ದೇಶದ ಉತ್ತುಂಗಕ್ಕೇರಲಿ ಪಿಡಿಎ ಕಾಲೇಜು
Team Udayavani, Mar 31, 2019, 3:01 PM IST
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ (ಪಿಡಿಎ) ತಾಂತ್ರಿಕ ಮಹಾವಿದ್ಯಾಲಯವು ಗುಣಮಟ್ಟದ ಕಲಿಕೆ ಮತ್ತು ವಿದ್ಯಾರ್ಥಿಗಳನ್ನು ಭವಿಷ್ಯದ ಶ್ರೇಷ್ಠ ಉದ್ಯಮಿಗಳನ್ನಾಗಿ ರೂಪಿಸುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಆಗಬೇಕೆಂದು ಸಂಸ್ಥೆಯ ಅಧ್ಯಕ್ಷ ಡಾ| ಭೀಮಾಶಂಕರ ಬಿಲಗುಂದಿ ಆಶಯ ವ್ಯಕ್ತಪಡಿಸಿದರು.
ನಗರದ ಪಿಡಿಎ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಹಮ್ಮಿಕೊಂಡಿರುವ ಅಂತರ್ ಕಾಲೇಜು ತಾಂತ್ರಿಕ-ಸಾಂಸ್ಕೃತಿಕ “ನಿರ್ಮಾಣ್-2019′ ಉತ್ಸವಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಮಹಾವಿದ್ಯಾಲಯದಲ್ಲಿ ಪ್ರತಿಯೊಂದು ಹಂತದಲ್ಲಿ ಕಲಿಕೆಗೆ ಪೂರಕವಾದ ಉತ್ತಮ ವಾತಾವರಣ ನಿರ್ಮಿಸಲಾಗಿದೆ. ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸ್ನೇಹಪೂರ್ವಕವಾಗಿ ಬೆರೆತು ಮಹಾವಿದ್ಯಾಲಯವನ್ನು ದೇಶದ ಉತ್ತುಂಗಕ್ಕೆ ಕೊಂಡೊಯಬೇಕೆಂದು ಕರೆ ನೀಡಿದರು.
ಮಹಾವಿದ್ಯಾಲಯದಲ್ಲಿ ಗುಣಮಟ್ಟದ ಅಧ್ಯಯನಕ್ಕೆ ಒತ್ತು ನೀಡುವುದರೊಂದಿಗೆ ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ಹೆಚ್ಚಿನ ಸಮಯ ತೊಡಗಿಸಿಕೊಳ್ಳುವಂತಾಗಬೇಕು. ಈ ನಿಟ್ಟಿನಲ್ಲಿ “ನಿರ್ಮಾಣ್’ಉತ್ಸವ ವಿದ್ಯಾರ್ಥಿಗಳಿಗೆ ಒಳ್ಳೆಯ ವೇದಿಕೆಯಾಗಿದ್ದು, ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೂ ಉತ್ಸವ ಸಾಕ್ಷಿಯಾಗಲಿದೆ ಎಂದರು.
ಪ್ರತಿಷ್ಠಿತ ಸಂಸ್ಥೆಗಳೊಂದಿಗೆ ಒಪ್ಪಂದ: ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಇನ್ಫೋಸಿಸ್ ಸೇರಿದಂತೆ ಪ್ರತಿಷ್ಠಿತ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಪ್ರಸಕ್ತ ವರ್ಷ ವಿವಿಧ ಕಂಪನಿಗಳು ನಡೆಸಿದ ಸಂದರ್ಶನದಲ್ಲಿ ಈಗಾಗಲೇ 130 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.
ಸಂಸ್ಥೆಯ ಉಪಾಧ್ಯಕ್ಷ ಡಾ| ಶಿವಾನಂದ ದೇವರಮನಿ, ಕಾರ್ಯದರ್ಶಿ ನಾಗೇಂದ್ರ ಮಂಠಾಳೆ, ಜಂಟಿ ಕಾರ್ಯದರ್ಶಿ ಗಂಗಾಧರ ಎಲಿ, ಸದಸ್ಯರಾದ ವಿಜಯಕುಮಾರ ದೇಶಮುಖ, ನಿತಿನ್ ಜವಳಿ, ಸತೀಶಚಂದ್ರ ಹಡಗಲಿಮಠ, ಶಿವಶರಣಪ್ಪ ನಿಗ್ಗುಡಗಿ, ಜಗದೀಶ ಮಾಲು, ಅರುಣಕುಮಾರ ಎಂ ಪಾಟೀಲ, ಕಾಲೇಜಿನ ಪ್ರಾಂಶುಪಾಲ ಡಾ| ಎಸ್.ಎಸ್.ಹೆಬ್ಟಾಳ್, ಉತ್ಸವದ ಸಂಚಾಲಕ ಡಾ| ಮಹಾದೇವಪ್ಪ ಗಾದಗೆ, ಡಾ| ಸುಜಾತಾ ತೇರದಾಳ, ದಿನೇಶ್ ಪವಾರ, ನಿತಿನ್ ಪಾಟೀಲ, ಗುರುರಾಜ ಸಾಹುಕಾರ, ಡಾ| ಬಾಬುರಾವ್ ಶೇರಿಕಾರ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.