ರಾಜ್ಯದಲ್ಲಿ 180 ಪಡಿತರ ಅಂಗಡಿ ಲೈಸನ್ಸ್‌ ಅಮಾನತು

Team Udayavani, Jun 11, 2020, 7:38 AM IST

bidar-tdy-2

ಬೀದರ: ಕೋವಿಡ್ ಲಾಕ್‌ಡೌನ್‌ ಸಂಕಷ್ಟದ ವೇಳೆ ಬಡ ಕುಟುಂಬಗಳಿಗೆ ಸಮರ್ಪಕವಾಗಿ ಪಡಿತರ ಆಹಾರಧಾನ್ಯ ಪೂರೈಸದ್ದಕ್ಕೆ ರಾಜ್ಯದ 20 ಜಿಲ್ಲೆಗಳ 180 ಪಡಿತರ ಅಂಗಡಿಗಳ ಪರವಾನಗಿಯನ್ನು ಅಮಾನತು ಮಾಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ. ಗೋಪಾಲಯ್ಯ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಡಿತರವನ್ನು ಬಡವರಿಗೆ ತಲುಪಿಸುವುದೇ ನಮ್ಮ ಜವಾಬ್ದಾರಿ. ಆದರೆ, ಈ ಕರ್ತವ್ಯದಲ್ಲಿ ಕೆಲವೆಡೆ ವಿತರಕರು ಲೋಪ ಎಸಗಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಅಂಗಡಿಗಳನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದರು.

8763 ಕಾರ್ಡ್‌ ವಜಾ: ಬೀದರ ಜಿಲ್ಲೆಯ 191 ಜನ ಸೇರಿ ರಾಜ್ಯದಲ್ಲಿ ಅನರ್ಹರು ಪಡೆದಿದ್ದ 8763 ಬಿಪಿಎಲ್‌ ಪಡಿತರ ಕಾರ್ಡ್‌ ಗಳನ್ನು ರದ್ದು ಮಾಡಲಾಗಿದೆ. ಅನರ್ಹರಿಂದ ಸುಮಾರು 68 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದರು. ತೆರಿಗೆ ಕಟ್ಟುವವರು, ಸರಕಾರಿ ನೌಕರರು, ಅನರ್ಹರು ಪಡಿತರ ಕಾರ್ಡ್‌ ಪಡೆಯುವುದು ಶಿಕ್ಷಾರ್ಹ ಅಪರಾಧ ಎಂದು ಎಚ್ಚರಿಸಿದರು.

ಸಚಿವನಾದ ಮೇಲೆ 20 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಲಾಕ್‌ ಡೌನ್‌ ಜಾರಿಯಾದ ಬಳಿಕ ಏಪ್ರಿಲ್‌ನಿಂದ ಪಡಿತರ ವಿತರಣೆ ಕುರಿತು ಪರಿಶೀಲಿಸಿದ್ದೇನೆ. ಯಾವುದೇ ಲೋಪವಾಗದಂತೆ ಬಡವರಿಗೆ ಪಡಿತರ ವಿತರಿಸುವಂತೆ ಸೂಚಿಸಿದ್ದೇನೆ ಎಂದ ಅವರು, ಬೀದರ ಜಿಲ್ಲೆಯಲ್ಲಿ ಏಪ್ರಿಲ್‌ನಲ್ಲಿ ಶೇ. 91ರಷ್ಟು ಹಾಗೂ ಮೇ ತಿಂಗಳಲ್ಲಿ ಶೇ. 95ರಷ್ಟು ಪಡಿತರ ವಿತರಣೆಯಾಗಿದೆ. ಅನ್ಯ ಜಿಲ್ಲೆ, ಅನ್ಯ ರಾಜ್ಯಗಳ ವಲಸಿಗರು ಜೂನ್‌ ತಿಂಗಳಾಂತ್ಯದವರೆಗೆ ಆಧಾರ್‌ ಕಾರ್ಡ್‌ ತೋರಿಸಿ ಪಡಿತರ ಪಡೆಯಬಹುದು ಎಂದು ತಿಳಿಸಿದರು.

ರಾತ್ರಿ 8ರವರೆಗೆ ರೇಷನ್‌: ಪಡಿತರ ಆಹಾರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ, ಅಂಥವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ರೇಷನ್‌ ಅಂಗಡಿಯವರು ಬಡವರಿಂದ ಹಣ ಪಡೆಯಬಾರದು. ಮಳೆಗಾಲ ಆರಂಭದಿಂದ ಗ್ರಾಮೀಣ ಭಾಗದಲ್ಲಿ ಹಗಲಲ್ಲಿ ರೈತರಿಗೆ ಪಡಿತರ ಪಡೆಯಲು ಸಮಸ್ಯೆಯಾಗುತ್ತಿದೆ ಎಂಬುದು ಗಮನಕ್ಕೆ ಬಂದಿದ್ದು, ಹಾಗಾಗಿ ರಾತ್ರಿ 8 ಗಂಟೆಯವರೆಗೆ ರೇಷನ್‌ ವಿತರಣೆಗೆ ನ್ಯಾಯಬೆಲೆ ಅಂಗಡಿಕಾರರಿಗೆ ಜಿಲ್ಲಾಧಿಕಾರಿ ಮೂಲಕ ಸೂಚಿಸಲಾಗುವುದು ಎಂದರು.

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

1-wewqewqe

Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.