ಕೊಟ್ಟ ಆಶ್ವಾಸನೆ ಈಡೇರಿಸಲಿಲ್ಲ ಮೋದಿ: ಸುದರ್ಶನ್‌

ನೋಟು ಚಲಾವಣೆ ರದ್ದುಗೊಳಿಸಿ ಜನರ ಮೇಲೆ ಮೋದಿ ಗದಾಪ್ರಹಾರ

Team Udayavani, Apr 20, 2019, 4:41 PM IST

20-April-29

ಬೀದರ: ಈಶ್ವರ ಖಂಡ್ರೆ ಪರ ಪ್ರಚಾರಕ್ಕೆ ಆಗಮಿಸಿದ ಕಾಂಗ್ರೆಸ್‌ ಪಕ್ಷದ ಮುಖಂಡರುನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೀದರ: ಐದು ವರ್ಷಗಳ ಮೋದಿ ಆಡಳಿತಾವಧಿಯಲ್ಲಿ ಜನತೆಗೆ ನೀಡಿದ್ದ ಯಾವೊಂದು ಆಶ್ವಾಸನೆಗಳು ಈಡೇರಿಲ್ಲ ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಉಪಾಧ್ಯಕ್ಷ
ಹಾಗೂ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌ ಟೀಕಿಸಿದರು.

ನಗರದಲ್ಲಿ ಶುಕ್ರವಾರ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಅವರು ಸಮರ್ಥ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ.

ಜನಪರ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಆದ್ಯತೆ ನೀಡಿಲ್ಲ. ಮಹಿಳೆಯರು, ಮಕ್ಕಳು, ಯುವಜನ, ಕಾರ್ಮಿಕರ, ರೈತರ ವಿರೋಧಿ ನೀತಿ ಅನುಸರಿಸಿದ್ದಾರೆ ಎಂದು ಆರೋಪಿಸಿದರು.

ರೈತರ ಸಾಲ ಮನ್ನಾ ವಿಚಾರದಲ್ಲಿ ರಾಷ್ಟ್ರೀಯ ಸಮಗ್ರ ನೀತಿ ಜಾರಿಗೆ ತರಲು ಮೋದಿ ಅವರಿಗೆ ಸಾಧ್ಯವಾಗಿಲ್ಲ. ಐದು ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಎಲ್ಲಿ ದ್ವಿಗುಣವಾಗಿದೆ ಎಂಬುದರ ಲೆಕ್ಕ ಕೊಡಿ ಎಂದು ಪ್ರಶ್ನಿಸಿದರು.

ಆರ್‌ಬಿಐ ಅಧಿಕಾರಿಗಳು ಮತ್ತು ಹಣಕಾಸು
ಅಧಿಕಾರಿಗಳ ಜೊತೆ ಚರ್ಚಿಸದೇ ಏಕಾಏಕಿ
ಗರಿಷ್ಠ ಮುಖ ಬೆಲೆಯ ನೋಟುಗಳ ಚಲಾವಣೆ
ರದ್ದುಗೊಳಿಸುವ ಮೂಲಕ ದೇಶದ ಜನರ
ಮೇಲೆ ಗದಾಪ್ರಹಾರ ನಡೆಸಿದ್ದಾರೆ. ಆ ಕರಾಳ
ದಿನಗಳನ್ನು ದೇಶದ ಜನ ಇನ್ನೂ ಮರೆತಿಲ್ಲ
ಎಂದು ಜರಿದರು.

ಯುಪಿಎ ಅವಧಿಯಲ್ಲಿ ಭಾರತೀಯ ಸೇನೆಯು ಪಾಕಿಸ್ತಾನದ ವಿರುದ್ಧ ಎಂಟು ಬಾರಿ ಸರ್ಜಿಕಲ್‌ ಸ್ಟ್ರೆಕ್  ನಡೆಸಿದ್ದರೂ ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಎಲ್ಲಿಯೂ ಬಹಿರಂಗಪಡಿಸಲಿಲ್ಲ. ಆ ವಿಷಯಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಿಲ್ಲ. ಕಾರಣ ದೇಶದ
ಸುರಕ್ಷತೆ ಮುಖ್ಯ ಎಂದು ತಿಳಿದು ದೇಶಕ್ಕೆ ಹಾನಿ ಉಂಟುಮಾಡುವ ವಿಷಯಗಳನ್ನು ಸಾರ್ವಜನಿಕ ಮಾಡಲಿಲ್ಲ. ಆದರೆ, ಮೋದಿ ಅವಧಿಯಲ್ಲಿ ಸೇನೆಯು ಎರಡು ಬಾರಿ ಸರ್ಜಿಕಲ್‌ ಸ್ಟ್ರೆಕ್  ಮಾಡಿರುವುದನ್ನು ಭಾರಿ ಪ್ರಮಾಣದಲ್ಲಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ಖಂಡನೀಯ ವಿಷಯವಾಗಿದೆ. ದೇಶದ ಸೈನಿಕರು ಎಲ್ಲಾ ಸರ್ಕಾರಗಳ ಆಡಳಿತದಲ್ಲಿ ದೇಶದ ಹಿತ ಕಾಪಾಡುವ ಕೆಲಸ ಮಾಡಿದ್ದಾರೆ. ಸೈನಿಕರ ಹೆಸರಲ್ಲಿ ರಾಜಕೀಯ ಸಲ್ಲದು ಎಂದರು.

ಆದಾಯ ತೆರಿಗೆ ಇಲಾಖೆ ಸೇರಿದಂತೆ ಪ್ರಮುಖ ಸ್ವಾಯತ್ತ ಸಂಸ್ಥೆಗಳನ್ನು ಮೋದಿ ಅವರು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ದೂರಿದ ಅವರು, ದೇಶದಲ್ಲಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿರುವುದು ಹಾಗೂ ದೇಶದ ವೈವಿಧ್ಯತೆಯಲ್ಲಿ ನಂಬಿಕೆ ಇಟ್ಟುಕೊಂಡು, ಅವರವರ ಆಚಾರ-ವಿಚಾರಗಳಂತೆ ಬದುಕಲು ಅವಕಾಶ ಕಲ್ಪಿಸಿರುವುದು ಕಾಂಗ್ರೆಸ್‌ ಸಂಸ್ಕೃತಿಯಾಗಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ್ದೇವೆ ಎಂದು ಬಿಜೆಪಿಯವರು ಬೀಗುತ್ತಿದ್ದಾರೆ. ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಮೊತ್ತದ ಹಗರಣ ಎಲ್ಲೆಡೆ ಚರ್ಚೆಯಾಗುತ್ತಿದೆ. ಪ್ಲಾಷ್ಟಿಕ್‌ ವಿಮಾನ ತಯಾರಿಸಿದ ಕಂಪನಿಯೊಂದಿಗೆ ಹೇಗೆ ಒಪ್ಪಂದ ಮಾಡಿಕೊಂಡರು ಎಂದು ಪ್ರಶ್ನಿಸಿದ್ದಾರೆ. ದೇಶ ಹಿತದೃಷ್ಟಿಯಿಂದ ಈ ಬಾರಿಯ ಲೋಕಸಭಾ
ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಪ್ರಸ್ತುತ ನಡೆಯುತ್ತಿರುವುದು ವಿಚಾರಗಳ ನಡುವಿನ ಹೋರಾಟವೇ ಹೊರತು, ಪಕ್ಷಗಳ ನಡುವಿನ ಚುನಾವಣೆಯಲ್ಲ ಎಂದ ಅವರು, ಬೀದರ್‌ ಕ್ಷೇತ್ರದ ಅಭ್ಯರ್ಥಿ ಈಶ್ವರ ಖಂಡ್ರೆ ಅವರಿಗೆ ಜಿಲ್ಲೆಯ ಜನರು ಬೆಂಬಲಿಸಬೇಕು. ಬೀದರ ಧ್ವನಿ ದೆಹಲಿಗೆ ಮುಟ್ಟಿಸಬೇಕು ಎಂದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಎಂ.ಎ. ಸಮಿ, ದತ್ತಾತ್ರಿ ಮುಲಗೆ, ಬಸಿರೋದ್ದಿನ್‌ ಹಾಲಹಿಪ್ಪರಗಾ ಇತರರು ಇದ್ದರು.

ಟಾಪ್ ನ್ಯೂಸ್

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.