ಸುರಪುರ ಕ್ಷೇತ್ರಕ್ಕೆ 1280 ಮನೆ ಮಂಜೂರು
Team Udayavani, Jan 8, 2022, 10:50 PM IST
ಸುರಪುರ: ವಸತಿ ಯೋಜನೆ ಅಡಿ ಮತಕ್ಷೇತ್ರಕ್ಕೆ 1,280 ಮನೆಗಳು ಮಂಜೂರಿಯಾಗಿವೆ. ಕ್ಷೇತ್ರದ ಪ್ರತಿ ಗ್ರಾಮ ಪಂಚಾಯತಗಳಲ್ಲಿ ಜ. 10ರಂದು ಮನೆ ಹಂಚಿಕೆಗಾಗಿ ಅರ್ಜಿಸ್ವೀಕರಿಸಲಾಗುತ್ತದೆ. ಅರ್ಹ ಫಲಾನುಭವಿಗಳು ಸರ್ಜಿ ಸಲ್ಲಿಸಬೇಕು ಎಂದು ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಅಧ್ಯಕ್ಷ ಶಾಸಕ ರಾಜುಗೌಡ ತಿಳಿಸಿದ್ದಾರೆ.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಸುರಪುರ ತಾಲೂಕಿನ 14 ಗ್ರಾಪಂಗಳಿಗೆ 540 ಹುಣಸಗಿಯ 18 ಗ್ರಾಪಂ 740 ಸೇರಿ ಒಟ್ಟು 1280 ಮನೆಗಳು ಮಂಜೂರಿಯಾಗಿವೆ. ಈ ಪೈಕಿ ಪರಿಶಿಷ್ಟರಿಗೆ ಶೇ. 17.15, ಪರಿಶಿಷ್ಟ ಪಂಗಡಕ್ಕೆ ಶೇ. 7, ಅಲ್ಪಸಂಖ್ಯಾತರಿಗೆ ಶೇ. 10 ಮತ್ತು ಹಿಂದುಳಿದ ಹಾಗೂ ಸಾಮಾನ್ಯ ವರ್ಗಕ್ಕೆ ಶೇ. 65 ರಷ್ಟು ಮೀಸಲಾತಿ ಕಲ್ಪಿಸಿ ಸರಕಾರ ಆದೇಶಿಸಿದೆ ಪ್ರತಿ ಪಂಚಾಯತಗಳಲ್ಲಿ ಅರ್ಜಿ ಸ್ವೀಕರಿಸಿ ನಂತರ ಗ್ರಾಮ ಸಭೆ ನಡೆಯಿಸಿ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತಿದೆ.
ಪಿಡಿಒ ಮತ್ತು ಕಾರ್ಯದರ್ಶಿಗಳು ನಿರ್ಲಕ್ಷÂ ವಹಿಸದೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಸಬೇಕು. ಆರೋಪಗಳಿಗೆ ಆಸ್ಪದ ಕೊಡದೆ ನಿಜವಾಗಿ ಮನೆ ಇಲ್ಲದ್ದ ಬಡವರನ್ನು ಗುರುತಿಸಿ ಯೋಜನೆ ಯಶಸ್ವಿಗೆ ಶ್ರಮಿಸಬೇಕು ಎಂದು ತಿಳಿಸಿದ್ದಾರೆ. ಅಂಗವಿಕಲರು, ನಿರ್ಗತಿಕರು, ಬೆಂಕಿ ತಗುಲಿ ಮನೆ ಕಳೆದುಕೊಂಡಿದ್ದರೆ ಅವರು ಕೂಡಾ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಭಾವಚಿತ್ರದೊಂದಿಗೆ ಅರ್ಜಿಯನ್ನು ನನ್ನ ವಾಟ್ಸ್‌ಆ್ಯಪ್ ಕಳುಹಿಸಬೇಕು. ಪರಿಶೀಲಿಸಿ ಅವರಿಗೂ ಮನೆ ಒದಗಿಸಿಕೊಡುವ ವ್ಯವಸ್ಥೆ ಮಾಡುವುದಾಗಿ ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.