ಸಹಾಯಕಿ ಮರಣ ಪರಿಹಾರಕ್ಕೆ ಕಚೇರಿಗೆ ಅಲೆದಾಟ
Team Udayavani, May 9, 2019, 3:31 PM IST
ಬೀದರ: ತಾಯಿ ಮರಣ ಪರಿಹಾರ ಪಡೆಯಲು ಬೀದರ ಶಿಶು ಅಭಿವೃದ್ಧಿ ಇಲಾಖೆಗೆ ಅಲೆದಾಡುತ್ತಿರುವ ಸಂತೋಷಿ ಹಾಗೂ ಅವರ ಅಜ್ಜಿ.
ಬೀದರ: ಅಂಗನವಾಡಿ ಸಹಾಯಕಿಯ ಮರಣ ಪರಿಹಾರಕ್ಕಾಗಿ ಕಳೆದ ನಾಲ್ಕು ವರ್ಷಗಳಿಂದ ಮೃತ ಮಹಿಳೆ ತಾಯಿ, ಮಗಳು ಬೀದರ್ ಶಿಶು ಅಭಿವೃದ್ಧಿ ಇಲಾಖೆಗೆ ಅಲ್ಲೆದಾಡುತಿದ್ದಾರೆ.
ಬೀದರ ತಾಲೂಕು ಹೊಕ್ರಾಣಾ(ಕೆ) ಗ್ರಾಮದಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸಿದ ಬಸಮ್ಮ ರಾಜಯ್ಯ ಕಳೆದ 2015ರಲ್ಲಿ ಕರ್ತವ್ಯ ನಿರತ ಸಂದರ್ಭದಲ್ಲಿ ಮೃತ್ತಪಟ್ಟಿದ್ದು, ಮರಣ ಪರಿಹಾರ ನೀಡುವಂತೆ ಅವರ ಮಗಳು ಸಂತೋಷಿ ಅನೇಕ ಬಾರಿ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅಲ್ಲದೆ ಸೂಕ್ತ ದಾಖಲೆಗಳು ಕೂಡ ನೀಡಿದರು ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ನಿರಂತರ ನೂರಾರು ರೂ. ಖರ್ಚು ಮಾಡಿ ಬೀದರ ನಗರಕ್ಕೆ ಬರುತ್ತಿದ್ದು, ಅಧಿಕಾರಿಗಳು ಉದ್ದೇಶ ಪೂರ್ವಕ ಅರ್ಜಿ ವಿಲೇವಾರಿ ಮಾಡುತ್ತಿಲ್ಲ. ಯಾವ ಕಾರಣಕ್ಕೆ ಅರ್ಜಿ ವಿಲೇವಾರಿ ಮಾಡುತ್ತಿಲ್ಲ ಎಂದು ಕೂಡ ಪತ್ರ ಬರೆದರು ಇಂದಿಗೂ ಅಧಿಕಾರಿಗಳು ಉತ್ತರ ನೀಡಿಲ್ಲ. ಇಲಾಖೆ ಒಬ್ಬ ಸಿಬ್ಬಂದಿ ಹಣದ ಬೇಡಿಕೆ ಇಟ್ಟಿದ್ದು, ಹಣ ನೀಡಲು ನನ್ನಿಂದ ಸಾಧ್ಯ ಆಗುತ್ತಿಲ್ಲ. ಗ್ರಾಮದ ಜನರು ಸ್ವಾಮಿಗಳು ಎಂದು ನಮ್ಮ ಕಾಲಿಗೆ ಬೀಳುತ್ತಾರೆ. ಆದರೆ, ನಾನು ನಮ್ಮ ಅಜ್ಜಿ ಇಬ್ಬರು ಅಧಿಕಾರಿಗಳ ಕಾಲಿಗೆ ಬಿದ್ದರು ಕೂಡ ಅಧಿಕಾರಿಗಳಿಗೆ ಕರುಣೆ ಬರುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಕಳೆದ ಜನವರಿ ತಿಂಗಳಲ್ಲಿ ಪತ್ರ ಬರೆದಿದ್ದು, ಇಂದಿಗೂ ಕೂಡ ಅಧಿಕಾರಿಗಳಿಂದ ಉತ್ತರ ಬಂದಿಲ್ಲ. ಮರಣ ಪರಿಹಾರ ಹಣದಷ್ಟು ಈಗಾಗಲೇ ನಾವುಗಳು ಸಂಚಾರದಲ್ಲಿ ಹಾಕಿದ್ದೇವೆ. ಬಡವರ ಧ್ವನಿ ಕೇಳುವರು ಯಾರು ಇಲ್ಲದಂತಾಗಿದೆ. ಮುಂದಿನ ದಿನಗಳಲ್ಲಿ ಇಲಾಖೆ ಎದುರಿಗೆ ಧರಣಿ ನಡೆಸುವುದಾಗಿ ಮೃತ ಮಹಿಳೆ ಮಗಳು ಸಂತೋಷಿ ತಿಳಿಸಿದ್ದಾರೆ.
ಈ ಕುರಿತು ಬೀದರ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಮಚ್ಚೆಂದರ ವಾಘಮಾರೆ ಅವರನ್ನು ಸಂಪರ್ಕಿಸಿದ್ದು, ಮರಣ ಪರಿಹಾರಕ್ಕಾಗಿ ಬೆಂಗಳೂರಿಗೆ ವರದಿ ಕಳುಹಿಸಲಾಗಿದೆ. ಆದರೆ, ಈ ವರೆಗೂ ಯಾವುದೇ ಉತ್ತರ ಬಾರದ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಪರಿಹಾರ ಧನಕ್ಕಾಗಿ ಸಿಬ್ಬಂದಿ ಹಣ ಕೇಳಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಅಂಗನವಾಡಿ ಸಹಾಯಕಿಯ ಮರಣ ಪರಿಹಾರಕ್ಕಾಗಿ ಕಳೆದ ನಾಲ್ಕು ವರ್ಷಗಳಿಂದ ಮೃತ ಮಹಿಳೆ ತಾಯಿ, ಮಗಳು ಬೀದರ್ ಶಿಶು ಅಭಿವೃದ್ಧಿ ಇಲಾಖೆಗೆ ಅಲ್ಲೆದಾಡುತಿದ್ದಾರೆ.

ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.