ಸಮಾನತೆ ಕೊಟ್ಟಿದ್ದು ಶರಣ ಸಂಸ್ಕೃತಿ

ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಅಕ್ಕಮಹಾದೇವಿ ಜಯಂತಿ ಆಚರಣೆ

Team Udayavani, Apr 21, 2019, 2:47 PM IST

21-April-19

ಭಾಲ್ಕಿ: ಚನ್ನಬಸವಾಶ್ರಮದಲ್ಲಿ ನಡೆದ ಅಕ್ಕಮಹಾದೇವಿ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಡಾ| ಬಸವಲಿಂಗಪಟ್ಟದ್ದೇವರು ಮಾತನಾಡಿದರು.

ಭಾಲ್ಕಿ: ಹನ್ನೆರಡನೇ ಶತಮಾನದಲ್ಲಿ ಬಸವಾದಿ ಶರಣರ ಸಂಸ್ಕೃತಿಯಿಂದ ಮಹಿಳೆಯರಿಗೆ ಸಮಾನತೆ ದೊರೆಯಿತು. ಮಹಿಳೆಯರು ಮನೆಯಲ್ಲಿ ಬಂ ಧಿಯಾಗಿದ್ದ ಸಮಯದಲ್ಲಿ ಎಲ್ಲರಂತೆ ಬದುಕುವ ಸಮಾನ ಹಕ್ಕು ಮಹಿಳೆಯರಿಗೂ ಇದೆ ಎನ್ನುವುದನ್ನು ಪ್ರತಿಪಾದಿಸಿದವರು ಬಸವಾದಿ ಶರಣರು ಎಂದು ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿ ಡಾ| ಬಸವಲಿಂಗ ಪಟ್ಟದ್ದೇವರು ಹೇಳಿದರು.

ಪಟ್ಟಣದ ಚನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಆಯೋಜಿಸಿದ್ದ ವೀರ ವೈರಾಗ್ಯನಿಧಿ ಅಕ್ಕಮಹಾದೇವಿ ಜಯಂತಿ ಮಹೋತ್ಸವದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ವಿಶ್ವದಲ್ಲೇ ಅಕ್ಕಮಹಾದೇವಿ ವ್ಯಕ್ತಿತ್ವ ಅಪರೂಪವಾದದ್ದು. ಅವರ ಸಂದೇಶ ವಿಶ್ವಮಾನ್ಯವಾಗಿದೆ. ಬದುಕಿನಲ್ಲಿ ಏನೇ ಏರಿಳಿತಗಳು ಬಂದರೂ ಸಮಾಧಾನಿಯಾಗಿರಬೇಕೆಂಬ ಅಕ್ಕನ ಸಂದೇಶ ಪ್ರತಿಜೀವಿಗೆ ಆತ್ಮಸ್ಥೈರ್ಯ ತುಂಬುತ್ತದೆ. ಅಂದಿನ ಕಾಲದಲ್ಲಿ ಮಹಿಳೆಯರು ನಾಲ್ಕು ಗೋಡೆಯಲ್ಲಿ ಬಂಧಿಯಾಗಿದ್ದರು. ಅಂತಹ ಸಂದರ್ಭದಲ್ಲಿ ಬಸವಾದಿ ಶರಣರು ಮಹಿಳೆಯರಿಗೂ ಎಲ್ಲರಂತೆ ಕಾಯಕ ಮಾಡಿ ಬದುಕುವ ಹಕ್ಕಿದೆ ಎಂದು, ಕಾಯಕ ತತ್ವ ತಿಳಿಸಿ, ಜನಮಾನಸಕ್ಕೆ ತಂದು, ಮಹಿಳಾ ಸ್ವಾತಂತ್ರ್ಯ ಕಲ್ಪಿಸಿದರು ಎಂದು ಹೇಳಿದರು.

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು, ಪ್ರವಚನಕಾರ ಡಾ| ಈಶ್ವರಾನಂದ
ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಶ್ರೀ ಮಹಾಲಿಂಗ ಸ್ವಾಮಿಗಳು ನಾಟಕ ಪ್ರದರ್ಶನದ ನೇತೃತ್ವ ವಹಿಸಿದ್ದರು.ನಾಗಮ್ಮ ಬಸವರಾಜ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಇದೇವೇಳೆ ಹಂಸಕವಿ ದಂಪತಿಯಿಂದ ಶ್ರೀಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಅಲ್ಲದೇ ತೆಲಂಗಾಣ ರಾಜ್ಯದ ಕಲಾವಿದ ಯಜ್ಞರಿಗೆ ಶ್ರೀಮಠದಿಂದ ಸನ್ಮಾನಿಸಲಾಯಿತು. ಗೀತಾ ನಿಜಲಿಂಗಪ್ಪ ಗಂಗಾಪಾಟೀಲ ಅನುಭಾವ ನುಡಿ ನುಡಿದರು. ವಿದ್ಯಾವತಿ ಸೋಮನಾಥಪ್ಪ ಅಷ್ಟೂರೆ ಬಸವಗುರುಪೂಜೆ ನಡೆಸಿಕೊಟ್ಟರು. ಅಕ್ಕನಬಳಗದ ಶರಣೆಯರಿಂದ ತೊಟ್ಟಿಲು ಕಾರ್ಯಕ್ರಮ ನಡೆಯಿತು. ಪಾರ್ವತಿ ಧೂಮ್ಮನಸೂರೆ, ಶುಭಾಂಗಿ, ಸರಸ್ವತಿ ಸ್ವಾಮಿ ಅವರಿಂದ ವಚನ ಪಠಣ ಮತ್ತು ಗಾಯನ ನಡೆಯಿತು.

ಮುಖ್ಯಶಿಕ್ಷಕ ಜೈರಾಜ ದಾಬಶೆಟ್ಟೆ, ಹಂಸಕವಿ ವಲ್ಯಾಪುರೆ, ಪ್ರಾಂಶುಪಾಲ ಚಂದ್ರಕಾಂತ ಬಿರಾದಾರ ಉಪಸ್ಥಿತರಿದ್ದರು. ಮಲ್ಲಮ್ಮ ನಾಗನಕೆರೆ ಸ್ವಾಗತಿಸಿದರು. ಸಾವಿತ್ರಿ ಧನರಾಜ ಪಾಟೀಲ ನಿರೂಪಿಸಿದರು. ಸೂರ್ಯಕಾಂತ ಚಿಮಕೋಡೆ ವಂದಿಸಿದರು.

ಟಾಪ್ ನ್ಯೂಸ್

PKL 11: Panthers won against Yoddhas

PKL 11: ಯೋಧಾಸ್‌ ವಿರುದ್ಧ ಗೆದ್ದ ಪ್ಯಾಂಥರ್

Virat Kohli Birthday: Kohli blossomed in sand sculpture

Virat Kohli Birthday: ಮರಳುಶಿಲ್ಪದಲ್ಲಿ ಅರಳಿದ ಕೊಹ್ಲಿ

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PKL 11: Panthers won against Yoddhas

PKL 11: ಯೋಧಾಸ್‌ ವಿರುದ್ಧ ಗೆದ್ದ ಪ್ಯಾಂಥರ್

Brahmavar

Belthangady: ಆತ್ಮಹ*ತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

Virat Kohli Birthday: Kohli blossomed in sand sculpture

Virat Kohli Birthday: ಮರಳುಶಿಲ್ಪದಲ್ಲಿ ಅರಳಿದ ಕೊಹ್ಲಿ

Court-1

Puttur: ರಸ್ತೆ ಅಪಘಾತದಲ್ಲಿ ಸಾವು; ಆರೋಪಿ ಚಾಲಕ ಖುಲಾಸೆ

2

Kasaragod: ರೈಲು ಹಳಿಯಲ್ಲಿ ಬಾಟಲಿ, ನಾಣ್ಯ ಇರಿಸಿ ದುಷ್ಕೃತ್ಯಕ್ಕೆ ಸಂಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.