ಗ್ರಾಮ-ತಾಂಡಾಗಳಲ್ಲಿ ಬೀದರ ಲೋಕಸಭಾ ಕ್ಷೇತ್ರದ ಲೆಕ್ಕಾಚಾರ
Team Udayavani, Apr 25, 2019, 10:37 AM IST
ಚಿಂಚೋಳಿ: ಬೀದರ ಲೋಕಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಇತ್ತ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಸೋಲು ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಅಲ್ಲದೇ ನಮ್ಮ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತಗಳು ಸಿಗಲಿವೆ ಎನ್ನುವ ಮಾತುಗಳು ತಾಲೂಕಿನ ಪ್ರತಿ ಗ್ರಾಮಗಳಲ್ಲಿ ನಡೆಯುತ್ತಿವೆ.
ತಾಲೂಕಿನ ಕಾಂಗ್ರೆಸ ಭದ್ರಕೋಟೆ ಆಗಿರುವ ಗಡಿ ಪ್ರದೇಶದ ಕುಂಚಾವರಂ, ಶಾದೀಪುರ, ವೆಂಕಟಾಪುರ, ಸುತ್ತಮುತ್ತ ಇರುವ ತಾಂಡಾಗಳಲ್ಲಿ ಬಿಜೆಪಿ ಅಭ್ಯರ್ಥಿಗೆ ಹೆಚ್ಚಿನ ಮತಗಳು ಸಿಗಲಿವೆ ಎನ್ನುವ ಮಾತುಗಳು ಕಾರ್ಯಕರ್ತರಿಂದ ಕೇಳಿ ಬರುತ್ತಿವೆ. ಚಿಂಚೋಳಿ ವಿಧಾನಸಭೆ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿ ಶಾಸಕರಾದ ನಂತರ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ ಮಾಜಿ ಶಾಸಕ ಡಾ|ಉಮೇಶ ಜಾಧವ ಬಂಜಾರಾ ಸಮಾಜದ ತಾಪಂ ಮತ್ತು ಗ್ರಾ.ಪಂ ಸದಸ್ಯರಿಗೆ ಹಾಗೂ ಅಲ್ಲಿನ ಸಮಾಜದ ಮುಖಂಡರಿಗೆ ಬೀದರ ಲೋಕಸಭೆ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರಿಗೆ ಮತ ಹಾಕುವಂತೆ ಮೊಬೈಲ್ ಮೂಲಕ ಸಂಪರ್ಕಿಸಿ ಮನವೊಲಿಸಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಕುಂಚಾವರಂ ಗಡಿಭಾಗದಲ್ಲಿ ಸ್ವಲ್ಪಮಟ್ಟಿಗೆ ಬಿಜೆಪಿ ಅಭ್ಯರ್ಥಿಗೆ ಹೆಚ್ಚಿನ ಮತಗಳು ಸಿಗಲಿವೆ ಎನ್ನುವ ಲೆಕ್ಕಾಚಾರ ಹಾಕಲಾಗುತ್ತಿದೆ.
ಐನೋಳಿ ಜಿಪಂ ಕ್ಷೇತ್ರದ ಐನೋಳಿ, ದೇಗಲಮಡಿ, ಹಸರಗುಂಡಗಿ, ತುಮಕುಂಟಾ, ಸಾಲೇಬೀರನಳ್ಳಿ, ಸಲಗರ ಬಸಂತಪುರ ಹಾಗೂ ಚಿಮ್ಮನಚೋಡ ಜಿಪಂ ಕ್ಷೇತ್ರದ ಚಂದನಕೇರಾ, ರಾಣಾಪುರ, ಐನಾಪುರ, ಭೂಯಾರ (ಬಿ), ಚೆಂಗಟಾ, ಗಡಿಲಿಂಗದಳ್ಳಿ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಅವರಿಗೆ ಹೆಚ್ಚಿನ ಮತಗಳು ಬಿದ್ದಿವೆ ಎನ್ನುವ ಚರ್ಚೆಗಳು ನಡೆದಿವೆ.
ಪಾಲತ್ಯಾತಾಂಡಾ, ಚೌಕಿತಾಂಡಾ, ಅಡಕಿಮೋಕ, ರಾಣಾಪುರ ತಾಂಡಾ, ಹೇಮಲಾ ನಾಯಕ, ಸಲಗರ ಕಾಲೋನಿ, ಭಿಕ್ಕು ನಾಯಕ, ಎತೆಬಾರಪುರ ಸೇರಿದಂತೆ ಇನ್ನಿತರ ತಾಂಡಾಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಗಳು ಚಲಾವಣೆಯಾಗಿವೆ ಎಂದು ಹೇಳಲಾಗುತ್ತಿದೆ.
ಕೋಡ್ಲಿ ಜಿಪಂ ಕ್ಷೇತ್ರದ ಮೋಘಾ, ರಟಕಲ್, ಕೋಡ್ಲಿ, ನಾವದಗಿ, ಹಲಚೇರಾ, ಚಿಂತಪಳ್ಳಿ, ಮುಕರಂಬಾ, ಹುಲಸಗೂಡ, ಸೇರಿಗ್ರಾಮ, ಸಾಸರಗಾಂವ, ರುಮ್ಮನಗೂಡ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಹೆಚ್ಚು ಮತಗಳು ಬರಲಿವೆ ಎನ್ನಲಾಗುತ್ತಿದೆ. ಸೇರಿ ಬಡಾ ತಾಂಡಾ, ಸುಂಠಾಣ ತಾಂಡಾ, ಮಂಡಗೋಳ ತಾಂಡಾಗಳಲ್ಲಿ ಬಿಜೆಪಿಗೆ ಹೆಚ್ಚಿನ ಮತಗಳನ್ನು ಹಾಕಲಾಗಿದೆ ಎನ್ನಲಾಗಿದೆ.
ತಾಲೂಕಿನಲ್ಲಿ ಬೀದರ ಲೋಕಸಭೆ ಚುನಾವಣಾ ಫಲಿತಾಂಶದ ಜೊತೆಗೆ ಕಲಬುರಗಿ ಲೋಕಸಭೆ ಚುನಾವಣೆ ಫಲಿತಾಂಶವೂ ಕುತೂಹಲಕಾರಿ ಆಗಿದೆ. ತಾಲೂಕಿನ ಪ್ರತಿ ಗ್ರಾಮಗಳ ಚಹಾ ಹೋಟೆಲ್, ಮದ್ಯದ ಅಂಗಡಿ, ದಾಬಾಗಳಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಭರ್ಜರಿಯಾಗಿ ನಡೆಯುತ್ತಿವೆ.
ಚಿಂಚೋಳಿ: ಎರಡು ನಾಮಪತ್ರ ಸಲ್ಲಿಕೆ
ಕಲಬುರಗಿ: ಚಿಂಚೋಳಿ(ಪ.ಜಾ) ವಿಧಾನಸಭೆ ಕ್ಷೇತ್ರಕ್ಕೆ ಮೇ 19 ರಂದು ನಡೆಯುವ ಉಪಚುನಾವಣೆಗಾಗಿ ನಾಮಪತ್ರ ಸಲ್ಲಿಕೆ ಎರಡನೇ ದಿನ ಒಬ್ಬ ಅಭ್ಯರ್ಥಿಯಿಂದ ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚಿಂಚೋಳಿ(ಪ.ಜಾ) ಕ್ಷೇತ್ರದ ಚುನಾವಣಾಧಿಕಾರಿ ಸೋಮಶೇಖರ ತಿಳಿಸಿದ್ದಾರೆ.
ದೀಪಕ ಗಂಗಾರಾಮ ಕಟಕದೊಂಡ ಅವರು ಹಿಂದುಸ್ತಾನ ಜನತಾ ಪಕ್ಷದಿಂದ ಒಂದು ನಾಮಪತ್ರ ಹಾಗೂ ಬಹುಜನ ಸಮಾಜ ಪಕ್ಷದಿಂದ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಏ.29 ಕೊನೆದಿನವಾಗಿದ್ದು, ಏ.30ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮೇ 2ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ. ಮೇ 23ರಂದು ಮತ ಎಣಿಕೆ ನಡೆಯಲಿದೆ. ಈ ವರೆಗೆ ಒಟ್ಟು ಇಬ್ಬರು ಅಭ್ಯರ್ಥಿಗಳಿಂದ ಮೂರು ನಾಮಪತ್ರ ಸಲ್ಲಿಸಿದಂತಾಗಿದೆ ಎಂದು ತಿಳಿಸಿದ್ದಾರೆ.
ಶಾಮರಾವ ಚಿಂಚೋಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.