ಅಕ್ಕಿಂ ತಿಂದಂ ಕೆಟ್ಟಂ, ನವಣೆ ಉಂಡಂ ಗಟ್ಟಂ!
Team Udayavani, Sep 23, 2018, 3:35 PM IST
ಧಾರವಾಡ: “ಸಿರಿಧಾನ್ಯ ಬಳಸಿ- ಆರೋಗ್ಯ ಉಳಿಸಿ’ ಎನ್ನುವ ಧೇಯ ವಾಕ್ಯದೊಂದಿಗೆ ಧಾರವಾಡ ಕೃಷಿ
ಮೇಳ-2018ಕ್ಕೆ ಚಾಲನೆ ಸಿಕ್ಕಿದೆ. ಆದರೆ ಸಿರಿಧಾನ್ಯಗಳಿಂದ ಆರೋಗ್ಯ ವೃದ್ಧಿ ಸಾಧ್ಯ ಎನ್ನುವುದನ್ನು ನಮ್ಮ ದೇಶಜ್ಞಾನ
ಪರಂಪರೆಯಲ್ಲಿ ರೈತರು ನೂರಾರು ವರ್ಷಗಳ ಹಿಂದೆಯೇ ಕಲಿತುಕೊಂಡಿದ್ದಾರೆ.
ಸಿರಿಧಾನ್ಯಗಳನ್ನು ರಾಸಾಯನಿಕ ಗಳನ್ನು ಬಳಸದೆ ನೈಸರ್ಗಿಕ ಕೃಷಿಯ ಮೂಲಕ ಬೆಳೆದು 10 ವರ್ಷಗಳಿಂದ
ಇದರ ಮಹತ್ವವನ್ನು ಪ್ರಚಾರ ಮಾಡುತ್ತಿದ್ದಾರೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಲ್ಲೇಶಪ್ಪ ಕಲ್ಯಾಣಶೆಟ್ಟಿ.
ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳ ಆಶಯದಂತೆ ನೈಸರ್ಗಿಕ ಕೃಷಿಯಲ್ಲಿ
ತೊಡಗಿಕೊಂಡಿರುವ ಮಲ್ಲೇಶಪ್ಪ ಅವರು, ಅಕ್ಕಿಯಲ್ಲಿನ ಕೆಟ್ಟ ಅಂಶಗಳು ಮತ್ತು ನವಣೆಯಲ್ಲಿ ಉತ್ತಮ ಅಂಶಗಳ
ಕುರಿತು ಕೃಷಿಮೇಳದಲ್ಲಿ ಭಾಗಿಯಾಗುವ ಎಲ್ಲ ರೈತರಿಗೂ ಮಾಹಿತಿ ನೀಡುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ಸಕ್ಕರೆ
ಕಾಯಿಲೆಯಿಂದ ಬಳಲುವವರಿಗೆ ಮತ್ತು ಅಪೌಷ್ಟಿಕತೆ ಎದುರಿಸುತ್ತಿರುವವರಿಗೆ ಸಿರಿಧಾನ್ಯಗಳಿಂದ ಸಿದ್ಧಪಡಿಸಿದ
ಆಹಾರ ಎಷ್ಟು ಮುಖ್ಯ ಎಂಬುದನ್ನು ಉದಾಹರಣೆಗಳ ಸಮೇತ ಸಲಹೆ ನೀಡುತ್ತಿದ್ದಾರೆ.
27 ತಳಿ ದೇಶಿ ಬೀಜ ರಕ್ಷಣೆ: ಮಲ್ಲೇಶಪ್ಪ ಅವರು ದೇಶಿಯವಾಗಿ ಬೆಳೆಯುವ ನವಣೆ, ಜೋಳ, ಬರಗು ಸೇರಿದಂತೆ 12 ತಳಿಯ ಸಿರಿಧಾನ್ಯಗಳನ್ನು ಮತ್ತು 15 ಪ್ರಕಾರದ ವಿವಿಧ ತರಕಾರಿ ಬೀಜಗಳನ್ನು ಸಂರಕ್ಷಣೆ ಮಾಡಿಟ್ಟುಕೊಂಡು ಅದನ್ನು ರೈತರು ಹೇಗೆ ಬಳಸಿಕೊಳ್ಳಬೇಕು ಎಂಬ ಸಲಹೆಯನ್ನು ಕೃಷಿ ಮೆಳದಲ್ಲಿ ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.