ಗುತ್ತಿಗೆ ನೌಕರರ ನೇಮಕ; ಅಕ್ರಮ ತನಿಖ
Team Udayavani, Sep 23, 2018, 4:10 PM IST
ಬೀದರ: ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ “ಡಿ’ ಗ್ರೂಪ್ ನೌಕರರ ಕುರಿತು ತನಿಖೆ ನಡೆಸಿ, ಸರ್ಕಾರದ ನಿಯಮ ಮೀರಿ ನೇಮಕಗೊಂಡಿದ್ದರೆ ಅಂತವರ ವಿರುದ್ಧ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮುಂದುವರಿದ ಜಿಲ್ಲಾ ಪಂಚಾಯತ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, “ಡಿ’ ಗ್ರೂಪ್ ನೌಕರರ ನೇಮಕ ಕುರಿತು ಸರ್ಕಾರದ ಮಾರ್ಗಸೂಚಿಗಳು ಇವೆ. ಅವುಗಳ ಪ್ರಕಾರವೆ ನೇಮಕಾತಿ ನಡೆಯಬೇಕು. ಆದರೆ, ಇಲ್ಲಿ ನೇಮಕಾತಿಯಲ್ಲಿ ಅವ್ಯವಹಾರದ ಆರೋಪಗಳ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಆರೋಗ್ಯ ಇಲಾಖೆ ಕುರಿತು ಚರ್ಚೆ ನಡೆಯುತ್ತಿರುವ ವೇಳೆ ಜಿಪಂ ಸದಸ್ಯ ಆನಂದ ಪಾಟೀಲ ಮಾತನಾಡಿ, ಆರೋಗ್ಯ ಇಲಾಖೆಯಲ್ಲಿ ಡಿ ಗ್ರೂಪ್ ನೌಕರರ ನೇಮಕದಲ್ಲಿ ಅವ್ಯವಹಾರ ನಡೆದ್ದು, ಕೂಡಲೆ ನೇಮಕಾತಿ ರದ್ದುಗೊಳಿಸುವಂತೆ ಎರಡು ಸಭೆಗಳಲ್ಲಿ ನಡವಳಿಕೆ ಬರೆದರೂ ಕೂಡ ಯಾವುದೇ ಕ್ರಮ ಇಂದಿಗೂ ಆಗಿಲ್ಲ. ಅಲ್ಲದೆ, ನೌಕರರ ನೇಮಕದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು. ಇವರ ಮಾತಿಗೆ ಇತರೆ ಸದಸ್ಯರು ಕೂಡ ಧ್ವನಿಗೂಡಿಸಿದರು. ಈ ಕುರಿತು ಆರೋಗ್ಯಾಧಿಕಾರಿ ಡಾ| ಎಂ.ಎ. ಜಬ್ಟಾರ ಮಾತನಾಡಿ, ಜಿಲ್ಲೆಯಲ್ಲಿ ಖಾಲಿ ಇರುವ 109 “ಡಿ’ ಗ್ರೂಪ್ ನೌಕರರ ಕುರಿತು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿ, ಅವರ ನೇತೃತ್ವದಲ್ಲಿಯೆ ಹುದ್ದೆಗಳ ಭರ್ತಿ ಕಾರ್ಯಗಳು ನಡೆದಿವೆ. ಸರ್ಕಾರ ನಿಯಮಗಳನ್ನು ಪಾಲಿಸಿಕೊಂಡೆ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ವಿವರಣೆ ನೀಡಿದರು. ಈ ಮಧ್ಯದಲ್ಲಿ ಸದಸ್ಯರು ಮಾತನಾಡಿ, ಜಿಲ್ಲೆಯಲ್ಲಿ ಅಥಿತಿ ಶಿಕ್ಷಕರಿಗೆ ಏಳು ಸಾವಿರ ರೂ. ಸಂಬಳ ನೀಡಲಾಗುತ್ತಿದೆ. ಆದರೆ, “ಡಿ’ ಗ್ರೂಪ್ ನೌಕರರಿಗೆ 14 ಸಾವಿರ ಸಂಬಳ ನೀಡಲಾಗುತ್ತಿದೆ.
ಯಾಕೆ ಅಥಿತಿ ಶಿಕ್ಷಕರಿಗೆ ಕಡಿಮೆ ಸಂಬಳ ನೀಡುತ್ತಿರಿ ಎಂದು, ಅವರಿಗೂ ಹೆಚ್ಚು ಸಂಬಳ ನೀಡುವಂತೆ ಒತ್ತಾಯಿಸಿದರು.
ಬಿಆರ್‌ಜಿಎಫ್ ಯೋಜನೆಯಡಿ 1.21 ಕೋಟಿ ಅನುದಾನ ಇದ್ದು, ಪ್ರತಿ ಸದಸ್ಯರಿಗೆ ಸಮನಾಗಿ ಹಂಚಿಕೆ ಮಾಡಬೇಕು ಎಂದು ಜಿಪಂ ಸದಸ್ಯ ಬುಳ್ಳಾ ಆಗ್ರಹಿಸಿದರು. ಆದರೆ, ಜಿಪಂ ಡಿಎಸ್ ಮಾತನಾಡಿ, ಬಿಆರ್‌ಜಿಎಫ್ ಅನುದಾನ ಬಳಸುವ ಮುನ್ನ ಕ್ರಿಯಾ ಯೋಜನೆ ತಯಾರಿಸಿ ಸಮಿತಿಯಲ್ಲಿ ಅನುಮೋದನೆ ಪಡೆಯಬೇಕು ಎಂದು ವಿವರಿಸಿದರು. ಇದಕ್ಕೆ
ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು ಜಿಲ್ಲಾ ಪಂಚಾಯತ ಅನುದಾನ ಜಿಲ್ಲಾ ಪಂಚಾಯತ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಲು ಯಾಕೆ ಅನುಮೋದನೆ ಬೇಕು ಎಂದು ಪ್ರಶ್ನಿಸಿದರು.
ಅಲ್ಲದೆ, ಸದ್ಯ 1.21 ಕೋಟಿ ಅನುದಾನದಲ್ಲಿ ಈಗಾಗಲೇ ಹಣ ಖರ್ಚು ಮಾಡಲಾಗಿದ್ದು, ಯಾರ ಅನುಮೋದನೆ ಆಧಾರದಲ್ಲಿ ಖರ್ಚು ಮಾಡಲಾಗಿದೆ ಎಂದು ಅಧಿಕಾರಿಗೆ ಪ್ರಶ್ನಿಸಿದರು. ಸದಸ್ಯರ ಪ್ರಶ್ನೆಗೆ ಉತ್ತರಿಸಲಾಗದೆ ಅಧಿಕಾರಿ ಮೌನಕ್ಕೆ ಶರಣಾದರು. ಈ ಹಿನ್ನೆಲೆಯಲ್ಲಿ ಸದಸ್ಯರು ಅಧಿಕಾರಿಗಳ ವಿರುದ್ಧ ಆಕ್ರೋಷ ವ್ಯಕ್ತಪಡಿಸಿದರು. ಈ ಮಧ್ಯದಲ್ಲಿ ಜಿಪಂ ಸಿಇಒ ಮಾತನಾಡಿ, ಈ ಕುರಿತು ಪರಿಶೀಲಿಸಿ ಮುಂದಿನ ಕೆಲ ದಿನಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
ವಿವಿಧ ಕಾಮಗಾರಿ: ಸಿರಗುಪ್ಪ ಗ್ರಾಮದಲ್ಲಿ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣವಾಗದೆ ಅನುದಾನ ಖರ್ಚು ಮಾಡಲಾಗಿದೆ. ಅಲ್ಲದೆ, ಹೆಚ್ಚು ಪ್ರಮಾಣದ ಅನುದಾನ ಖರ್ಚು ಮಾಡಲಾಗಿದೆ ಎಂದು ಜಿಪಂ ಸದಸ್ಯರು ಆರೋಪಿಸಿದರು. ಯಾವಾಗ ಕಾಮಗಾರಿ ಪ್ರಾರಂಭಗೊಂಡಿತ್ತು. ಎಷ್ಟು ಮೊತ್ತಕೆ ಟೆಂಡರ್ ಕರೆಯಲಾಗಿತ್ತು ಎಂದು ಮಾಹಿತಿ ಕೂಡ ಕೇಳಿದರು.
ಆದರೆ, ಸಭೆಯಲ್ಲಿದ್ದ ಅಧಿ ಕಾರಿಗಳು ಪೂರ್ಣ ಮಾಹಿತಿ ನೀಡುವಲ್ಲಿ ವಿಫಲವಾದರು. ಇದಕ್ಕೆ ಸಿಟ್ಟಾದ ಸದಸ್ಯರು ಸಭೆಗೆ ಬರುವಾಗ ಮಾಹಿತಿ ಇಲ್ಲದೆ ಯಾಕೆ ಬರುತ್ತಿರಿ ಎಂದು ಪ್ರಶ್ನಿಸಿದರು.
ಜಿಲ್ಲಾ ಪಂಚಾಯತ ಅಧ್ಯಕ್ಷೆ ಭಾರತಬಾಯಿ ಶೇರಿಕಾರ್, ಉಪಾಧ್ಯಕ್ಷ ಡಾ| ಪ್ರಕಾಶ ಪಾಟೀಲ ಸೇರಿದಂತೆ ವಿವಿಧ ಕ್ಷೇತ್ರಗಳ ಜಿಲ್ಲಾ ಪಂಚಾಯತ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.