ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಪ್ರಯತ್ನ

Team Udayavani, Jan 12, 2020, 4:44 PM IST

12-Janauary-26

ಅಫಜಲಪುರ: ಮಳೆಗಾಲದಲ್ಲಿ ಮಳೆ ಬಂದು ಹರಿದು ಹೋಗುವ ನೀರನ್ನು ತಡೆದು ನಿಲ್ಲಿಸುವುದಕ್ಕಾಗಿ ಅಣೆಕಟ್ಟೆಗಳನ್ನು ನಿರ್ಮಾಣ ಮಾಡುವುದರಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಿ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಶಾಸಕ ಎಂ.ವೈ. ಪಾಟೀಲ ಹೇಳಿದರು.

ಪಟ್ಟಣದ ಹೊರವಲಯದಲ್ಲಿರುವ ಸರ್ವೇ ನಂ. 97/2, 105ರಲ್ಲಿ ಲೋಕಲ್‌ ನಾಲಾಕ್ಕೆ
ಸಣ್ಣ ನೀರಾವರಿ ಇಲಾಖೆ ವತಿಯಿಂದ 65 ಲಕ್ಷ ವೆಚ್ಚದ ಅಣೆಕಟ್ಟು ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ನೀರಿನ ಕೊರತೆ ಬಹಳಷ್ಟು ಕಾಡುತ್ತಿದೆ. ಜಾಗತಿಕ ಮಟ್ಟದಲ್ಲಿ ನೀರಿನ ಸಮಸ್ಯೆ ಎದುರಾಗುತ್ತಿದೆ. ಹೀಗಾಗಿ ನೀರಿನ ಸ್ವಾವಲಂಬನೆಗಾಗಿ ನಾವು ಈಗಿನಿಂದಲೇ ಎಲ್ಲಾ ಪ್ರಯತ್ನಗಳನ್ನು ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಇಂತಹ ಅನೇಕ ನೀರಾವರಿ ಯೋಜನೆಗಳನ್ನು ತಾಲೂಕಿನಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.

ಈ ಅಣೆಕಟ್ಟು ನಿರ್ಮಾಣದಿಂದ 124 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಿಗಲಿದೆ.
ಅಲ್ಲದೇ ಇದರ ಸುತ್ತಮುತ್ತಲಿನಲ್ಲಿ ಇರುವ ಕೊಳವೆ ಬಾವಿ, ತೆರದ ಬಾವಿಗಳಿಗೆ ನೀರಿನ
ಅಭಾವ ಇಲ್ಲದಂತಾಗಲಿದೆ. ಅಂತರ್ಜಲ ಮಟ್ಟ ಹೆಚ್ಚಳವಾಗಿ ನೀರಿನ ಸೌಲಭ್ಯ ಎಲ್ಲರಿಗೂ ಸಿಗಲಿದೆ. ಸಣ್ಣ ನೀರಾವರಿ ಇಲಾಖೆಯಿಂದ 72 ಕೋಟಿ ವೆಚ್ಚದಲ್ಲಿ ಘೂಳನೂರ ಬಳಿ
ಬ್ರಿಜ್‌ ಕಂ ಬ್ಯಾರೇಜ್‌ ಕೂಡ ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಮಳೇಂದ್ರ ಮಠದ ಪೀಠಾ ಧಿಪತಿ ಶ್ರೀ ಷ.ಬ್ರ ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಮಾತನಾಡಿ, ಇಸ್ರೇಲ್‌ ಮಾದರಿಯ ಕೃಷಿ ನಮ್ಮಲ್ಲಿ ಬಂದಾಗ ಕೃಷಿಕರಿಗೆ ಅನುಕೂಲವಾಗಲಿದೆ ಎಂದರು. ತಾ.ಪಂ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ಎಂ.ವೈ. ಪಾಟೀಲ ಶಾಸಕರಾದ ಬಳಿಕ ಇಲ್ಲಿಯವರೆಗೆ ಸಾವಿರಾರು ಕೋಟಿ ಕಾಮಗಾರಿ ತಾಲೂಕಿನಾದ್ಯಂತ ಕೈಗೊಂಡಿದ್ದಾರೆ. ಅದರಲ್ಲೂ ನೀರವರಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಇದರಿಂದ ರೈತರ ಕಲ್ಯಾಣ ಆಗುವುದರಲ್ಲಿ ಅನುಮಾನವಿಲ್ಲ ಎಂದು ತಿಳಿಸಿದರು.

ಸಣ್ಣ ನೀರಾವರಿ ಇಲಾಖೆ ಅಧಿಕಾರಿ ಶಾಂತಪ್ಪ ಜಾಧವ ಮಾತನಾಡಿ, 65 ಲಕ್ಷ ವೆಚ್ಚದ ಈ ಕಾಮಗಾರಿಯಿಂದ ಈ ಭಾಗದ ರೈತರಿಗೆ ಬಹಳಷ್ಟು ಅನುಕೂಲವಾಗಲಿದೆ. ಕಾಮಗಾರಿಯನ್ನು ಗುಣಮಟ್ಟದಲ್ಲಿ ಮಾಡಿಸಲಾಗುವುದು ಎಂದರು.

ಜಿಪಂ ಉಪಾಧ್ಯಕ್ಷೆ ಶೋಭಾ ಶಿರಸಗಿ, ಶರಣು ಕುಂಬಾರ, ಶಿವಾನಂದ ಗಾಡಿಸಾಹುಕಾರ, ಸಿದ್ದು ಶಿರಸಗಿ, ಚಂದು ಕರ್ಜಗಿ, ಬಸು ಅಂದೋಡಗಿ, ಮಹಾಂತಪ್ಪ ಬಬಲಾದ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ: ಗಂಗೂಲಿ

Sourav Ganguly: ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.