ಮತದಾನಕ್ಕೆ ಸಹಕಾರ: ಡಿಸಿ ಡಾ|ಮಹಾದೇವ ಕೃತಜ್ಞತೆ

ಭದ್ರತಾ ಕೋಣೆ ಸೇರಿದ ಮತಯಂತ್ರಗಳು

Team Udayavani, Apr 25, 2019, 5:11 PM IST

25-April-27

ಬೀದರ: ಬೀದರ ಲೋಕಸಭೆ ಕ್ಷೇತ್ರದ ಸಂಸದ ಆಯ್ಕೆಗಾಗಿ 1,999 ಮತಗಟ್ಟೆಗಳ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿ ಪ್ಯಾಟ್‌ಗಳನ್ನು ನಗರದ ಬಿವಿಬಿ ಕಾಲೇಜಿನಲ್ಲಿ ಸ್ಥಾಪಿಸಿದ ಭದ್ರತಾ ಕೋಣೆಯಲ್ಲಿ ಇರಿಸಲಾಯಿತು.

ಬೀದರ: ಬೀದರ ಲೋಕಸಭೆ ಚುನಾವಣೆಗೆ ಏ.23ರಂದು ಶಾಂತಯುತವಾಗಿ ಮತದಾನ ನಡೆದಿದೆ. ಇದಕ್ಕೆ ಸಹಕರಿಸಿದ ಜಿಲ್ಲೆಯ ಎಲ್ಲ ಸಾರ್ವಜನಿಕರು, ಅಧಿಕಾರಿಗಳು, ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ, ಅರೇ ಸೇನಾ ಪಡೆಗಳು, ಸ್ವೀಪ್‌ ಸಮಿತಿ, ಸ್ವಯಂ ಸೇವಕರು ಮತ್ತು ಎಲ್ಲ ಚುನಾವಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ಎಚ್.ಆರ್‌. ಮಹಾದೇವ ಕೃತಜ್ಞತೆ ಸಲ್ಲಿಸಿದ್ದಾರೆ.

ಬೀದರ ಲೋಕಸಭೆ ಕ್ಷೇತ್ರದ ಸಂಸದರ ಆಯ್ಕೆಗಾಗಿ 1,999 ಮತಗಟ್ಟೆಗಳಲ್ಲಿ ಮಂಗಳವಾರ ಮತದಾನ ಪೂರ್ಣಗೊಂಡ ಬಳಿಕ ಎಲ್ಲ ವಿದ್ಯುನ್ಮಾನ ಮತಯಂತ್ರಗಳು ಮತ್ತು ವಿವಿ ಪ್ಯಾಟ್‌ಗಳು ನಗರದ ಬಿವಿಬಿ ಕಾಲೇಜಿನಲ್ಲಿ ಸ್ಥಾಪಿಸಿದ ಭದ್ರತಾ ಕೋಣೆ ಸೇರಿವೆ.

ಮತದಾನ ನಂತರ ಡಿ-ಮಾಸ್ಟರಿಂಗ್‌ ಕೇಂದ್ರಗಳಿಗೆ ಸೇರಿದ ಮತಯಂತ್ರಗಳು ಬುಧವಾರ ಬೆಳಗ್ಗೆ ಎಲ್ಲ ಎಂಟು ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯ ಮತಗಟ್ಟೆಗಳ ಮತಯಂತ್ರಗಳನ್ನು ನಗರದ ಬಿವಿಬಿ ಕಾಲೇಜಿಗೆ ತರಲಾಯಿತು. ಬಸ್ಸಿನಲ್ಲಿ ಬಂದ ಮತಯಂತ್ರಗಳನ್ನು ಸುರಕ್ಷಿತ ಭದ್ರತಾ ಕೋಣೆಯಲ್ಲಿರಿಸಿ ಬೀಗಮುದ್ರೆ ಹಾಕಲಾಯಿತು.

ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತ್ತು ಅವರ ಏಜೆಂಟರುಗಳು ಹಾಗೂ ಚುನಾವಣೆ ವೀಕ್ಷಕರ ಸಮ್ಮುಖದಲ್ಲಿ ಎಲ್ಲ ಪ್ರಕ್ರಿಯೆಗಳು ನಡೆದವು. ಭದ್ರತಾ ಕೊಠಡಿಯಿಂದ ಒಳಕ್ಕೆ ಮತಯಂತ್ರ ಕೊಂಡೊಯ್ಯುವ ಪ್ರಕ್ರಿಯೆ ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣ ಮಾಡಲಾಯಿತು.

ಬಿಗಿ ಭದ್ರತೆ: ಈ ಭದ್ರತಾ ಕೋಣೆಗಳಿಗೆ ಸಿಐಎಸ್‌ಎಫ್‌, ಕೆಎಸ್‌ಆರ್‌ಪಿ ಹಾಗೂ ರಾಜ್ಯ ಪೊಲೀಸ್‌ ತುಕಡಿಗಳಿಂದ ಅಗತ್ಯ ಭದ್ರತೆ ಒದಗಿಸಲಾಗಿದೆ. ಅರೇ ಸೇನಾ ಹಾಗೂ ಪೊಲೀಸ್‌ ಸಿಬ್ಬಂದಿ ಪ್ರತಿದಿನ ಮೂರು ಸರದಿಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಭದ್ರತಾ ಕೋಣೆಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಮತ ಎಣಿಕೆ ದಿನಾಂಕದವರೆಗೆ ಭದ್ರತಾ ಕೋಣೆಗಳು ಕ್ಯಾಮೆರಾಗಳ ಕಣ್ಗಾವಲಿನಲ್ಲಿ ಇರಲಿವೆ.

ಈ ಸಂದರ್ಭದಲ್ಲಿ ಚುನಾವಣೆ ಸಾಮಾನ್ಯ ವೀಕ್ಷಕರಾದ ಸವೀನ್‌ ಬನ್ಸಾಲ್, ಜಿಲ್ಲಾ ಚುನಾವಣಾಧಿಕಾರಿ ಡಾ| ಎಚ್.ಆರ್‌. ಮಹಾದೇವ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಹಾಗೂ ಎಂಟು ವಿಧಾನಸಭೆ ಮತಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.