ಕುಡಿಯುವ ನೀರಿಗಾಗಿ ನಿತ್ಯ ಅಲೆಯಬೇಕಿಲ್ಲಿ 1 ಕಿಮೀ!


Team Udayavani, Jan 24, 2019, 8:56 AM IST

bid-3.jpg

ಔರಾದ: ಪಟ್ಟಣದ ರಾಮನಗರ ಬಡಾವಣೆಯಲ್ಲಿ ಕಳೆದ ಎರಡು ವಾರಗಳಿಂದ ಕುಡಿಯಲು ನೀರು ಸರಬರಾಜು ಆಗದಿರುವ ಹಿನ್ನೆಲೆಯಲ್ಲಿ ಬಡಾವಣೆಯ ನಿವಾಸಿಗಳು ಕುಡಿಯುವ ನೀರಿಗಾಗಿ ನಿತ್ಯ ಖಾಸಗಿ ವ್ಯಕ್ತಿಗಳ ಹೊಲಗದ್ದೆಗಳಿಗೆ ಅಲೆಯುವಂತಹ ಅನಿವಾರ್ಯತೆ ಬಂದಿದೆ.

ಇದು ಔರಾದ ಪಪಂ ವ್ಯಾಪ್ತಿಯಲ್ಲಿ ಬರುವ ಹಾಗೂ ಪಟ್ಟಣದಿಂದ 1 ಕಿಮೀ ದೂರದಲ್ಲಿರುವ ಬಡಾವಣೆಯ ನಿವಾಸಿಗಳ ಸ್ಥಿತಿಯಾಗಿದೆ. ಪ್ರತಿವರ್ಷ ಬೇಸಿಗೆ ಆರಂಭವಾಗುವ ಮುನ್ನವೇ ರಾಮನಗರ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗುತ್ತದೆ. ಪಟ್ಟಣ ಪಂಚಾಯತ್‌ ಅಧಿಕಾರಿಗಳು ಹಾಗೂ ಬಡಾವಣೆಯ ನಿವಾಸಿಗಳಿಂದ ಆಯ್ಕೆಯಾದ ಜನ ನಾಯಕರು ಶಾಶ್ವತ ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ ನೀಡಲು ವಿಫಲರಾಗಿದ್ದಾರೆ.

ಬಡಾವಣೆಯಲ್ಲಿ ಕೂಲಿ ಕಾರ್ಮಿಕರು ಹಾಗೂ ಹಿಂದುಳಿದ ವರ್ಗದ ಜನರು ಹೆಚ್ಚಾಗಿ ವಾಸವಾಗಿದ್ದಾರೆ. ರಾಮನಗರ ಬಡಾವಣೆಯಲ್ಲಿ ಒಟ್ಟು ಒಂದು ಸಾವಿರ ಜನಸಂಖ್ಯೆಯಿದೆ. ಬಡಾವಣೆಯಲ್ಲಿನ ಒಂದೇ ಒಂದು ಕೊಳವೆ ಬಾವಿ ಇದೆ. ಕಳೆದ ಆರು ತಿಂಗಳ ಹಿಂದೆ ಬಡಾವಣೆಯಲ್ಲಿನ ಕೊಳವೆ ಬಾವಿ ಹಾಳಾಗಿದೆ. ಹಾಳಾದ ಕೊಳವೆ ಬಾವಿ ದುರಸ್ತಿ ಮಾಡಲು ಅಧಿಕಾರಿಗಳು ಹಾಗೂ ಸದಸ್ಯರು ಮುಂದಾಗಿಲ್ಲ. ವಜರ ಬಾವಿಯಿಂದ ನೀರು ಸರಬರಾಜಾಗುವ ಮೋಟಾರ್‌ ಕೂಡಾ ಹಾಳಾದ ಹಿನ್ನೆಲೆಯಲ್ಲಿ ಇಲ್ಲಿನ ನಿವಾಸಿಗಳು ನಿತ್ಯ ನೀರಿಗಾಗಿ ಅಲೆಯುವಂತಹ ಅನಿವಾರ್ಯತೆ ಬಂದಿದೆ.

ಈಗ ರಾಮನಗರ ಬಡಾವಣೆಯಲ್ಲಿ ಪಪಂನಿಂದ ಸರಬರಾಜು ಮಾಡುವ ನೀರು ಕಳೆದ ಎಂಟು ದಿನಗಳಿಂದ ಸರಬರಾಜು ಆಗುತ್ತಿಲ್ಲ. ಇದರಿಂದ ಬಡಾವಣೆ ನಿವಾಸಿಗಳು 1 ಕಿಮೀ ದೂರದಲ್ಲಿರುವ ಔರಾದ ಪಟ್ಟಣಕ್ಕೆ ಬಂದು ನೀರು ತೆಗೆದುಕೊಂಡು ಹೋಗಬೇಕು.

ಬಡಾವಣೆಯಲ್ಲಿನ ನಿವಾಸಿಗಳಿಗೆ ಕುಡಿಯುವ ನೀರಿನ ಶಾಶ್ವತ ಪರಿಹಾರ ನೀಡುವಂತೆ ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಬಡಾವಣೆಯ ನಿವಾಸಿಗಳು ಪಪಂ ಅಧಿಕಾರಿಗಳಿಗೆ ಹಾಗೂ ಪಪಂ ಸದಸ್ಯರಿಗೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಬಡಾವಣೆಯಲ್ಲಿ ಹಾಳಾದ ಕೊಳವೆ ಬಾವಿ ಮೋಟಾರ್‌ ದುರಸ್ತಿ ಮಾಡಿದರೆ ಬಡಾವಣೆ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ ಸಿಕ್ಕಂತಾಗುತ್ತದೆ ಎನ್ನುವುದು ನಿವಾಸಿಗಳ ಅಳಲು.ಬಡಾವಣೆಯಲ್ಲಿನ ಕೆಲ ಶ್ರೀಮಂತರು ತಮ್ಮ ಮನೆಗಳಿಗೆ 200ಲೀಟರ್‌ ನೀರಿಗೆ 300 ರೂ. ಹಣ ನೀಡಿ ಟ್ಯಾಂಕರ್‌ ಮೂಲಕ ಪಡೆದುಕೊಳ್ಳುವಂತಹ ಸ್ಥಿತಿ ಬಂದಿದೆ. ಕೂಲಿ ಕಾರ್ಮಿಕರು ಹಾಗೂ ಹಿಂದುಳಿದ ವರ್ಗದ ಜನರು ಒಂದು ಕಿಮೀ ದೂರದಿಂದ ಕಾಲ್ನಡಿಗೆ ಮೂಲಕ ಹೋಗಿ ನೀರು ತರುವಂತಹ ಸ್ಥಿತಿ ಬಂದಿದೆ.

ರಾಮನಗರ ಬಡಾವಣೆಯಲ್ಲಿ ಹಾಳಾದ ಮೋಟರ್‌ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಪಟ್ಟಣದಲ್ಲಿನ ಸಮಸ್ಯೆಗಳು ಇದ್ದರೆ ನಮಗೂ ತಿಳಿಸಿ. ಆವಾಗ ಇಂಥ ವಿಷಯಗಳು ಪರಿಹರಿಸಲು ಯತ್ನಿಸಲಾಗುವುದು.
•ಸುನೀಲಕುಮಾರ ದೇಶಮುಖ, ಪಪಂ ಅಧ್ಯಕ್ಷ.

ಪ್ರತಿ ವರ್ಷ ಬೇಸಿಗೆ ಆರಂಭವಾದರೆ ಸಾಕು ಬಡಾವಣೆಯಲ್ಲಿ ನೀರಿನ ಸಮಸ್ಯೆ ಉಲ್ಬಣವಾಗುತ್ತದೆ. ಬಡಾವಣೆಯಲ್ಲಿರುವ ಕೊಳವೆ ಬಾವಿ ಹಾಳಾಗಿ ಆರು ತಿಂಗಳಾಗಿದೆ. ದುರಸ್ತಿ ಮಾಡಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಈಗಲಾದರೂ ಹಾಳಾದ ಮೋಟರ್‌ ದುರಸ್ತಿ ಮಾಡಲು ಅಧಿಕಾರಿಗಳು ಮುಂದಾಗಬೇಕು. ಇಲ್ಲವಾದಲ್ಲಿ ಪಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತೇವೆ.
•ಚಂದ್ರಕಲಾ ಒಡೆಯರ್‌, ಬಡಾವಣೆ ನಿವಾಸಿ.

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.