2326 ಮಕ್ಕಳಿಗೆ ಸಿಕ್ಕಿಲ್ಲ ಸೈಕಲ್
•3,626 ವಿದ್ಯಾರ್ಥಿಗಳ ಪೈಕಿ 1,300 ವಿದ್ಯಾರ್ಥಿಗಳಿಗೆ ಮಾತ್ರ ವಿತರಿಸಲಾಗಿದೆ ಉಚಿತ ಸೈಕಲ್
Team Udayavani, Jul 30, 2019, 12:22 PM IST
ಬಸವಕಲ್ಯಾಣ: ವಿದ್ಯಾರ್ಥಿಗಳಿಗೆ ವಿತರಿಸಲು ಸಿದ್ಧಗೊಂಡಿರುವ ಸೈಕಲ್ಗಳನ್ನು ಬಂಗ್ಲಾ ರಸ್ತೆಯ ಹಳೆ ವಿದ್ಯಾಪೀಠ ಕಟ್ಟಡದ ಗೋದಾಮ ಬಳಿ ನಿಲ್ಲಿಸಲಾಗಿದೆ.
ಬಸವಕಲ್ಯಾಣ: ಶಾಲೆಗಳು ಶುರುವಾಗಿ ಬರೊಬ್ಬರಿ ಎರಡು ತಿಂಗಳು ಕಳೆಯುತ್ತ ಬಂದರೂ ಕೆಲವೇ ಕೆಲವು ಶಾಲೆಗಳ ವಿದ್ಯಾರ್ಥಿಗಳಿಗೆ ಸೈಕಲ್ ದೊರೆತಿದ್ದು, ಹಲವು ಶಾಲೆಗಳ ವಿದ್ಯಾರ್ಥಿಗಳ ಕೈಗೆ ಇನ್ನು ಸೈಕಲ್ ದೊರೆತಿಲ್ಲ.
ಗ್ರಾಮೀಣ ಹಾಗೂ ನಗರ ಪ್ರದೇಶದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಸರ್ಕಾರ ಈ ಸೈಕಲ್ಗಳನ್ನು ಉಚಿತವಾಗಿ ವಿತರಿಸುತ್ತಿದ್ದು, ಈ ಸಲ ವಿಳಂಬವಾಗಿದ್ದರಿಂದ ಸಾರಿಗೆಗೆ ಹಣ ಖರ್ಚು ಮಾಡಿ ಶಾಲೆಗಳಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿ ವ್ಯಾಪ್ತಿಗೆ ಒಳಪಡುವ ತಾಲೂಕಿನ 114 ಸರ್ಕಾರಿ ಶಾಲೆಗಳಲ್ಲಿ ಪ್ರಸಕ್ತ ವರ್ಷ 8ನೇ ತರಗತಿಗೆ ಪ್ರವೇಶ ಪಡೆದ 3,626 ವಿದ್ಯಾರ್ಥಿಗಳ ಪೈಕಿ ಕೇವಲ 1,300 ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಸೈಕಲ್ ವಿತರಿಸಲಾಗಿದ್ದು, ಇನ್ನೂ 2,326 ವಿದ್ಯಾರ್ಥಿಗಳಿಗೆ ಸೈಕಲ್ಗಳನ್ನು ವಿತರಿಸಬೇಕಿದೆ.
ಯಡಿಯೂರಪ್ಪನವರು ಆಗ ಮುಖ್ಯಮಂತ್ರಿ ಆಗಿದ್ದಾಗ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅನುಕೂಲವಾಗಲಿ ಎಂಬ ಉದ್ದೇಶದಿಂದ ಉಚಿತ ಸೈಕಲ್ ವಿತರಣೆ ಯೋಜನೆ ಜಾರಿಗೆ ತಂದಿದ್ದರು. ಆದರೆ ಟೆಂಡರ್ ಪಡೆದ ಗುತ್ತಿಗೆದಾರರು ಶಾಲೆಗಳಿಗೆ ಜೂನ್ ತಿಂಗಳಲ್ಲೇ ಬಿಡಿ ಭಾಗಗಳನ್ನು ಪೂರೈಸುವ ಬದಲು, ಈಗ 15 ದಿವಸಗಳ ಹಿಂದಷ್ಟೆ ಪೂರೈಸಿದ್ದಾರೆ. ಹೀಗಾಗಿ ಅವುಗಳನ್ನು ಬಂಗ್ಲಾ ರಸ್ತೆಯ ಹಳೆ ವಿದ್ಯಾಪೀಠದ ಕಟ್ಟಡದಲ್ಲಿ ಜೋಡಿಸಲಾಗುತ್ತಿದ್ದು, ಪ್ರತಿನಿತ್ಯ ಜೋಡಣೆಯಾದಷ್ಟು ಸೈಕಲ್ಗಳನ್ನು ಆಯಾ ಶಾಲೆಗಳಿಗೆ ವಿತರಿಸಲಾಗುತ್ತಿದೆ. ಆದಷ್ಟು ಬೇಗ ಎಲ್ಲ ಶಾಲೆಗಳಿಗೆ ಸೈಕಲ್ ವಿತರಿಸಲಾಗುವುದು ಎಂದು ಮಂಠಾಳ ಬಿಆರ್‌ಸಿ ವಿನೋದ ರಾಠೊಡ ತಿಳಿಸಿದ್ದಾರೆ.
ಶಾಲೆ ಆರಂಭದಲ್ಲೇ ಬರಬೇಕಿದ್ದ ಸೈಕಲ್ನ ಬಿಡಿ ಭಾಗಗಳು, ಈಗ 15 ದಿನಗಳ ಹಿಂದಷ್ಟೆ ಬಂದಿವೆ. ಜೋಡಿಸಲಾದ ಸೈಕಲ್ಗಳನ್ನು ನಿತ್ಯ ಶಾಲೆಗಳಿಗೆ ಪೂರೈಸಲಾಗುತ್ತಿದೆ. ಆದಷ್ಟು ಬೇಗ ಎಲ್ಲ ಶಾಲೆಗಳಿಗೆ ವಿತರಿಸಲು ಪ್ರಯತ್ನಿಸಲಾಗುವುದು.•ವಿನೋದ ರಾಠೊಡ, ಬಿಆರ್‌ಸಿ
ಶಾಲೆಗಳು ಆರಂಭವಾಗಿ ಎರಡು ತಿಂಗಳು ಕಳೆದಿವೆ. ಬಹುತೇಕ ಶಾಲೆಗಳಲ್ಲಿ ಸೈಕಲ್ ವಿತರಿಸಿಲ್ಲ. ಇದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ. ಆದಷ್ಟು ಬೇಗ ಎಲ್ಲ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸಲಾಗುವುದು.•ಲೋಕೇಶ ಮೋಳಕೇರೆ, ಎಬಿವಿಪಿ ಮುಖಂಡ
•ವೀರಾರೆಡ್ಡಿ ಆರ್.ಎಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.