ಮಾಸ್ಕ್ ಧರಿಸದವರಿಗೆ ದಂಡ ಕಾರ್ಯಾಚರಣೆ
Team Udayavani, Jun 29, 2020, 9:02 AM IST
ಬೀದರ: ನಗರದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಓಡಾಡುವ, ಸಾಮಾಜಿಕ ಅಂತರ ಕಾಪಾಡದೇ ಇರುವವರಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವ ವ್ಯಕ್ತಿಗಳಿಗೆ ದಂಡ ವಿಧಿಸಿ ತಿಳಿವಳಿಕೆ ಮೂಡಿಸುವ ವಿಶಿಷ್ಟ ಕಾರ್ಯಾಚರಣೆ ರವಿವಾರ ನಡೆಸಲಾಯಿತು.
ಜಿಲ್ಲಾಧಿಕಾರಿ ನಿರ್ದೇಶನದಂತೆ 18 ಇಲಾಖೆಗಳ ಅಧಿಕಾರಿಗಳ ತಂಡದಿಂದ ಬೀದರ ನಗರಾದ್ಯಂತ ಬೆಳಗ್ಗೆಯಿಂದಲೇ ಬಿರುಸಿನ ಸಂಚಾರ ನಡೆಯಿತು. ಕೋವಿಡ್-19 ಸೋಂಕು ತಡೆಗೆ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಎಲ್ಲೆಂದರಲ್ಲಿ ಉಗುಳಬಾರದು ಎನ್ನುವ ನಿಯಮಗಳನ್ನು ಉಲ್ಲಂಘಿ ಸಿದವರ ಮೇಲೆ ಸ್ಥಳದಲ್ಲೇ ಅ ಧಿಕಾರಿಗಳು 200 ರೂ. ದಂಡ ವಿಧಿಸಿ ಬಿಸಿ ಮುಟ್ಟಿಸಿದರು.
ವಿವಿಧ 18 ಇಲಾಖೆಗಳ ಅಧಿಕಾರಿಗಳು ತಮಗೆ ಹಂಚಿಕೆಯಾದ 1ರಿಂದ 35ವಾರ್ಡ್‌ಗಳಲ್ಲಿ ಪೊಲೀಸ್ ಸಿಬ್ಬಂದಿ ಜೊತೆಗೆ ಸಂಚರಿಸಿ ದಂಡ ವಿಧಿಸಿದರು. ಹೊಟೇಲ್ ಮತ್ತು ಅಂಗಡಿಗಳಲ್ಲಿನ ಸ್ಥಿತಿಗತಿ ಪರಿಶೀಲಿಸಿದರು. ದೈಹಿಕ ಅಂತರಕ್ಕೆ ವ್ಯವಸ್ಥೆ ಮಾಡದ ಕೆಲವು ಹೊಟೇಲ್‌ಗಳ ಮಾಲೀಕರಿಗೆ, ಅಂಗಡಿಗಳಲ್ಲಿ ಸ್ಯಾನಿಟೈಜರ್ ಇಟ್ಟಿರದ, ಮಾಸ್ಕ್ ಧರಿಸದ ಕೆಲವು ಅಂಗಡಿಗಳ ಮಾಲೀಕರಿಗೂ ದಂಡ ವಿಧಿಸಿದರು. ಜಿಲ್ಲಾದ್ಯಂತ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕೋವಿಡ್ ನಿಯಮಗಳನ್ನು ಕೆಲವರು ಉಲ್ಲಂಘಿಸುವುದು ಕಂಡು ಬರುತ್ತಿದೆ. ವೈಯಕ್ತಿಕ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದಾಗಿ ಮಾಸ್ಕ್ ಧರಿಸುವುದು ಎಲ್ಲರ ಜವಾಬ್ದಾರಿಯಾಗಲಿ, ಇದು ಎಲ್ಲರಿಗೂ ಪ್ರೇರಣೆಯಾಗಲಿ ಎನ್ನುವ ಸಂದೇಶ ಸಾರ್ವಜನಿಕರಿಗೆ ಹೋಗುವ ನಿಟ್ಟಿನಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದ್ದು, ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಮಾಸ್ಕ್ ಧರಿಸುವ ಜತೆಗೆ ಸುರಕ್ಷಿತ ಅಂತರ ಕಾಪಾಡಿ ಸಮಾಜದ ಸ್ವಾಸ್ಥ್ಯಕಾಪಾಡಲು ಸಹಕರಿಸಬೇಕೆಂದು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.