ಬೀದರ್: 119 ಹೊಸ ಪಾಸಿಟಿವ್ ಪ್ರಕರಣ ಪತ್ತೆ ; ಒಂದು ಸಾವು

ಒಟ್ಟು 108ಕ್ಕೆ ಏರಿದ ಸೋಂಕಿತರ ಸಾವಿನ ಸಂಖ್ಯೆ ; ಜಿಲ್ಲೆಯಲ್ಲಿ 960 ಸಕ್ರಿಯ ಪ್ರಕರಣ

Team Udayavani, Aug 16, 2020, 10:24 PM IST

ಬೀದರ್: 119 ಹೊಸ ಪಾಸಿಟಿವ್ ಪ್ರಕರಣ ಪತ್ತೆ ; ಒಂದು ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ಸತತ ಎರಡನೇ ದಿನವೂ ಕೋವಿಡ್ 19 ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ.

ರವಿವಾರದಂದು ಜಿಲ್ಲೆಯಲ್ಲಿ 119 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇಂದೂ ಸಹ ಜಿಲ್ಲೆಯಲ್ಲಿ ಓರ್ವ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾನೆ.

ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 3577 ಮತ್ತು ಮೃತರ ಸಂಖ್ಯೆ 108ಕ್ಕೆ ಏರಿಕೆ ಆಗಿದೆ.

ಹುಮನಾಬಾದ ಪಟ್ಟಣದ 50 ವರ್ಷದ ನಿವಾಸಿ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿದ್ದಾರೆ. ತೀವ್ರ ಉಸಿರಾಟದ ತೊಂದರೆ ಲಕ್ಷಣ ಹೊಂದಿದ್ದ ವ್ಯಕ್ತಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು. ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಇಂದಿನ ಹೊಸ ಸೋಂಕಿತರು ಸೇರಿ ಜಿಲ್ಲೆಯಲ್ಲಿ ಈಗ ಪಾಸಿಟಿವ್ ಕೇಸ್‌ಗಳ ಸಂಖ್ಯೆ 3577ಕ್ಕೇರಿದೆ. ರವಿವಾರ 71 ಜನ ಸೇರಿ ಈವರೆಗೆ 2505 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 960 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಈವರೆಗೆ ಜಿಲ್ಲೆಯ 57,069 ಜನವರ ಗಂಟಲ ಮಾದರಿ ತಪಾಸಣೆ ಮಾಡಲಾಗಿದ್ದು, ಈ ಪೈಕಿ 53,001 ಮಂದಿಯ ವರದಿ ನೆಗೆಟಿವ್ ಬಂದಿದೆ. ಇನ್ನೂ 491 ಜನರ ವರದಿ ಬರುವುದು ಬಾಕಿ ಇದೆ.

ತಾಲೂಕುವಾರು ಪಾಸಿಟಿವ್: ಬೀದರ್ ನಗರ- ತಾಲೂಕಿನಲ್ಲಿ 42 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸಂಖ್ಯೆ 1267ಕ್ಕೆ ತಲುಪಿದೆ. ಭಾಲ್ಕಿ ತಾಲೂಕಿನಲ್ಲಿ 34 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 516ಕ್ಕೆ ಏರಿಕೆಯಾಗಿದೆ.

ಔರಾದ- ಕಮಲನಗರ ತಾಲೂಕಿನಲ್ಲಿ 17 ಮಂದಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 531ಕ್ಕೆ ಏರಿದೆ. ಹುಮನಾಬಾದ್- ಚಿಟಗುಪ್ಪ ತಾಲೂಕಿನಲ್ಲಿ 14 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 680ಕ್ಕೆ ಏರಿಕೆ ಆಗಿದೆ.

ಬಸವಕಲ್ಯಾಣ- ಹುಲಸೂರು ತಾಲೂಕಿನ 561 ಜನರಿಗೆ ಸೋಂಕು ತಗುಲಿದೆ. ಅನ್ಯ ಜಿಲ್ಲೆ ಮತ್ತು ರಾಜ್ಯಗಳ ಮೂವರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 22ಕ್ಕೆ ಹೆಚ್ಚಳವಾಗಿದೆ

ಟಾಪ್ ನ್ಯೂಸ್

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.