ತೊಗರಿ ಖರೀದಿ: ನೋಂದಣಿ ಪ್ರಕ್ರಿಯೆ ಆರಂಭ ವಿಳಂಬ

11 ದಿನಗಳು ಕಳೆದರೂ ಖರೀದಿ ಪ್ರಕ್ರಿಯೆಗೆ ಚಾಲನೆ ಮಾತ್ರ ಸಿಕ್ಕಿಲ್ಲ

Team Udayavani, Jan 2, 2020, 10:40 AM IST

2-January-1

ಬೀದರ: ಮಾರುಕಟ್ಟೆಯಲ್ಲಿ ತೊಗರಿ ದರ ಕುಸಿತದಿಂದ ನಲುಗಿದ್ದ ಅನ್ನದಾತನ ಆಸರೆಗೆ ಕೇಂದ್ರ-ರಾಜ್ಯ ಸರ್ಕಾರಗಳು ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ಕೇಂದ್ರಗಳನ್ನು ಸ್ಥಾಪಿಸಿವೆ ಆದರೆ ರೈತರ ನೋಂದಣಿ ಪ್ರಕ್ರಿಯೆ ಆರಂಭಿಸಲು ಆದೇಶಿಸಿ 11 ದಿನ ಕಳೆದರೂ ಈವರೆಗೆ ಪ್ರಕ್ರಿಯೆ ಆರಂಭಗೊಳ್ಳದೇ ಇರುವುದರಿಂದಅನ್ನದಾತ ಆತಂಕದಲ್ಲಿದ್ದಾನೆ  ಪ್ರಸಕ್ತ ಸಾಲಿನಲ್ಲಿ ಪ್ರತಿ ಕ್ವಿಂಟಲ್‌ ತೊಗರಿ ಖರೀದಿಗೆ ಕೇಂದ್ರ ಸಕಾರದ ಕನಿಷ್ಠ ಬೆಂಬಲ
5800 ರೂ.ಗಳ ಜತೆ ಪ್ರೋತ್ಸಾಹ ಧನ 300ರೂ. ಸೇರಿ ರೈತರಿಂದ ಪ್ರತಿ ಕ್ವಿಂಟಲ್‌ ತೊಗರಿಯನ್ನು 6100 ರೂ.ಗಳಿಗೆ ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಕಳೆದ ಡಿ. 21ರಿಂದ ಜ.10ರವರೆಗೆ ರೈತರು ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸುವಂತೆ ಮತ್ತು ನಂತರ 30 ದಿನಗಳ ಕಾಲ ಖರೀದಿ ಪ್ರಕ್ರಿಯೆ ನಡೆಸಲು ಆದೇಶ ಹೊರಡಿಸಿದೆ.

ತೊಗರಿ ಖರೀದಿಗಾಗಿ ನೋಂದಣಿಗೆ ಸರ್ಕಾರ ಕೇವಲ 21 ದಿನಗಳು ಮಾತ್ರ ಕಾಲಾವಕಾಶ ಕಲ್ಪಿಸಿದೆ. ಆದರೆ, ರೈತರು ಹೆಸರು ನೋಂದಣಿ ಆರಂಭಗೊಂಡು 11 ದಿನಗಳು ಕಳೆದರೂ ಇದುವರೆಗೂ ಖರೀದಿ ಪ್ರಕ್ರಿಯೆಗೆ ಚಾಲನೆ ಮಾತ್ರ ಸಿಕ್ಕಿಲ್ಲ. ಈಗ ಉಳಿದಿರುವ 10
ದಿನಗಳಲ್ಲಿ ಎಲ್ಲ ರೈತರ ನೋಂದಣಿ ಕಾರ್ಯ ನಡೆಯುವುದು ಕಷ್ಟ ಸಾಧ್ಯವೆಂಬುದು ರೈತ ಸಮೂಹದ ಅಳಲು.

ಜಿಲ್ಲೆಯಲ್ಲಿ ಪ್ರಸಕ್ತ ಹಂಗಾಮಿನಲ್ಲಿ 82 ಸಾವಿರ ಕ್ವಿಂಟಲ್‌ ತೊಗರಿ ಬೆಳೆಯಲಾಗಿದ್ದು, ಎರಡ್ಮೂರು ವಾರಗಳಲ್ಲಿ ಕಟಾವು ಶುರುವಾಗಲಿದೆ. ಜಿಲ್ಲೆಯಲ್ಲಿ ಒಟ್ಟು 78 ಖರೀದಿ ಕೇಂದ್ರ ಸ್ಥಾಪಿಸಲಾಗಿದೆ. ಈ ಬಾರಿ ಉತ್ತಮ ಮಳೆ ಮತ್ತು ಕೀಟ ಬಾಧೆ ಇಲ್ಲವಾದ್ದರಿಂದ ಬಂಪರ್‌ ಇಳುವರಿ ಸಿಗಬಹುದೆಂಬ ನಿರೀಕ್ಷೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಸರ್ಕಾರ ಬೆಂಬಲ ಬೆಲೆಯಲ್ಲಿ ಬೆಳೆ ಖರೀದಿಗೆ ಘೋಷಿಸಿರುವುದು ರೈತರಲ್ಲಿ ಸಂತಸ ಇಮ್ಮಡಿಗೊಳಿಸಿತ್ತು. ಆದರೆ ಇವತ್ತಿಗೂ ನೋಂದಣಿ ಪ್ರಕ್ರಿಯೆ ಆರಂಭಗೊಂಡಿಲ್ಲ. ಇದಕ್ಕೆ ಎನ್‌ಇಎಂಎಲ್‌ ಸಾಫ್ಟವೇರ್‌ನಲ್ಲಿ ತಾಂತ್ರಿಕ ಸಮಸ್ಯೆಯೇ ಕಾರಣವೆಂದು ಹೇಳಲಾಗಿದೆ.

ತೊಗರಿ ಖರೀದಿಗೆ ನಾಫೆಡ್‌ ಹಾಗೂ ಎಫ್‌ಸಿಐ ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿ ಮತ್ತು ಮಾರ್ಕ್‌ಫೆಡ್‌, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿಯನ್ನು ರಾಜ್ಯದ ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದೆ. ಮಾರ್ಗಸೂಚಿಯನ್ವಯ ಬೀದರ ಸೇರಿ ತೊಗರಿ ಬೆಳೆಯುವ 9 ಜಿಲ್ಲೆಗಳಲ್ಲಿ ಎಕರೆಗೆ 5 ಕ್ವಿಂ. ಮತ್ತು ಪ್ರತಿ ರೈತರಿಂದ ಗರಿಷ್ಠ 10 ಕ್ವಿಂ. ತೊಗರಿ ಖರೀದಿಗೆ ಅವಕಾಶ ನೀಡಲಾಗಿದೆ. ಮಳೆಯಾಶ್ರಿತ ಪ್ರದೇಶವಾಗಿರುವ ಬೀದರ ಜಿಲ್ಲೆಯಲ್ಲಿ ತೊಗರಿ ಬಿತ್ತನೆ ತಡವಾಗಿ ನಡೆಯುವುದರಿಂದ ಬೆಳೆ ಕಟಾವು ಸಹ ವಿಳಂಬ ಆಗುತ್ತದೆ. ಅಲ್ಪ ಅವಧಿಯಲ್ಲಿಯೇ ಎಲ್ಲ
ರೈತರು ನೋಂದಣಿ ಮಾಡಿಸಬೇಕಿರುವುದರಿಂದ ಸರ್ವರ್‌ ಮೇಲೆ ಒತ್ತಡ, ನೂಕು ನುಗ್ಗಲು ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ಸರ್ಕಾರ ನೋಂದಣಿ ಪ್ರಕ್ರಿಯೆ ವಿಸ್ತರಿಸಬೇಕೆಂಬುದು ರೈತರ ಒತ್ತಾಸೆಯಾಗಿದೆ.

ಉತ್ತಮ ಮಳೆ ಹಿನ್ನೆಲೆಯಲ್ಲಿ ಬಂಪರ್‌ ಬೆಳೆ ಬರುವ ನಿರೀಕ್ಷೆ ಇದೆ. ಸರ್ಕಾರದಿಂದ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ಮುಂದಾಗಿರುವುದರಿಂದ ಖುಷಿಯಲ್ಲಿದ್ದೆವು. ತೊಗರಿ ಖರೀದಿ ನೋಂದಣಿ ಪ್ರಕ್ರಿಯೆಗೆ ಕೇವಲ 21 ದಿನಗಳ ಅಲ್ಪ ಸಮಯ
ನೀಡಲಾಗಿದೆ. ಆದರೆ ಇವತ್ತಿಗೂ ನೋಂದಣಿ ಆರಂಭಿಸಿಲ್ಲ. ಇದಕ್ಕಾಗಿ ನಾವು ಕಾಯ್ದು ಕುಳಿತಿದ್ದೇವೆ. ಇನ್ನೂ ಖರೀದಿ ಯಾವಾಗ
ಮಾಡುತ್ತಾರೆಂಬ ಆತಂಕ ಮೂಡಿದೆ.
ಸಿದ್ರಾಮ ಬೇಲೂರೆ, ರೈತ

ಬೀದರ ಜಿಲ್ಲೆಯಲ್ಲಿ ತೊಗರಿ ಖರೀದಿಸಲು ಒಟ್ಟು 78 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಡಿ.21ರಿಂದಲೇ ನೋಂದಣಿ ಆರಂಭಗೊಳ್ಳಬೇಕಿತ್ತು. ಆದರೆ, ಎನ್‌ ಇಎಂಎಲ್‌ ಸಾಫ್ಟವೇರ್‌ನಲ್ಲಿನ ತಾಂತ್ರಿಕ ಸಮಸ್ಯೆಗಳಿಂದ ವಿಳಂಬವಾಗಿದೆ. ಇಂದು ಅಥವಾ ನಾಳೆ ಪ್ರಕ್ರಿಯೆ ಶುರುವಾಗಲಿದೆ. ನೋಂದಣಿ ದಿನಾಂಕ ವಿಸ್ತರಿಸುವ ಕುರಿತಂತೆ ಈಗಾಗಲೇ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ.
ಪ್ರಭಾಕರ, ಶಾಖಾ ವ್ಯವಸ್ಥಾಪಕರು,
ರಾಜ್ಯ ಸಹಕಾರಿ ಮಾರಾಟ ಮಹಾಮಂಡಳ,
ಬೀದರ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.