ಸರ್ಕಾರಿ ಹಣದಲ್ಲಿ ಸಾಧನಾ ಸಮಾವೇಶ: ಖಾಶೆಂಪುರ

Team Udayavani, Jan 9, 2018, 12:10 PM IST

bidar-3.jpg

ಔರಾದ: ಸರ್ಕಾರದ ಹಣದಲ್ಲಿ ಕಾಂಗ್ರೆಸ್‌ ಪಕ್ಷದ ಸಾಧನಾ ಸಮಾವೇಶ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಜನತೆ ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸಲು ಮುಂದಾಗಬೇಕು ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ ಹೇಳಿದರು.

ಪಟ್ಟಣದ ಸಣ್ಣ ನಿರಾವರಿ ಇಲಾಖೆ ಕಚೇರಿ ಆವರಣದಲ್ಲಿ ಜೆಡಿಎಸ್‌ ತಾಲೂಕು ಘಟಕದಿಂದ ಆಯೋಜಿಲಾಗಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತಾಡಿದರು. ಸಾಲದ ಸುಳಿಯಲ್ಲಿ ಸಿಲುಕಿ ನಾಡಿನ ಅನ್ನದಾತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಸಂಪೂರ್ಣ ಸಾಲಮನ್ನಾ ಮಾಡದೇ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಅಲ್ಪ ಪ್ರಮಾಣದ ಸಾಲ ಮನ್ನಾ ಮಾಡಿ ರೈತರ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಡಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್‌ ಮಾತನಾಡಿ, ಬಿಜೆಪಿ ಮುಖಂಡರು ಚುನಾವಣೆ ಸಮಯದಲ್ಲಿ ಮಹಾನ್‌ ವ್ಯಕ್ತಿಗಳ ಹೆಸರಿನಲ್ಲಿ ಮತಗಳನ್ನು ಪಡೆದು ಅಧಿ ಕಾರಕ್ಕೆ ಬಂದ ತಕ್ಷಣ ಅವರನ್ನು ಮರೆತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ಜನರ ಕಲ್ಯಾಣಕ್ಕಾಗಿ ಭಾರತದ ಸಂವಿಧಾನ ರಚಿಸಲಾಗಿದೆ. ಅದನ್ನು ತಿದ್ದುಪಡಿ ಮಾಡುತ್ತೇವೆ ಎಂದು ಬಿಜೆಪಿ ನಾಯಕರು ಹಗಲು ಕನಸು ಕಾಣದೇ ಜನರಿಗೆ ಉತ್ತಮ ಆಡಳಿತ ನೀಡಲು ಮುಂದಾಗಬೇಕು ಎಂದು ಮನವಿ ಮಾಡಿದರು.

ಮಾಜಿ ಸಚಿವೆ ಶಿವಕಾಂತಾ ಚತುರೆ ಮಾತನಾಡಿ, 10 ವರ್ಷಗಳಿಂದ ಬಿಜೆಪಿ ಶಾಸಕ ಪ್ರಭು ಚವ್ಹಾಣ ಜನರಿಂದ ಆಯ್ಕೆಯಾಗಿದ್ದರೂ ತಾಲೂಕಿನಲ್ಲಿ ಉತ್ತಮ ಕೆಲಸಗಳು ನಡೆದಿಲ್ಲ. ಬೀದರ-ಔರಾದ 40 ಕಿ.ಮೀ. ರಸ್ತೆಗೆಯಲ್ಲಿ 2ಗಂಟೆ ಸಂಚರಿಸುವ ಅನಿವಾರ್ಯತೆ ಬಂದಿದೆ. ಸಂಸದರು ತಾಲೂಕಿನ ನಿವಾಸಿಯಾಗಿದ್ದರೂ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿರುವುದು ಇಬ್ಬರು ಬಿಜೆಪಿ ನಾಯಕರ ಅಭಿವೃದ್ಧಿ ಬಗ್ಗೆ ಇರುವ ಕಾಳಜಿ ತೋರಿಸುತ್ತದೆ ಎಂದರು.

ಮುಖಂಡ ಶೇಷಪ್ಪ ಬಿರಾದ ಮಾತನಾಡಿದರು. ಪಕ್ಷದ ಜಿಲ್ಲಾಧ್ಯಕ್ಷ ರಮೇಶ ಪಾಟೀಲ, ತಾಲೂಕು ಅಧ್ಯಕ್ಷ ತಾನಾಜಿ ತೋರಣೆಕರ್‌, ಯುವ ಮುಖಂಡ ವಿಶ್ವನಾಥ, ಜಿಪಂ ಮಾಜಿ ಅಧ್ಯಕ್ಷ ನಸಿಮೂದ್ದಿನ್‌ ಪಟೇಲ್‌, ಸುಂದರಾಜ ಕೇಸರಿ, ಅಶೋಕ ಕರಂಜೆ ಇನ್ನಿತರರು ವೇದಿಕೆಯಲ್ಲಿ ಇದ್ದರು.

ಟಾಪ್ ನ್ಯೂಸ್

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.