ಅಂಬೇಡ್ಕರ್ ಆಧುನಿಕ ಭಾರತದ ಪಿತಾಮಹ: ಸಿಎಂ ಬಸವರಾಜ ಬೊಮ್ಮಾಯಿ
Team Udayavani, Dec 6, 2021, 11:22 AM IST
ಬೀದರ್: ಬಾಬಾ ಸಾಹೇಬ್ ಅಂಬೇಡ್ಕರ್ ಅವರ 65ನೇ ಮಹಾ ಪರಿನಿರ್ವಾಣ ದಿನಾಚರಣೆ ಪ್ರಯುಕ್ತ ಸೋಮವಾರ ನಗರದ ಅಂಬೇಡ್ಕರ ವೃತ್ತದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುತ್ಥಳಿಗೆ ಪುಷ್ಪ ಅರ್ಪಿಸಿ ನಮನ ಸಲ್ಲಿಸಿದರು.
ವಿಧಾನ ಪರಿಷತ್ ಚುನಾವಣೆ ಪ್ರಚಾರ ಹಿನ್ನಲೆ ಜಿಲ್ಲೆಯ ಪ್ರವಾಸದಲ್ಲಿದ್ದ ಸಿಎಂ, ಭಾಲ್ಕಿಯಿಂದ ಬೀದರಗೆ ಆಗಮಿಸಿ ಅಂಬೇಡ್ಕರ್ ಪುತ್ಥಳಿಗೆ ಗೌರವ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, “ಅಂಬೇಡ್ಕರ್ ಆಧುನಿಕ ಭಾರತದ ಪಿತಾಮಹರು. ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠವಾಗಿದೆ. ತಮ್ಮ ಬದುಕಿನಲ್ಲಿ ಸಾಕಷ್ಟು ನೋವನ್ನುಂಡಿದ್ದ ಅಂಬೇಡ್ಕರ್ ಅವರು, ಅಸ್ಪೃಶ್ಯರು ಮತ್ತು ಕೆಳ ವರ್ಗದ ಬೇರೆ ಯಾರು ಸಹ ಆ ಕಷ್ಟ ಎದುರಿಸಬಾರದು, ಅವರು ಮುಖ್ಯವಾಹಿನಿಗೆ ಬರಬೇಕು ಎಂಬ ಆಶಯಗಳೊಂದಿಗೆ ಸಂವಿಧಾನ ರಚಿಸಿದ್ದಾರೆ” ಎಂದು ಹೇಳಿದರು.
ಇದನ್ನೂ ಓದಿ:ಪ್ಯಾಕೇಜ್ ಘೋಷಣೆ ಬಿಜೆಪಿಗೆ ಫ್ಯಾಷನ್: ಬಿ.ಕೆ.ಹರಿ ಪ್ರಸಾದ್
“ಸಂವಿಧಾನದಲ್ಲಿ ಎಲ್ಲಾ ಸಮಸ್ಯೆ ಮತ್ತು ಎಲ್ಲಾ ಕಾಲಕ್ಕೆ ಉತ್ತರವಿದೆ. ಸಂವಿಧಾನದ ಆಶಯಗಳನ್ನು ಕಾರ್ಯರೂಪಕ್ಕೆ ತರುವುದರ ಜತೆಗೆ ಅವರ ಸಿದ್ದಾಂತಗಳನ್ನು ಜೀವನದಲ್ಲಿ ಅನುಕರಣೆ ಮಾಡುವುದೇ ನಾವು ಅವರಿಗೆ ಸಲ್ಲಿಸುವ ಗೌರವ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಶಾಸಕರಾದ ಬಂಡೆಪ್ಪ ಖಾಶೆಂಪುರ, ರಹೀಮ್ ಖಾನ್, ಮಾಜಿ ಶಾಸಕರಾದ ಪ್ರಕಾಶ ಖಂಡ್ರೆ, ಎಂ.ಜಿ ಮುಳೆ, ಎಂಎಲ್ಸಿಗಳಾದ ಅರವಿಂದ ಅರಳಿ, ರಘುನಾಥ ಮಲ್ಕಾಪುರ್, ಕೆಎಸ್ಐಐಡಿಸಿ ಅಧ್ಯಕ್ಷ ಡಾ.ಶೈಲೆಂದ್ರ ಬೆಲ್ದಾಳೆ, ಬುಡಾ ಅಧ್ಯಕ್ಷ ಬಾಬು ವಾಲಿ, ಪ್ರಮುಖರಾದ ಸೂರ್ಯಕಾಂತ ನಾಗಮಾರಪಳ್ಳಿ, ಗುರುನಾಥ ಕೊಳ್ಳುರ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.