ವಿದ್ಯಾರ್ಥಿ ವೇತನ ಪರೀಕ್ಷೆಗೆ 2500 ಮಂದಿ ಹಾಜರು
Team Udayavani, Feb 18, 2020, 1:09 PM IST
ಭಾಲ್ಕಿ: ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ವಿದ್ಯಾರ್ಥಿ ವೇತನ ಪರೀಕ್ಷೆಗೆ 2500 ವಿದ್ಯಾರ್ಥಿಗಳು ಹಾಜರಾಗಿದ್ದರು.
ಗುರುಕುಲದ ಪರಿಸರದಲ್ಲಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕು ಸೇರಿದಂತೆ ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ದಾವಣಗೆರೆ, ಬಳ್ಳಾರಿ, ಬೆಳಗಾವಿ ಹಾಗೂ ಮಹಾರಾಷ್ಟ್ರದ ಉದಗೀರ, ಲಾತೂರ, ನಾಂದೇಡ ಮತ್ತು ತೆಲಂಗಾಣದ ಸಂಗಾರೆಡ್ಡಿ, ಹೈದ್ರಾಬಾದ್, ಆಂಧ್ರಪ್ರದೇಶದ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್ ಎಲ್‌ಸಿ ವ್ಯಾಸಂಗ ಮಾಡುತ್ತಿರುವ ಕನ್ನಡ ಮಾಧ್ಯಮದ 1300 ವಿದ್ಯಾರ್ಥಿಗಳು ಹಾಗೂ ಆಂಗ್ಲ ಮಾಧ್ಯಮದ 1200 ವಿದ್ಯಾರ್ಥಿಗಳು 100 ನಿಮಿಷದ ಪ್ರಶ್ನೆ ಪತ್ರಿಕೆಯಲ್ಲಿ ಗರಿಷ್ಠ 400 ಅಂಕದ ಭೌತಶಾಸ್ತ್ರ, ಜೀವಶಾಸ್ತ್ರ, ಗಣಿತ, ರಸಾಯನಶಾಸ್ತ್ರ ಸಂಬಂಧಿಸಿದ ಎಸ್ ಎಸ್‌ಎಲ್‌ಸಿ ಪಠ್ಯಕ್ರಮದ ಪ್ರಶ್ನೆಗಳಿಗೆ ಉತ್ತರಿಸಿದರು.
ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರ ಮಾರ್ಗದರ್ಶನದಲ್ಲಿ ಆಡಳಿತಾಧಿಕಾರಿ ಮೋಹನ ರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಸಿಬ್ಬಂದಿ ಪ್ರವೇಶ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸಿದರು.
ತಾಲೂಕು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಸಂಜೀವಕುಮಾರ ಜುಮ್ಮಾ, ಧನರಾಜ ಬಂಬುಳಗೆ ಇದ್ದರು. ಪರೀಕ್ಷೆಯಲ್ಲಿ ಮೊದಲ ಶ್ರೇಣಿಯ 11 ವಿದ್ಯಾರ್ಥಿಗಳಿಗೆ ತಲಾ 1 ಲಕ್ಷ ರೂ. ದ್ವಿತೀಯ ಶ್ರೇಣಿ ಪಡೆಯುವ 200 ವಿದ್ಯಾರ್ಥಿಗಳಿಗೆ ತಲಾ 51 ಸಾವಿರ ರೂ. ಮತ್ತು ತೃತೀಯ ಶ್ರೇಣಿ ಪಡೆಯುವ 500 ವಿದ್ಯಾರ್ಥಿಗಳಿಗೆ ತಲಾ 21 ಸಾವಿರ ರೂ. ವಿದ್ಯಾರ್ಥಿ ವೇತನ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.