ರಾಹುಲ್ ಸಮಾವೇಶಕ್ಕೆ 2 ಲಕ್ಷ ಜನ: ಖಂಡ್ರೆ
Team Udayavani, Aug 6, 2018, 11:36 AM IST
ಬೀದರ: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆ.13ರಂದು ಜಿಲ್ಲೆಗೆ ಆಗಮಿಸುತ್ತಿದ್ದು, ಸುಮಾರು 2 ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.
ರಾಹುಲ್ ಗಾಂಧಿ ಆಗಮನ ಹಿನ್ನೆಲೆಯಲ್ಲಿ ನಗರದ ಪಕ್ಷದ ಕಚೇರಿಯಲ್ಲಿ ಪದಾಧಿಕಾರಿಗಳು ಹಾಗೂ ಮುಖಂಡರೊಂದಿಗೆ ನಡೆದ ಪೂರ್ವಭಾವಿ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ನೆಹರು ಕ್ರೀಡಾಂಗಣದಲ್ಲಿ ಸಮಾವೇಶ ಆಯೋಜಿಸಿದ್ದು, ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಎರಡು ಲಕ್ಷ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲೆಗೆ ಕಾರ್ಯಾಧ್ಯಕ್ಷ ಹುದ್ದೆ, ಸಚಿವ ಸ್ಥಾನ, ವಿಧಾನ ಪರಿಷತ್ ಸದಸ್ಯರ ನೇಮಕ ಮಾಡುವ ಮೂಲಕ ಪಕ್ಷದ ಹೈಕಮಾಂಡ್ ಜಿಲ್ಲೆಗೆ ಬಂಪರ್ ಕೊಡುಗೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಪಕ್ಷದ ಜಿಲ್ಲಾ ಘಟಕದಿಂದ ಕೃತಜ್ಞತಾ ಸಮಾವೇಶ ಏರ್ಪಡಿಸಲಾಗಿದೆ ಎಂದರು.
ಅಂದು ಬೆಳಗ್ಗೆ 11ಗಂಟೆಗೆ ದೆಹಲಿಯಿಂದ ನಗರಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ, ಮಧ್ಯಾಹ್ನ 2 ಗಂಟೆಗೆವರೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ತೆಲಂಗಾಣ ರಾಜ್ಯಕ್ಕೆ ಪ್ರವಾಸ ಬೆಳೆಸಲಿದ್ದಾರೆ. ರಾಜ್ಯಾಧ್ಯಕ್ಷ
ದಿನೇಶ್ ಗುಂಡುರಾವ್, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಹಾಗೂ
ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಸಂಸದ ವೀರಪ್ಪ ಮೋಯ್ಲಿ ಸೇರಿದಂತೆ ಹಲವು ನಾಯಕರು ಆಗಮಿಸಲಿದ್ದಾರೆ ಎಂದರು.
ಜೆಡಿಎಸ್ ಜೊತೆ ಮೈತ್ರಿ: ಲೋಕಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ಹಾಗೂ ಜೆಡಿಎಸ್ ಚುನಾವಣೆ ಪೂರ್ವ ಮೈತ್ರಿ ಮಾಡಿಕೊಳ್ಳಲು ಎರಡೂ ಪಕ್ಷಗಳು ನಿರ್ಧರಿಸಿವೆ. ಅಲ್ಲದೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಥಳೀಯವಾಗಿ ಹೊಂದಾಣಿಕೆ ಸಾಧ್ಯತೆ ಇದ್ದರೆ ಮೈತ್ರಿ ಮಾಡಿಕೊಳ್ಳಬಹುದು. ಲೋಕಸಭೆ ಚುನಾವಣೆಯ ಸೀಟುಗಳ ಹಂಚಿಕೆ ಇನ್ನಷ್ಟೇ
ಬಗೆಹರಿಯಬೇಕಿದೆ. ಈ ಸಂಬಂಧ ಎರಡೂ ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ.
ರಾಹುಲ್ ಪ್ರವಾಸವನ್ನು ಚುನಾವಣೆ ಪ್ರಚಾರದ ಭಾಗವಾಗಿಯೂ ಪರಿಗಣಿಸಬಹುದು. ಅದೇ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಎಲ್ಲರೂ ಒಟ್ಟಾಗಿ ಕೆಲಸ
ಮಾಡಲಿದ್ದೇವೆ ಎಂದರು. ನಿಗಮ ಮಂಡಳಿ ಸ್ಥಾನ: ಸದ್ಯ ನಿಗಮ ಮಂಡಳಿ ಸ್ಥಾನ ಹಂಚಿಕೆ ಕುರಿತು ಚರ್ಚೆಗಳು
ನಡೆಯುತ್ತಿವೆ. ಶೀಘ್ರದಲ್ಲಿಯೇ ಮೊದಲ ಪಟ್ಟಿ ಹೊರಬರಲಿದ್ದು, ಶಾಸಕರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಇನ್ನುಳಿದಂತೆ ಪಕ್ಷದ ನಿಷ್ಠಾವಂತರಿಗೆ ಸ್ಥಾನಗಳನ್ನು ನೀಡುವ ಚಿಂತನೆಗಳು ಇವೆ. ಪಕ್ಷದಲ್ಲಿ ಯಾವುದೇ ಗೊಂದಲಗಳು ಇಲ್ಲ. ಎಲ್ಲರೂ ಏಕತೆಯಿಂದ ಕೆಲಸ ಮಾಡುತ್ತಿದ್ದೇವೆ ಎಂದರು.
ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಪಾಟೀಲ, ಶಾಸಕರಾದ ರಹೀಂ ಖಾನ್, ಬಿ.ನಾರಾಯಣರಾವ್,
ವಿಧಾನ ಪರಿಷತ್ ಸದಸ್ಯ ಡಾ| ಚಂದ್ರಶೇಖರ ಪಾಟೀಲ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Bidar: ಗುತ್ತಿಗೆದಾರ ಸಚಿನ್ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.