ಅಪಘಾತ ತಗ್ಗಿಸಲು ಯೋಜನೆ ರೂಪಿಸಿ

ಅಪ್ರಾಪ್ತರು ದ್ವಿಚಕ್ರ ವಾಹನ ಸವಾರಿ ಮಾಡದಂತೆ ಅರಿವು ಮೂಡಿಸಿ

Team Udayavani, Sep 22, 2019, 3:17 PM IST

22-Sepectember-14

ಬೀದರ: ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಹೇಗೆ ಕೈಗೊಳ್ಳಬಹುದು ಎಂಬುದರ ಬಗ್ಗೆ ಆಯಾ ಇಲಾಖೆಗಳು ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ. ಶ್ರೀಧರ್‌ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ರಸ್ತೆ ಸುರಕ್ಷತೆ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕುಟುಂಬದಲ್ಲಿ ಯಾರೋ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರೆ, ಆ ಕುಟುಂಬಕ್ಕೆ ಆಗುವ ನಷ್ಟವನ್ನು ಯಾರಿಂದಲೂ ಭರಿಸಲು ಸಾಧ್ಯವಾಗುವುದಿಲ್ಲ. ಇದನ್ನು ನಾವು ಅರಿತು ಜನತೆ ರಸ್ತೆ ಅಪಘಾತದಲ್ಲಿ ಸಾವುಗಳು ಆಗದಂತೆ ನೋಡಿಕೊಳ್ಳಬೇಕಾಗಿದೆ ಎಂದರು.

ರಸ್ತೆ ಸವಾರರಿಗೆ, ಜನರಿಗೆ ತೊಂದರೆ ಕೊಡುವುದು
ಉದ್ದೇಶವಲ್ಲ. ಸಾವು ನೋವು ತಡೆಯುವುದು ಮಹೋನ್ನತ ಉದ್ದೇಶವಾಗಿದೆ. ಜಿಲ್ಲೆಯಲ್ಲಿ ರಸ್ತೆ ಅಪಘಾತದಿಂದ ಜನರ ಸಾವು ಆಗದಂತೆ ನೋಡಿಕೊಳ್ಳಲು ನಾವೇನು ಮಾಡಬಹುದು ಎಂದು ಯೋಚಿಸಬೇಕಿದೆ. ಅದಕ್ಕೆ ತಕ್ಕಂತೆ ಕ್ರಿಯಾ ಯೋಜನೆ ಸಲ್ಲಿಸಬೇಕು. ಕ್ರಿಯಾ ಯೋಜನೆಯನ್ನು ಜಿಲ್ಲಾಧಿಕಾರಿ ಪರಿಶೀಲಿಸಿದ ನಂತರ ಅವರ ಮಾರ್ಗದರ್ಶನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಲಭ್ಯವಾಗಬೇಕು. ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗೆ ಬೇಕಿರುವ ಉಪಕರಣಗಳ ಮಾಹಿತಿ ಸಲ್ಲಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಶಾಲಾ ಕಾಲೇಜುಗಳಿಗೆ ಅಪ್ರಾಪ್ತ ವಿದ್ಯಾರ್ಥಿಗಳು ದ್ವಿಚಕ್ರ ವಾಹನಗಳ ಮೂಲಕ ಹೋಗುತ್ತಿರುವುದು ಕಂಡುಬಂದಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಅಗತ್ಯ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.

ದಿನಪತ್ರಿಕೆಗಳು ಹಾಗೂ ಟಿವಿ ವಾಹಿನಿಗಳಲ್ಲಿ ಸುದ್ದಿಗಳನ್ನು ಬಿಡುಗಡೆ ಮಾಡುವ ಮೂಲಕ ರಸ್ತೆ ಸುರಕ್ಷತಾ ನಿಯಮಗಳ ಕುರಿತು ವ್ಯಾಪಕ ಪ್ರಚಾರ ನೀಡುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಗವಿಸಿದ್ದಪ್ಪ ಹೊಸಮನಿ ಅವರಿಗೆ ಸೂಚಿಸಿದರು.

ವಾಹನ ಸವಾರರು ಹೆಲ್ಮೇಟ್‌ ಹಾಗೂ ನಾಲ್ಕು ಚಕ್ರಗಳ ವಾಹನ ಸವಾರರು ತಪ್ಪದೇ ಸೀಟ್‌ ಬೆಲ್ಟ್ ಧರಿಸುವುದನ್ನು ಜನತೆ ರೂಢಿಸಿಕೊಂಡಲ್ಲಿ ಅಪಘಾತಗಳಲ್ಲಿ ಉಂಟಾಗುವ ಮರಣ ಪ್ರಮಾಣವನ್ನು ಗಣನೀಯವಾಗಿ ಇಳಿಕೆ ಆಗಬಹುದು. ಹಾಗಾಗಿ ವಾಹನ ಚಾಲನಾ ಸಂದರ್ಭದಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಸಂಚಾರಿ ನಿಯಮ ಪಾಲಿಸಬೇಕು. ವಾಹನ ಚಾಲನಾ ಪ್ರಮಾಣ ಪತ್ರ, ವಿಮೆ ಸೇರಿದಂತೆ ಎಲ್ಲ ಅವಶ್ಯಕ ದಾಖಲಾತಿ ಇಟ್ಟುಕೊಂಡಿರಬೇಕು ಎಂದು ಹೇಳಿದರು.

ಅಪರ ಜಿಲ್ಲಾ ಧಿಕಾರಿ ರುದ್ರೇಶ ಗಾಳಿ, ನಗರಸಭೆ ಪೌರಾಯುಕ್ತ ಬಿ.ಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ| ಎಂ.ಎ. ಜಬ್ಟಾರ, ಲೋಕೋಪಯೋಗಿ ಇಲಾಖೆಯ ಅಧಿಕಾರಿ ಪಿ.ಆರ್‌. ಪ್ರಶಾಂತ, ಬ್ರಿಮ್ಸ್‌ ನಿರ್ದೇಶಕ ಡಾ| ಕ್ಷೀರಸಾಗರ, ಸಾ.ಶಿ.ಇ ಅಧಿಕಾರಿ ಶಿವಕುಮಾರ ಸ್ವಾಮಿ ಇದ್ದರು.

ಟಾಪ್ ನ್ಯೂಸ್

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.