3.5 ಕೋಟಿ ವೆಚ್ಚದ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
Team Udayavani, Jun 3, 2021, 9:37 PM IST
ಹುಮನಾಬಾದ: ದೇಶದಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ದರ ಗಗನಕ್ಕೆ ಮುಟ್ಟಿದ್ದು, ಮೋದಿ ಮೋದಿ ಎನ್ನುವ ಯುವಕರು ಸರ್ಕಾರದ ಆಡಳಿತದ ಬಗ್ಗೆ ಪ್ರಶ್ನಿಸಬೇಕು. ಕಾಂಗ್ರೆಸ್ ಆಡಳಿತ ಅವಧಿ ಹಾಗೂ ಇಂದಿನ ಸರ್ಕಾರದ ಆಡಳಿತ ಕುರಿತು ತಿಳಿದುಕೊಳ್ಳಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು. ಘೋಡವಾಡಿ ಗ್ರಾಮದಲ್ಲಿ ಕೆಕೆಆರ್‌ಡಿಬಿ ಯೋಜನೆಯಡಿ 3.5 ಕೋಟಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ನಂತರ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಆಡಳಿತ ಅವಧಿ ಯಲ್ಲಿ ಬಡವರ ಪರ ಯೋಜನೆಗಳು ಹಾಗೂ ಜನರಿಗೆ ಭಾರವಾಗದಂತೆ ಸರ್ಕಾರದ ಕಾರ್ಯಕ್ರಮ ನಡೆಯುತ್ತಿದ್ದವು. ಘೋಡವಾಡಿ ಗ್ರಾಮ ಧಾರ್ಮಿಕ ಕ್ಷೇತ್ರವಾಗಿದ್ದು, ಮೂರು ರಾಜ್ಯಗಳ ಲಕ್ಷಾಂತರ ಜನರು ಇಲ್ಲಿಗೆ ಪ್ರತಿ ವರ್ಷ ಭೇಟಿ ನೀಡಿ ಇಸೆ¾„ಲ್ ಖಾದರಿ ಗರ್ದಾ ದರ್ಶನ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಕೆರೆ ಮಹತ್ವ ಹೆಚ್ಚಿದ್ದು, ಕೆರೆ ಅಭಿವೃದ್ಧಿ ಕಾರ್ಯಕ್ಕೆ ಇದೀಗ ಚಾಲನೆ ನೀಡಲಾಗಿದ್ದು, ಮುಂದಿನ ನಾಲ್ಕು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. 1 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯ ಮಾಡಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ನಡೆಯುತ್ತಿದ್ದ ಕೋವಿಡ್ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ, ಕಡ್ಡಾಯವಾಗಿ ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು. ದೇಶದಲ್ಲಿ 20 ಕೋಟಿಗೂ ಅಧಿ ಕ ಜನರು ಲಸಿಕೆ ಪಡೆದಿದ್ದಾರೆ. ಯಾವುದೇ ಹೆದರಿಕೆ ಇಲ್ಲದೆ ಲಸಿಕೆ ಪಡೆಯುವಂತೆ ತಿಳಿಸಿದರು. ಈ ವೇಳೆ ಜಿಪಂ ಸದಸ್ಯ ಲಕ್ಷ್ಮಣರಾವ್ ಬುಳ್ಳಾ, ಡಾ| ಪ್ರಕಾಶ ಪಾಟೀಲ, ಗ್ರಾಪಂ ಅಧ್ಯಕ್ಷ ದತ್ತು ಕಾಳೆ, ನ್ಯಾಯವಾದಿ ಖಲೀಲ್ ಸಾಬ್, ತಹಶೀಲ್ದಾರ್ ನಾಗಯ್ನಾ ಹಿರೇಮಠ, ಡಾ| ಗೋವಿಂದ್, ಪಿಆರ್‌ಇ ಎಇಇ ಹುಮನಾಬಾದ: ಘೋಡವಾಡಿ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಾಜಶೇಖರ ಪಾಟೀಲ ಬುಧವಾರ ಚಾಲನೆ ನೀಡಿದರು. ವಾಮನರಾವ್ ಜಾಧವ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.