ಪಶು ವಿವಿ ಕಾರ್ಯವೈಖರಿಗೆ ಅಸಮಾಧಾನ

ಸಚಿವ ಪ್ರಭು ಚವ್ಹಾಣ ದಿಢೀರ್‌ ಭೇಟಿ ವಿವಿಯಲ್ಲಿ ದೂರು ಪೆಟ್ಟಿಗೆ ಇಡಲು ಸೂಚನೆ

Team Udayavani, Nov 13, 2019, 11:54 AM IST

13-November-05

ಬೀದರ: ನಗರದ ಹೊರವಲಯದ ಕರ್ನಾಟಕ ಪಶು ವೈದ್ಯಕೀಯ ಮತ್ತು ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಮಂಗಳವಾರ ಪಶು ಸಂಗೋಪನಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ದಿಢೀರ್‌ ಭೇಟಿ ನೀಡಿದರು. ವಿವಿ ಪರಿಸರದಲ್ಲಿ ಅವ್ಯವಸ್ಥೆ, ಸಿಬ್ಬಂದಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ವಿವಿ ಆವರಣದ ಹಲವಾರು ಕಡೆಗಳಲ್ಲಿ ಸಂಚರಿಸಿದ ಸಚಿವರು, ಆಯಾ ಕಡೆಗಳಲ್ಲಿ ವಿಪರೀತ ಬೆಳೆದು ನಿಂತಿದ್ದ ಕಸದ ಗಿಡಗಳನ್ನು ಕಂಡು ಗರಂ ಆದರು. ತಾವು ನಿಯಮಿತವಾಗಿ ಎಲ್ಲ ಕಡೆ ಭೇಟಿ ನೀಡಿದರೆ ವಿವಿಯ ಆವರಣ ಹೀಗಿರುವುದಿಲ್ಲ. ವಿವಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ತಮ್ಮ ಹಿಡಿತ ಇಲ್ಲ ಎಂಬುದು ಈ ಮೂಲಕ ತಿಳಿಯುತ್ತದೆ ಎಂದು ಸಚಿವರು ಕುಲಪತಿಯವರ ಕಾರ್ಯವೈಖರಿ ಬಗ್ಗೆ ಕಿಡಿ ಕಾರಿದರು.

ದೂರು ಪೆಟ್ಟಿಗೆ ಇಡಲು ನಿರ್ಣಯ: ಬೀದರನಲ್ಲಿ ರಾಜ್ಯದ ಏಕೈಕ ವಿಶ್ವವಿದ್ಯಾಲಯ ಇರುವುದು ನಮ್ಮ ಪುಣ್ಯ. ಇಲ್ಲಿ ಎಲ್ಲ ಕಾರ್ಯವು ಪಾರದರ್ಶಕವಾಗಿ ನಡೆಯಬೇಕು. ಇದರಿಂದ ಜಿಲ್ಲೆಯ ಜನತೆಗೆ ಒಳ್ಳೆಯದಾಗಬೇಕಿದೆ. ಆದರೆ, ವಿವಿಯ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಇಲ್ಲಿನ ದೇವಣಿ ತಳಿ ಬಗ್ಗೆ ದೂರುಗಳು ಬಂದಿವೆ. ಸಿಬ್ಬಂದಿ ನೇಮಕಾತಿ ಸರಿಯಾಗಿ ನಡೆದಿಲ್ಲ ಎನ್ನುವ ದೂರುಗಳಿವೆ. ಹೀಗಾಗಿ ವಿವಿಯ ಆವರಣದಲ್ಲಿ ದೂರು ಪೆಟ್ಟಿಗೆ ಇಡಲಾಗುವುದು. ಏನೇ ದೂರು ಬಂದರೂ ಅದನ್ನು ತಾವೇ ಖುದ್ದು ಪರಿಶೀಲಿಸಬೇಕು ಎಂದು ಕುಲಪತಿಯವರಿಗೆ ಸೂಚಿಸಿದರು.

ಈ ವೇಳೆ ಸಚಿವರು ಕುಲಪತಿಗಳು, ರಿಜಿಸ್ಟ್ರಾರ್‌ ಕಾರ್ಯಾಲಯದ ಹಾಜರಾತಿ ಪರಿಶೀಲಿಸಿದರು. ಬಯೋಮೆಟ್ರಿಕ್‌ ಹಾಜರಾತಿ ಯಾಕಿಲ್ಲ ಎಂದು ಕೇಳಿದರು. ಆಯಾ ಸಿಬ್ಬಂದಿಯನ್ನು ಮಾತನಾಡಿಸಿ ಅವರ ಕಾರ್ಯವೈಖರಿ ಬಗ್ಗೆ ಮಾಹಿತಿ ಪಡೆದರು. ವಿವಿಗೆ ಸಂಬಂಧಿ ಸಿದಂತೆ ಬಂದಿರುವ ಆರ್‌ಟಿಐ ಅರ್ಜಿಗಳನ್ನು ಪರಿಶೀಲಿಸಿದ ಸಚಿವರು, ಈ ರೀತಿ ದೂರುಗಳು ಬಹಳ ಬರುತ್ತಿವೆ. ಈ ಬಗ್ಗೆ ಗಮನ ಹರಿಸಬೇಕು ಎಂದು ತಿಳಿಸಿದರು.

ಔಷಧ  ಪರಿಶೀಲನೆ: ಪಶು ವೈದ್ಯಕೀಯ ಚಿಕಿತ್ಸಾ ಸಂಕೀರ್ಣಕ್ಕೆ ತೆರಳಿದ ಸಚಿವರು, ಅಲ್ಲಿ ಪಶುಗಳಿಗೆ ನೀಡುತ್ತಿದ್ದ ಚಿಕಿತ್ಸೆಯನ್ನು ವೀಕ್ಷಿಸಿದರು. ಪಶುಗಳಿಗೆ ನೀಡುವ ಔಷಧಗಳನ್ನು ಪರಿಶೀಲಿಸಿದರು. ಗ್ರೂಪ್‌ ಡಿ ನೌಕರರ ವೇತನ ಇದುವರೆಗೆ ಆಗಿರುವುದಿಲ್ಲ ಎಂದು ಅಲ್ಲಿನ ಸಿಬ್ಬಂದಿಯೊಬ್ಬರು ಸಚಿವರ ಗಮನಕ್ಕೆ ತಂದರು. ಈ ವೇಳೆ ಜಿಪಂ ಸದಸ್ಯ ಮಾರುತಿ ಚವ್ಹಾಣ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಶಿವಕುಮಾರ ಕಟ್ಟೆ, ವಿವಿಯ ರಿಜಿಸ್ಟ್ರಾರ್‌ ಕೆ.ಸಿ.ವೀರಣ್ಣ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Bantwal ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

DK-Suresh

By Election: ಮಗನಿಗಾಗಿ ಎಚ್‌ಡಿಕೆ ನಿಮ್ಮ ಊರು ಹುಡುಕಿ ಬರುತ್ತಾರಷ್ಟೇ: ಡಿ.ಕೆ.ಸುರೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.