಲಿತಾಂಶ ಬಂದಿದೆ. ಇದರಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪ್ರೇಮಸಾಗರ ದಾಂಡೇಕರ್‌ ಸಭೆಗೆ ಮಾಹಿತಿ ನೀಡಿದರು.

ಅತಿಥಿ ಶಿಕ್ಷಕರ ಕೊರತೆ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಶೇಖರ್‌ ಸಭೆಗೆ ಗೈರಾಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ, ಅಧಿಕಾರಿ ಪದೇಪದೆ ಗೈರಾಗುತ್ತಿದ್ದಾರೆ. ಏನು ಕಾರಣ? ಅವರಿಂದಲೇ ಮಾಹಿತಿ ಪಡೆಯಬೇಕಿದೆ ಎಂದರು. ಬಳಿಕ ಸಹಾಯಕ ಅಧಿಕಾರಿ ಮಾತನಾಡಿ, ಜಿಲ್ಲಾದ್ಯಂತ ಶಿಥಿಲಗೊಂಡ 926 ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. ಕಟ್ಟಡಗಳ ದುರಸ್ತಿಗೆ ನಾಲ್ಕು ವರ್ಷದಿಂದ 1.20 ಕೋಟಿ ರೂ. ಅನುದಾನ ಬಂದಿದೆ ಎಂದು ವಿವರಣೆ ನೀಡಿದರು. ಪ್ರಸಕ್ತ ಸಾಲಿನಲ್ಲಿ 333 ಅತಿಥಿ ಶಿಕ್ಷಕರ ಅಗತ್ಯವಿದೆ. ಆಯಾ ಶಾಲೆಯ ಮುಖ್ಯಗುರುಗಳಿಗೆ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಮಾಹಿತಿ ನೀಡಿದರು. ಈ ವೇಳೆ ಜಿಪಂ ಅಧ್ಯಕ್ಷರು ಮಾತನಾಡಿ, ಕೊರತೆಯಿರುವ ವಿಷಯದ ಶಿಕ್ಷಕರನ್ನು ಶೀಘ್ರ ನೇಮಿಸಿಕೊಂಡು ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುಣಮಟ್ಟದ ಆಹಾರ ಸಿಗಲಿ: ಅಂಗನವಾಡಿ ಕೇಂದ್ರದ ಮಕ್ಕಳಿಗೆ ಮೆನು ಪ್ರಕಾರ ಆಹಾರ ಒದಗಿಸಬೇಕು. ಯಾವುದೇ ರೀತಿಯ ಅವ್ಯವಹಾರಗಳಿಗೆ ಅವಕಾಶ ನೀಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗೆ ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 1,893 ಅಂಗನವಾಡಿಗಳಿವೆ. 1,245 ಸ್ವಂತ ಕಟ್ಟಡದಲ್ಲಿವೆ. 492 ಬಾಡಿಗೆ ಕಟ್ಟಡಗಳಲ್ಲಿ ಹಾಗೂ ಬಾಕಿ ಇರುವ ಅಂಗನವಾಡಿಗಳು ಸರ್ಕಾರಿ ಕಚೇರಿ, ಪಂಚಾಯಿತಿ ಕಟ್ಟಡ, ಸಮುದಾಯ ಭವನ, ಶಾಲಾ ಕೊಠಡಿಗಳಲ್ಲಿ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ರೈತರ ಬೇಡಿಕೆಗೆ ಅನುಗುಣ ಸೌಲಭ್ಯ: ಜಿಲ್ಲೆಯಲ್ಲಿ ಸಾಕಷ್ಟು ರೈತರು ತೋಟಗಾರಿಕೆ ಬೆಳೆಯತ್ತ ಒಲವು ತೋರಿಸುತ್ತಿದ್ದಾರೆ. ತೋಟಗಾರಿಕೆ ಪ್ರದೇಶದಲ್ಲಿಯೂ ಹೆಚ್ಚಳವಾಗುತ್ತಿದೆ. ಇಲಾಖೆಯಿಂದ ರೈತರಿಗೆ ಬಹುವಾರ್ಷಿಕ ಬೆಳೆ, ತರಕಾರಿ, ಹಣ್ಣು, ಹೂಗಳನ್ನು ಬೆಳೆಸಲು ಪ್ರೋತ್ಸಾಹ ನೀಡಲಾಗುತ್ತದೆ. ಅಲ್ಲದೇ ರೈತರಿಗೆ ತರಬೇತಿ ಮತ್ತು ಸಹಾಯಧನ ಸೌಲಭ್ಯ ನೀಡಲಾಗುತ್ತಿದೆ. ರೈತರ ಬೇಡಿಕೆಗೆ ಅನುಗುಣ ಸರ್ಕಾರದ ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಬಾವಗೆ ತಿಳಿಸಿದರು. ಸಭೆಯಲ್ಲಿ ಪಶು ಸಂಗೋಪನೆ, ಆಯುಷ್‌, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಮೀನುಗಾರಿಕೆ, ಎಪಿಎಂಸಿ, ಪಂಚಾಯತ್‌ ರಾಜ್‌ ಎಂಜಿನೀಯರಿಂಗ್‌ ವಿಭಾಗ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಜಿಪಂ ಉಪಾಧ್ಯಕ್ಷ ಲಕ್ಷ್ಮಣ ಈಶ್ವರ ಬುಳ್ಳಾ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ, ಡಿಆರ್‌ಡಿಎ ಯೋಜನಾ ನಿರ್ದೇಶಕ ಬಸವರಾಜ ಬಕಚೋಡಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.