22 ಸ್ಥಾನದಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಗೆಲುವು
ಮಹಾಘಟಬಂಧನ್ ರಚನೆಯಾಗಿದ್ದು ಕರ್ನಾಟಕದಲ್ಲಿ ದೇಶದ ರೈತರ ಸಾಲಮನ್ನಾಕ್ಕೆ ಸ್ಪಂದಿಸದ ಕೇಂದ್ರ
Team Udayavani, Apr 21, 2019, 12:32 PM IST
ಬೀದರ: ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ್ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವರಾದ ರಾಜಶೇಖರಪಾಟೀಲ, ರಹೀಂ ಖಾನ್ ಇದ್ದರು.
ಬೀದರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶದ 21 ರಾಜ್ಯಗಳ ವಿವಿಧ ಪಕ್ಷಗಳು ಒಗ್ಗೂಡಿ ಮಹಾಘಟಬಂಧನ ರಚನೆಗೊಂಡಿರುವುದು ಕರ್ನಾಟಕದಲ್ಲಿ. ಹಾಗಾಗಿ ಈ ಚುನಾವಣೆಯಲ್ಲಿ ರಾಜ್ಯದ 22 ಸ್ಥಾನಗಳಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಭವಿಷ್ಯ ನುಡಿದರು.
ನಗರದಲ್ಲಿ ಶನಿವಾರ ಮೈತ್ರಿ ಪಕ್ಷಗಳಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆ ಆಗುವ ಸಂದರ್ಭದಲ್ಲಿ ವಿವಿಧ ರಾಜ್ಯದ ವಿವಿಧ ಪಕ್ಷಗಳ ಮುಖಂಡರು ರಾಜ್ಯಕ್ಕೆ ಆಗಮಿಸಿದ್ದರು. ಲೋಕ ಸಮರದಲ್ಲಿ ಮೈತ್ರಿಯಾಗಿ ಎದುರಿಸುವ ನಿರ್ಣಯ
ಇಲ್ಲಿಂದಲೇ ಶುರುವಾಗಿದ್ದು, ಮೈತ್ರಿ ಅಭ್ಯರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಜಯಗಳಿಸಲಿದ್ದಾರೆ. ಕಳೆದ ಚುನಾವಣೆಯಲ್ಲಿ ಮೋದಿ ಗಾಳಿ ಇರುವ ಕಾರಣ ರಾಜ್ಯದಲ್ಲಿ 17 ಸ್ಥಾನಗಳು ಬಂದಿದ್ದು, ಇದೀಗ ಮೋದಿ ಗಾಳಿ ಮಾಯವಾಗಿದ್ದು, 22ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದರು.
ಮೋದಿ ಆಡಳಿತ ವಿಫಲ: ರಾಜ್ಯದ ವಿವಿಧೆಡೆ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿರುವ ಪ್ರಧಾನಿ ಮೋದಿ ಅವರು, ಕೇಂದ್ರ ಸರ್ಕಾರದಿಂದ ಎಷ್ಟು ಅನುದಾನ ನೀಡಿದ್ದಾರೆ ಎಂದು ಏಕೆ ಹೇಳುತಿಲ್ಲ? ರಾಜ್ಯದ ರೈತರಿಗೆ ಕೇಂದ್ರದಿಂದ ಯಾವ ಯೋಜನೆಗಳನ್ನು ನೀಡಿದ್ದಾರೆ ಎಂದು ಯಾಕೆ ಹೇಳುತ್ತಿಲ್ಲ ಎಂದು ಪ್ರಶ್ನಿಸಿದರು. ದೇಶದ ವಿವಿಧ ರಾಜ್ಯಗಳ ರೈತರು ಸಾಲಮನ್ನಾ ಮಾಡುವಂತೆ ದೆಹಲಿಯಲ್ಲಿ ಭಾರಿ ಪ್ರತಿಭಟನೆ ನಡೆಸಿದರೂ ಕೂಡ
ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಇದೀಗ ಚುನಾವಣೆ
ಎದುರಾದ ಸಂದರ್ಭದಲ್ಲಿ ಮೂರು ತಿಂಗಳಿಗೆ ಎರಡು ಸಾವಿರ ನೀಡುವುದಾಗಿ ಹೇಳುತ್ತಿರುವುದು
ಎಷ್ಟು ಸರಿ. ಮೋದಿ ಸರ್ಕಾರ ನೀಡಿದ ಭರವಸೆಗಳು ಇಂದಿಗೂ ಈಡೇರಿಸಿಲ್ಲ. ಆದರೆ, ಭಾವನಾತ್ಮಕ ವಿಷಯಗಳನ್ನು ಬಳಸಿಕೊಂಡು ಮತ ಕೇಳುತ್ತಿದ್ದಾರೆ
ಎಂದು ಆರೋಪಿಸಿದರು.
ಖಂಡ್ರೆ ಗೆಲವು ಖಚಿತ: ಬೀದರ್ ಕ್ಷೇತ್ರದಿಂದ ಸ್ಪರ್ಧೆ
ನಡೆಸುತ್ತಿರುವ ಕೆಪಿಸಿಸಿ ಕಾರ್ಯಾಧ್ಯ ಈಶ್ವರ ಖಂಡ್ರೆ
ಗೆಲುವು ಖಚಿತವಾಗಿದೆ ಎಂದು ಸಚಿವರಾದ ಬಂಡೆಪ್ಪ ಖಾಶೆಂಪೂರ್ ಹಾಗೂ ರಾಜಶೇಖರ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪತ್ರಕರ್ತರ
ಪ್ರಶ್ನೆಗೆ ಉತ್ತರಿಸಿದ ಅವರು, ಮೈತ್ರಿ ಪಕ್ಷದ ಅಭ್ಯರ್ಥಿ
ಗೆಲುವಿಗಾಗಿ ಜಿಲ್ಲೆಯ ಯಾವ ಸಚಿವರ ಮೇಲೆ ಯಾರೂ ಒತ್ತಡ ಹಾಕಿಲ್ಲ. ಚುನಾವಣೆ ನಂತರ ಯಾರ ಸಚಿವ ಸ್ಥಾನಕೂಡ ಹೋಗುವುದಿಲ್ಲ. ಈಶ್ವರ ಖಂಡ್ರೆ ಗೆಲುವಿಗೆ ಎಲ್ಲರು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದರು. ಕ್ರೀಡಾ ಸಚಿವ ರಹೀಂ ಖಾನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ ಪಾಟೀಲ
ಸೋಲಪೂರ್, ಚಂದ್ರಸಿಂಗ್, ರಾಜು ಚಿಂತಮಣ್ಣಿ,
ದತ್ತಾತ್ರಿ ಮೂಲಗೆ, ಅಶೋಕ ಕೊಡುಗೆ ಇದ್ದರು.
ಮೈತ್ರಿ ಸರ್ಕಾರ ರಾಜ್ಯದ ರೈತರ ಪರ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿ ರೈತರ ನೇರವಿಗೆ ಧಾವಿಸುತ್ತಿದೆ. ಅಲ್ಲದೆ, ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಘೊಷಣೆ ಮಾಡಿದ ಸಾಲಮನ್ನಾ ಯೋಜನೆಯ ಲಾಭ ಜೂನ್ 10ರ ವರೆಗೆ ಎಲ್ಲ ರೈತರಿಗೆ ಸಿಗಲಿದೆ. ಚುನಾವಣಾ ನೀತಿ ಸಂಹಿತೆ ಇರುವುದರಿಂದ ವಿಳಂಬವಾಗಿದೆ. ವಿರೋಧ ಪಕ್ಷದವರು ಏ.23 ಹಾಗೂ ಮೇ 23ರಂದು ಸರ್ಕಾರ ಬಿಳುತ್ತದೆ ಎಂದು ಹೇಳುತ್ತಿದ್ದಾರೆ. ಮೈತ್ರಿ ಸರ್ಕಾರ
ರಚನೆಗೊಂಡ ದಿನದಿಂದ ಈ ಮಾತುಗಳನ್ನು ಆಡುತ್ತಲೇ ಇದ್ದಾರೆ. ಆದರೆ, ಮೈತ್ರಿ ಸರ್ಕಾರ ಸುಭದ್ರವಾಗಿದೆ.
ಬಂಡೆಪ್ಪ ಖಾಶೆಂಪೂರ್,
ಜಿಲ್ಲಾ ಉಸ್ತುವಾರಿ ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.