ಬೀದರ್: ಕೋವಿಡ್ 19 ಸೋಂಕಿಗೆ ನಿವೃತ್ತ ಪಿಎಸ್ ಐ ಬಲಿ
Team Udayavani, Jul 1, 2020, 12:44 PM IST
ಬೀದರ್: ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್-19 ಸೋಂಕಿಗೆ 63 ವರ್ಷದ ನಿವೃತ್ತ ಪಿಎಸ್.ಐ ಮೃತಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಈಗ 20ಕ್ಕೆ ತಲುಪಿದೆ.
ಔರಾದ ತಾಲೂಕಿನ ಠಾಣಾ ಕುಶನೂರ ಪೊಲೀಸ್ ಠಾಣೆಯಿಂದ ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ನಿವೃತ್ತಿ ಹೊಂದಿದ್ದ ಪಿಎಸ್.ಐ ಅವರು ಬೀದರ್ ಓಲ್ಡ್ ಸಿಟಿಯ ನೂರಖಾ ತಾಲೀಮ್ ನಿವಾಸಿಯಾಗಿದ್ದರು. ಜೂ. 28 ರಂದು ತೀವ್ರ ಉಸಿರಾಟದ ತೊಂದರೆ ಹಿನ್ನಲೆ ಬ್ರೀಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಗಂಟಲು ದ್ರವ ಮಾದರಿ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ.
ಎಸ್.ಪಿ ಕ್ವಾರಂಟೈನ್: ಸೋಂಕಿತ ಪೊಲೀಸ್ ಅಧಿಕಾರಿಯ ಸಂಪರ್ಕ ಹಿನ್ನಲೆಯಲ್ಲಿ ಬೀದರ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಿ.ಎಲ್ ನಾಗೇಶ ಅವರು ಕಳೆದೆರಡು ದಿನಗಳಿಂದ ಹೋಮ್ ಕ್ವಾರಂಟೈನ್ ಆಗಿದ್ದಾರೆ.
ಡಿಎಅರ್ ಇನ್ಸಪೆಕ್ಟರ್ ಅವರಲ್ಲಿ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದ್ದು, ಎರಡು ದಿನ ಹಿಂದೆ ಸದರಿ ಅಧಿಕಾರಿ ಎಸ್.ಪಿ ಅವರ ಸಂಪರ್ಕಕ್ಕೆ ಬಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Air Balloon: ಹೈದರಾಬಾದ್ನಲ್ಲಿ ಹಾರಿಸಿದ ‘ಏರ್ ಬಲೂನ್’ ಹುಮನಾಬಾದ್ ನಲ್ಲಿ ಬಿತ್ತು…
ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಸರಕಾರದಿಂದ ಅಸಹಕಾರ: ಎಚ್.ಡಿ.ಕುಮಾರಸ್ವಾಮಿ
Bidar ದರೋಡೆ ಕೇಸ್: ಆರೋಪಿಗಳ ಗುರುತು ಪತ್ತೆ, ಶೀಘ್ರ ಬಂಧನ: ಎಡಿಜಿಪಿ ಹರಿಶೇಖರನ್
Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ
Bidar: ಶೂಟೌಟ್: ಸಿಬಂದಿ ಹತ್ಯೆಗೈದು 93 ಲಕ್ಷ ರೂ.ಎಟಿಎಂ ಹಣದ ಪೆಟ್ಟಿಗೆ ಲೂಟಿ!
MUST WATCH
ಹೊಸ ಸೇರ್ಪಡೆ
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.