ವಿಜಯ ದಶಮಿ ಸಡಗರ

ಬನ್ನಿ ಮರಕ್ಕೆ ಪೂಜೆ -ಬನ್ನಿ ವಿನಿಮಯ  ಬೃಹತ್‌ ರಾವಣ ಪ್ರತಿಕೃತಿ ದಹನ

Team Udayavani, Oct 9, 2019, 2:48 PM IST

09-October-14

ಬೀದರ: ಜಿಲ್ಲಾದ್ಯಂತ ವಿಜಯ ದಶಮಿಯನ್ನು (ದಸರಾ) ಹಬ್ಬವನ್ನು ಮಂಗಳವಾರ ಸಡಗರ ಸಂಭ್ರಮ ಆಚರಿಸಲಾಯಿತು. ನಗರ ಹಾಗೂ ಪಟ್ಟಣದ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಹಬ್ಬದ ಸಂಭ್ರಮ ಹೆಚ್ಚಿತ್ತು. ವಯಸ್ಕರು ಸೇರಿದಂತೆ ಮಕ್ಕಳು ಹೊಸ ಬಟ್ಟೆಗಳನ್ನು ತೊಟ್ಟು ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಮನೆ ಮನೆಗಳಲ್ಲಿ ಸ್ಥಾಪಿಸಿದ ಘಟ ಹಾಗೂ ಬೆಳೆದು ನಿಂತ ಬೆಳೆಗೆ ವಿಶೇಷ ಪೂಜೆ ನಡೆಸಲಾಯಿತು. ಮನೆಯಲ್ಲಿನ ಆಯುಧಗಳಿಗೆ ಜನರು ಪೂಜೆ ಮಾಡಿದರೆ, ಇತರೆ ಇಲಾಖೆಗಳಲ್ಲಿ ಕೂಡ ಪೂಜೆಯ ಸಂಭ್ರಮ ಹೆಚ್ಚಿತ್ತು.

ನಗರದ ಹಳ್ಳದಕೇರಿ, ದೇವಿ ಕಾಲೋನಿ, ಮಂಗಲಪೇಟ್‌, ದರ್ಜೆಗಲ್ಲಿ, ಬ್ರಗ್ಮನವಾಡಿಯ ಭವಾನಿ ಮಂದಿರಗಳಲ್ಲಿ ವಿವಿಧ ಧಾರ್ಮಿಕ ಆಚರಣೆಗಳು ನಡೆದವು. ಸಾವಿರಾರು ಭಕ್ತರು ದೇವಸ್ಥಾನಗಳಿಗೆ ತೆರಳಿ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.

ಪರಸ್ಪರ ಶುಭ ವಿನಿಮಯ: ಗ್ರಾಮೀಣ ಪ್ರದೇಶದ ರೈತ ಬಾಂಧವರು ವಿಜಯ ದಶಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಹಬ್ಬದ ನಿಮಿತ್ತ ವಿಶೇಷವಾಗಿ ಹೋಳಿಗೆ, ಪಾಯಸ ಸೇರಿದಂತೆ ಸಿಹಿ ಪದಾರ್ಥಗಳನ್ನು ಸಿದ್ಧಪಡಿಸಿ ಕುಟುಂಬ ವರ್ಗ, ಆಪ್ತರೊಂದಿಗೆ ಸವಿದರು. ನಂತರ ಸಂಜೆ ಮಕ್ಕಳು, ಹಿರಿಯರು ಸೇರಿ ಬನ್ನಿ ಮರದ ಪೂಜೆ ಮಾಡಿ ಬನ್ನಿ ಹಂಚಿಕೊಂಡು ಶುಭ ಕೋರಿದರು.

ರಾವಣ ದಹನ ಕಾರ್ಯಕ್ರಮ: ವಿಜಯದಶಮಿ ನಿಮಿತ್ತ ಶ್ರೀ ರಾಮಲೀಲಾ ಉತ್ಸವ ಸಮಿತಿ ವತಿಯಿಂದ ಮಂಗಳವಾರ ರಾತ್ರಿ ವಿವಿಧ ಸಾತಿಕ ಕಾರ್ಯಕ್ರಮಗಳು ಜರುಗಿದವು. ರಾಮಲೀಲಾ ಪ್ರದರ್ಶನ ಮನಸೂರೆಗೊಂಡಿತ್ತು. ಪ್ರಮುಖ ರಸ್ತೆಗಳಲ್ಲಿ ದೇವಿ ಮೂರ್ತಿಯ ಮೆರವಣಿಗೆ ವೈಭವದಿಂದ ನೆರವೇರಿಸಲಾಯಿತು. ನಂತರ 45 ಅಡಿ ಎತ್ತರದ ರಾವಣನ ಪ್ರತಿಕೃತಿ ದಹಿಸಲಾಯಿತು. ದಹನ ಕಾರ್ಯಕ್ರಮ ನೋಡಲು ಸಾವಿರಾರು ಜನರು ಸೇರಿದ್ದರು.

ಮಾಜಿ ಸಚಿವ, ಶಾಸಕ ಬಂಡೆಪ್ಪ ಖಾಶೆಂಪೂರ್‌, ಎಂಎಲ್‌ಸಿ ರಘುನಾಥರಾವ್‌ ಮಲ್ಕಾಪೂರೆ, ಪ್ರಥಮ ದರ್ಜೆ ಗುತ್ತೆದಾರ ಗುರುನಾಥ ಕೊಳ್ಳುರ್‌, ಈಶ್ವರ ಸಿಂಗ್‌ ಠಾಕೂರ್‌, ಚಂದ್ರಶೇಖರ ಗಾದಾ, ಮಹೇಶ್ವರ ಸ್ವಾಮಿ, ರಾಮಲೀಲಾ ಸಮಿತಿ ಚಂದ್ರಶೇಖರ ಗಾದಾ, ಉತ್ಸವ ಸಮಿತಿ ಸಂಸ್ಥಾಪಕ ಈಶ್ವರಸಿಂಗ್‌ ಠಾಕೂರ್‌, ಮಹೇಶ್ವರ ಸ್ವಾಮಿ ಹಾಗೂ ಅಧಿ ಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.