ಭೂ ಪರಿಹಾರ ಮೊತ್ತ ಹೆಚ್ಚಿಸಲು ಆಗ್ರಹಿಸಿ ಮನವಿ
Team Udayavani, Nov 25, 2021, 1:42 PM IST
ರಾಯಚೂರು: ವಾಡಿ-ಗದಗ ರೈಲು ಮಾರ್ಗ ನಿರ್ಮಾಣಕ್ಕೆ ಲಿಂಗಸುಗೂರು ತಾಲೂಕಿನ ಕರಡಕಲ್ ಗ್ರಾಮದ ಭೂ ಸ್ವಾಧೀನಕ್ಕೆ ಸರ್ಕಾರ ಮುಂದಾಗಿದ್ದು, ಪರಿಹಾರ ಮೊತ್ತ ಅತ್ಯಂತ ಕಡಿಮೆ ನಿಗದಿ ಮಾಡಿರುವುದನ್ನು ಖಂಡಿಸಿ ಭೂ ಸಂತ್ರಸ್ತರು ಮಂಗಳವಾರ ಪ್ರತಿಭಟಿಸಿದರು.
ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. 2018ರಲ್ಲಿ ಭೂ ಸ್ವಾಧೀನ ಕುರಿತು ರೈತರಿಗೆ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯಿಂದ ನೋಟಿಸ್ ನೀಡಲಾಗಿತ್ತು. ರೈತರು 30 ದಿನದೊಳಗೆ ಆಕ್ಷೇಪಣೆ ಸಲ್ಲಿಸಿದ್ದರು. 2020ರ ನ.27ರಂದು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ದರ ನಿಗದಿ ಕುರಿತು ಸಭೆ ನಡೆಸಲಾಗಿತ್ತು. ಆಗ ರೈತರು ಎಕರೆಗೆ ಒಂದು ಕೋಟಿ ರೂ. ನೀಡುವಂತೆ ಒತ್ತಾಯಿಸಿದ್ದರು. ಆದರೆ, ಡಿಸಿಯವರು ಎಕರೆಗೆ 36 ಲಕ್ಷ ರೂ. ಸಿಗಬಹುದು. ಮತ್ತೊಮ್ಮೆ ಸಭೆ ಕರೆದು ಅಂತಿಮ ದರ ನಿಗದಿಪಡಿಸುವುದಾಗಿ ತಿಳಿಸಿದ್ದರು ಎಂದು ವಿವರಿಸಿದರು.
ಆದರೆ, 2021ರ ಆ.28ರಂದು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಎಕರೆಗೆ ಕೇವಲ 10.50 ಲಕ್ಷ ರೂ. ದರ ನಿಗದಿ ಮಾಡಲಾಗಿದೆ. ಇದು ಏಕಪಕ್ಷೀಯ ನಿರ್ಧಾರವಾಗಿದ್ದು, ರೈತರಿಗೆ ಸಾಕಷ್ಟು ಅನ್ಯಾಯವಾಗಲಿದೆ. ಕರಡಕಲ್ ಗ್ರಾಮವು ಲಿಂಗಸುಗೂರು ಪಟ್ಟಣಕ್ಕೆ ಹೊಂದಿಕೊಂಡಿದೆ. 30/40 ಅಳತೆಯ ನಿವೇಶನವೇ 15 ಲಕ್ಷ ರೂ. ಗಿಂತ ಹೆಚ್ಚಾಗಿದೆ. ಎಕರೆಗೆ ಏನಿಲ್ಲವೆಂದರೂ 60-70 ಲಕ್ಷ ರೂ. ಬೆಲೆ ಇದೆ. ಹೀಗಾಗಿ ಸರ್ಕಾರ ನಿಗದಿ ಮಾಡಿರುವ ಬೆಲೆ ಅವೈಜ್ಞಾನಿಕವಾಗಿದ್ದು, ರೈತರು ಭೂಮಿ ನೀಡಿದರೆ ಬೀದಿಗೆ ಬರಬೇಕಾಗುತ್ತದೆ. ಸರ್ಕಾರ ಕೂಡಲೇ ಬೆಲೆಯನ್ನು ಮರು ನಿಗದಿ ಮಾಡದಿದ್ದರೆ ನಾವು ಯೋಜನೆಗೆ ಕಿಂಚಿತ್ತೂ ಭೂಮಿ ನೀಡುವುದಿಲ್ಲ ಎಂದು ಎಚ್ಚರಿಸಿದರು.
ಮುಖಂಡರು ಶಿವಾನಂದ ಐದನಾಳ, ಗುಂಡಯ್ಯ ಸ್ವಾಮಿ, ಸತ್ಯನಾರಾಯಣ, ಸುಂದರ್, ಗುಂಡಪ್ಪ ಸಜ್ಜನ್, ಭೂ ಸಂತ್ರಸ್ತರಾದ ಶಂಕ್ರಪ್ಪ, ಗುರುಸಿದ್ದಪ್ಪ, ಅಮರೇಶ, ಪರಸಪ್ಪ, ಚನ್ನಬಸವ, ವೆಂಕಪ್ಪ, ಅಯ್ಯಪ್ಪ, ನಾಗರಾಜ್, ರಂಗನಾಥ ಸೇರಿದಂತೆ ಅನೇಕ ಭೂ ಸಂತ್ರಸ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.