30 ಕೋಟಿ ರೂ. ವೆಚ್ಚದ ವರ್ಕ್‌ಶಾಪ್‌ ಶೀಘ್ರ ಆರಂಭ


Team Udayavani, Aug 29, 2022, 2:22 PM IST

12-workshop

ಭಾಲ್ಕಿ: ಪಟ್ಟಣದ ಲಕ್ಷ್ಮೀಬಾಯಿ ಭೀಮಣ್ಣ ಖಂಡ್ರೆ ಸರಕಾರಿ ಐಟಿಐ ಕಾಲೇಜಿನ ಆವರಣದಲ್ಲಿ ಪ್ರಗತಿಯಲ್ಲಿರುವ ಟಾಟಾ ವರ್ಕ್‌ಶಾಪ್‌ಗೆ ಶಾಸಕ ಈಶ್ವರ ಖಂಡ್ರೆ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು, ಪ್ರತಿಷ್ಠಿತ ಕೈಗಾರಿಕಾ ಕಂಪನಿಗಳಲ್ಲಿ ಸ್ಥಳೀಯ ಯುವ ಅಭ್ಯರ್ಥಿಗಳು, ನಿರುದ್ಯೋಗಿ ಯುವಕರಿಗೆ ಉದ್ಯೋಗ ಸಿಗುವಂತೆ ಮತ್ತು ಸ್ವಂತ ಉದ್ಯಮ ಆರಂಭಿಸುವಂತೆ ಅಣಿಗೊಳಿಸುವ ಉದ್ದೇಶದಿಂದ ಟಾಟಾ ಟೆಕ್ನಾಲಜೀಸ್‌ ಸಹಯೋಗದಲ್ಲಿ ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಉನ್ನತೀಕರಿಸಿ ತಾಂತ್ರಿಕ ಚಟುವಟಿಕಾ ಕೇಂದ್ರವನ್ನಾಗಿ ಪರಿವರ್ತಿಸಲಾಗುತ್ತಿದೆ. ಇದರಿಂದ ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ 11 ವಿವಿಧ ವಲಯಗಳಲ್ಲಿ ತರಬೇತಿ ಸಿಗಲಿದೆ ಎಂದರು.

ಕೌಶಲಾಭಿವೃದ್ಧಿ ಅಪೇಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ತಜ್ಞರಿಂದ ಶಿಕ್ಷಣ, ಆಧುನಿಕ ಉಪಕರಣ ಬಳಸಿ ಪ್ರಾಯೋಗಿಕ ತರಬೇತಿ ನೀಡುವುದು, ಕೃಷಿ, ವಾಹನೋದ್ಯಮ, ಗೃಹ ಬಳಕೆಯ ವಿದ್ಯುನ್ಮಾನ ಉಪಕರಣಗಳು, ವಿದ್ಯುತ್‌ ಚಾಲಿತ ವಾಹನಗಳು, ಪ್ಯಾಕೇಜಿಂಗ್‌, ಔಷಧೀಯ ಉದ್ಯಮ, ಕರಕುಶಲ ವಸ್ತುಗಳ ಆಟಿಕೆಗಳ ಉದ್ಯಮ ಸೇರಿ ವಿವಿಧ ವಲಯಗಳಲ್ಲಿ ತರಬೇತಿ ನೀಡಲಾಗುತ್ತದೆ ಎಂದರು. ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗಳು, ಪಿಯುಸಿ, ಐಟಿಐ, ವೊಕೇಷನಲ್‌, ಪದವಿ, ಇಂಜಿನಿಯರಿಂಗ್‌ ಸೇರಿ ವಿವಿಧ ಕೋರ್ಸ್‌ನ ವಿದ್ಯಾರ್ಥಿಗಳು ಒಂದು ಮತ್ತು ಎರಡು ವರ್ಷ ಅವಧಿಯ ಶಿಕ್ಷಣ ತರಬೇತಿ ಪಡೆಯಬಹುದಾಗಿದೆ. ಈ ವರ್ಕ್‌ಶಾಪ್‌ನಲ್ಲಿ ಉಪಕರಣಗಳ ಜೋಡಣೆ ನಡೆಯುತ್ತಿದ್ದು, ಶೀಘ್ರ ಆರಂಭಿಸಲಾಗುವುದು ಎಂದು ಹೇಳಿದರು.

ನಮ್ಮ ಭಾಗದ ರೈತರು, ಕೂಲಿ ಕಾರ್ಮಿಕರು, ಬಡವರ ಮಕ್ಕಳು, ನಿರುದ್ಯೋಗ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮುಂಬರುವ ದಿನಗಳಲ್ಲಿ ಉತ್ತಮ ತರಬೇತಿ ಪಡೆಯುವ ಯುವಕರ ಮನೆ ಬಾಗಿಲಿಗೆ ಉದ್ಯೋಗ ಹುಡುಕಿಕೊಂಡು ಬರಲಿವೆ ಎಂದು ತಿಳಿಸಿದರು.

ಪುರಸಭೆ ಅಧ್ಯಕ್ಷ ಅನಿಲ ಸುಂಟೆ, ಉಪಾಧ್ಯಕ್ಷ ಅಶೋಕ ಗಾಯಕವಾಡ್‌, ಐಟಿಐ ಪ್ರಾಚಾರ್ಯ ಲಕ್ಷ್ಮೀಕಾಂತ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

1-wewqewqe

Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

10

Mangalore: ಅಡ್ಯಾರ್‌ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ

2-dandeli

Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ

1-thirthahalli

Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.