ಪೊಲೀಸರು ಸಮಾಜ ಮುಖೀಯಾಗಿ ಕೆಲಸ ಮಾಡಲಿ
120 ನಾಗರಿಕ ಪೊಲೀಸ್ ಪ್ರಶಿಕ್ಷಣಾರ್ಥಿಗಳು ಭಾಗಿ
Team Udayavani, Sep 4, 2019, 3:04 PM IST
ಬೀದರ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆದ ರಾಜ್ಯದ ವಿವಿಧ ಜಿಲ್ಲೆಗಳ 120 ನಾಗರಿಕ ಪೊಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮ ಜರುಗಿತು
ಬೀದರ: ಪೊಲೀಸ್ ನೌಕರಿ ಎಲ್ಲರಿಗೂ ಇರುವ ಉದ್ಯೋಗಾರ್ಹತೆ ಅಲ್ಲ. ಉತ್ತಮವಾದ ದೈಹಿಕ ಹಾಗೂ ಮಾನಸಿಕ ಸ್ಥಿತಿಗತಿ ಇದ್ದಾಗ ಮಾತ್ರ ಪೊಲೀಸ್ ವೃತ್ತಿ ಮಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಹೇಳಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆದ ರಾಜ್ಯದ ಬೇರೆ ಬೇರೆ ಜಿಲ್ಲೆಗಳ 120 ನಾಗರಿಕ ಪೊಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾಲಕ್ಕೆ ತಕ್ಕ ಹಾಗೆ ಹೊಸತನ ಕಲಿಯುವುದು ತುಂಬಾ ಅವಶ್ಯಕತೆ ಇದೆ. ಸದಾ ತೆರೆದ ಮನಸ್ಸಿನಿಂದ ಇರಬೇಕು. ಹೊಸ ಹೊಸ ಕಲಿಕೆಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಾರ್ವಜನಿಕರಲ್ಲಿ ನಾವು ಭಾಗಿಯಾದರೂ ಅವರಿಗಿಂತ ನಾವು ಭಿನ್ನರಾಗಿರುತ್ತೇವೆ. ನಾವು ದೇವರಲ್ಲ. ಸಮಾಜದ ಒಂದು ಭಾಗ. ಸಮಾಜ ಮುಖೀಯಾಗಿ ಕೆಲಸ ಮಾಡೋಣ. ಕಷ್ಟದಲ್ಲಿರುವವರಿಗೆ ಸಹಾಯ ಮಾಡೋಣ. ಸಮಯವನ್ನು ಶ್ರದ್ಧೆ ಮತ್ತು ಶಿಸ್ತಿಗೆ ಬಳಸಿಕೊಳ್ಳೋಣ. ಸಮಾಜ ನಮ್ಮ ಮೇಲೆ ಇಟ್ಟಿರುವ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡೋಣ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ.ಪಾಟೀಲ ಮಾತನಾಡಿ, ಬೀದರ ಜಿಲ್ಲೆಯಲ್ಲಿ 1994ರಲ್ಲಿ ತರಬೇತಿ ಶಾಲೆ ಆರಂಭವಾಯಿತು. ಇಲ್ಲಿಯವರೆಗೆ 9 ತಂಡಗಳಿಗೆ ತರಬೇತಿ ನೀಡಲಾಗಿದೆ. ಇದು 10ನೇ ತಂಡ. ಈ ತಂಡದಲ್ಲಿ ಸ್ನಾತಕೋತ್ತರ ಪದವಿಧರರು, ಬಿ.ಎಡ್, ಡಿ.ಎಡ್, ಬಿಪಿಎಡ್ ಕಲಿತವರೂ ಇದ್ದಾರೆ ಎಂದು ತಿಳಿಸಿದರು. ಬಹುತೇಕ ಜನರು ಅಳಲು ತೋಡಿಕೊಂಡೇ ಪೊಲೀಸ್ ಕಚೇರಿಗೆ ಬರುತ್ತಾರೆ. ಅಂಥವರಿಗೆ ನಾವು ಸ್ಪಂದಿಸೋಣ. ಸಮಾಜ ಮುಖೀಯಾಗಿ ಕೆಲಸ ಮಾಡೋಣ ಎಂದು ತಿಳಿಸಿದರು.
ಇದಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಅವರು ಪ್ರಶಿಕ್ಷಣಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸಮಾರಂಭದಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಪಾಠ ಮಾಡಿದ ಸಂಪನ್ಮೂಲ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೆನಪಿನ ಕಾಣಿಕೆ ನೀಡಲಾಯಿತು. ಕೆಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದ ಪ್ರಶಿಕ್ಷಣಾರ್ಥಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಹುಮಾನ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.