“ಅಮೃತ ಮಹೋತ್ಸವ’ ಸಿದ್ಧತೆ ಶುರು
ಯಶಸ್ವಿಯಾಗಿ ಪೂರ್ಣಗೊಳ್ಳಲು ಸಹಕರಿಸಬೇಕು ಎಂದು ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದರು
Team Udayavani, Mar 26, 2021, 6:49 PM IST
ಬೀದರ: 75ನೇ ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಸುವುದಕ್ಕೆ ಸಂಬಂಧಿ ಸಿದಂತೆ ಚರ್ಚಿಸಲು ನಗರದ ಜಿಪಂ ಸಭಾಂಗಣದಲ್ಲಿ ಸಿಇಒ ಜಹೀರಾ ನಸೀಮ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.
ಈ ವೇಳೆ ಮಾತನಾಡಿದ ಸಿಇಒ ಅವರು, 75ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ 75 ವಾರಗಳ ಕಾಲ ರಾಷ್ಟ್ರಾದ್ಯಂತ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮಗಳು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಯುವಂತೆ ಆಯಾ ಇಲಾಖೆಗಳ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.
ಪ್ರತಿವಾರ ಜರುಗುವ ಕಾರ್ಯಕ್ರಮದ ವರದಿಯನ್ನು ಕೇಂದ್ರಕ್ಕೆ ಈ ಡಾಕ್ಯುಮೆಂಟ್ ಮಾಡಿ ವರದಿ ನೀಡಬೇಕಾಗುತ್ತದೆ. ಆದ್ದರಿಂದ ಕಾರ್ಯಕ್ರಮ ಪೂರ್ಣಗೊಂಡ ಕೂಡಲೇ ಆಯಾ ಇಲಾಖೆಗಳು ಕಾರ್ಯಕ್ರಮದ ಸುದ್ದಿ ಮತ್ತು ಭಾವಚಿತ್ರಗಳು ಹಾಗೂ ವಿಡಿಯೋ ತುಣುಕುಗಳನ್ನು ಕಳುಹಿಸಬೇಕು ಎಂದು ತಿಳಿಸಿದರು. ಈ ಕಾರ್ಯಕ್ರಮವು ಇಡೀ ರಾಷ್ಟ್ರಾದ್ಯಂತ ಅಚ್ಚುಕಟ್ಟಾಗಿ ನಡೆಯಬೇಕು ಎಂಬುದು ಪ್ರಧಾನಿಗಳ ಸೂಚನೆಯಾಗಿದೆ.
ಆದ್ದರಿಂದ ಆಯಾ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿಯ ನಿತ್ಯದ ಕೆಲಸ ಕಾರ್ಯಗಳ ಜೊತೆಗೆ ಅಮೃತ ಮಹೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ಪೂರ್ಣಗೊಳ್ಳಲು ಸಹಕರಿಸಬೇಕು ಎಂದು ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೋವಿಡ್ ಮಾರ್ಗಸೂಚಿಯಂತೆ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ ಸಿಇಒ, ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳ ಅಧಿ ಕಾರಿಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಹಕಾರ ನೀಡಬೇಕು ಎಂದು ತಿಳಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಾದ ಬಿ.ಬಾಬುರೆಡ್ಡಿ, ಗೌತಮ ಅರಳಿ, ಆರ್.ಜಿ ನಾಡಗೀರ್, ಡಾ| ವಿ.ಜಿ.ರೆಡ್ಡಿ, ಲೀಡ್ ಬ್ಯಾಂಕಿನ ಮ್ಯಾನೇಜರ್ ಬಿ.ಎಂ. ಕಮತಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.