ಕೈಗಾರಿಕೋದ್ಯಮಿಗಳ ನಯಾ ಪೈಸೆ ಸಾಲ ಮನ್ನಾ ಮಾಡಿಲ್ಲ: ಶಾ
Team Udayavani, Feb 26, 2018, 6:00 AM IST
ಬೀದರ: ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೈಗಾರಿಕೋದ್ಯಮಿಗಳ ನಯಾ ಪೈಸೆ ಸಾಲ ಮನ್ನಾ ಮಾಡಿಲ್ಲ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಈ ವಿಷಯದಲ್ಲಿ ಸುಳ್ಳು ಹೇಳಿ ಅಪಪ್ರಚಾರ ಮಾಡಿದ್ದು, ಸಾಲ ಮನ್ನಾದ ದಾಖಲೆಗಳು ಕೊಟ್ಟರೆ ನಾನು ಕರ್ನಾಟಕದ ಜನತೆಯಲ್ಲಿ ಬಹಿರಂಗವಾಗಿ ಕ್ಷಮೆ ಕೋರುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸವಾಲು ಹಾಕಿದರು.
ಹುಮನಾಬಾದ್‌ನಲ್ಲಿ ಶನಿವಾರ ನಡೆದ ಕಬ್ಬು ಬೆಳೆಗಾರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ರೈತರ ಪ್ರಶ್ನೆಗೆ ಉತ್ತರಿಸಿದ ಅವರು, ಕೈಗಾರಿಕೋದ್ಯಮಿಗಳ ತೆರಿಗೆ ಸಹ ಮನ್ನಾ ಮಾಡಿಲ್ಲ. ಕೇವಲ ತೆರಿಗೆಯಲ್ಲಿ ರಿಯಾಯಿತಿ ಕೊಡಲಾಗಿದೆ. ಕೈಗಾರಿಕೆ ಅಂದರೆ ಅಲ್ಲಿ ರೈತರ ಉತ್ಪನ್ನಗಳು ಸಹ ಸೇರಿವೆ. ರೈತರಿಗೆ ಯಾವುದೇ ತೆರಿಗೆ ಇಲ್ಲವಾದ್ದರಿಂದ ಮನ್ನಾ ಮಾಡುವ ಪ್ರಶ್ನೆಯೇ ಬಾರದು. ಇನ್ನು ಅನ್ನದಾತರ ಸಾಲ ಮನ್ನಾ ಸುಲಭದ ಮಾತಲ್ಲ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು.
ಕೇಂದ್ರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ಫಸಲು ವಿಮಾ ಯೋಜನೆಯನ್ನು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೊಸ ಸ್ವರೂಪದಲ್ಲಿ ಜಾರಿಗೆ ತರಲಾಗುತ್ತಿದೆ. ಈಗಾಗಲೇ ಬದಲಾವಣೆ ಅಂಶಗಳ ಕುರಿತಂತೆ ಸಂಸದರುಗಳಿಂದ ಸಲಹೆ ಪಡೆಯಲಾಗಿದೆ. ಈ ಸಂಬಂಧ ಸಮಿತಿಯೊಂದನ್ನು ರಚನೆ ಮಾಡಲಾಗಿದ್ದು, ಮೂರ್‍ನಾಲ್ಕು ತಿಂಗಳಲ್ಲಿ ಹೊಸ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುವುದು. ಇದರಿಂದ ದೇಶದ ಪ್ರತಿ ರೈತರಿಗೆ ಬೆಳೆದ ಬೆಳೆಗೆ ವಿಮೆ ಮತ್ತು ಕಡಿಮೆ ಪ್ರಿಮಿಯಂ ಭರಿಸುವ ವ್ಯವಸ್ಥೆ ಆಗಲಿದೆ ಎಂದರು.
ದೇಶದಲ್ಲಿ ಅಧಿಕಾರ ನಡೆಸಿರುವ ಯಾವುದೇ ಸರ್ಕಾರ ಈವರೆಗೆ ರೈತರು ಬೆಳೆದ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಿಲ್ಲ. ಆದರೆ, ಬಿಜೆಪಿ ಸರ್ಕಾರ ಬೆಳೆಗಳ ಉತ್ಪಾದನಾ ದರ ಹೆಚ್ಚಳ ಮಾಡುವುದರ ಜತೆಗೆ ಬೆಂಬಲ ಬೆಲೆಯಲ್ಲಿ ಖರೀದಿಯನ್ನು ಸಹ ಮಾಡಿದೆ. ಈ ಹಿಂದೆ ಕಾಂಗ್ರೆಸ್ ಸರ್ಕಾರ ಬೆಳೆಗಳನ್ನು ಹೊರ ದೇಶಕ್ಕೆ ರಫು¤ ಮಾಡಿ ಹಣ ಕೊಳ್ಳೆ ಹೊಡೆಯುತ್ತಿತ್ತು ಎಂದರು.
ಸ್ವಾಮಿನಾಥನ ಆಯೋಗದ ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಆಯೋಗದ ಸಲಹೆಯಂತೆ ಮುಂಗಾರು-ಹಿಂಗಾರು ಬೆಳೆಗಳಿಗೆ ಅದರ ಉತ್ಪಾದನಾ ವೆಚ್ಚಕ್ಕಿಂತ ಒಂದೂವರೆ ಪಟ್ಟು ಹೆಚ್ಚಿನ ಬೆಂಬಲ ಬೆಲೆಯನ್ನು ರೈತರಿಗೆ ನೀಡುವುದಾಗಿ ಈಗಾಗಲೇ ವಿತ್ತ ಸಚಿವರು ತಮ್ಮ ಬಜೆಟ್‌ನಲ್ಲಿ ಪ್ರಸ್ತಾಪಿಸಿದ್ದಾರೆ. ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜರುಗಿರುವ ಬೃಹತ್ ರೈತ ಸಮಾವೇಶದಲ್ಲಿ ರೈತರಿಗಾಗಿ ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದರು.
ಗುರುದ್ವಾರಕ್ಕೆ ಅಮಿತ್ ಶಾ ದಂಪತಿ ಭೇಟಿ
ಬೀದರ: ನಗರದಲ್ಲಿರುವ ಸಿಖ್ ಧರ್ಮಿಯರ ಆರಾಧ್ಯದೇವ ಗುರುನಾನಕರ ಮಂದಿರಕ್ಕೆ (ಗುರುದ್ವಾರ) ರವಿವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ನೀಡಿ ದರ್ಶನ ಪಡೆದರು.
ಶನಿವಾರ ಸಂಜೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರಗೆ ಆಗಮಿಸಿದ್ದ ಅಮಿತ್ ಶಾ, ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ನರಸಿಂಹ ಸ್ವಾಮಿ ಝರಣಾ ಮಂದಿರ ಭೇಟಿ ಕೈ ಬಿಟ್ಟು, ಗುರುದ್ವಾರಕ್ಕೆ ತೆರಳಿದರು. ಒಂದೂವರೆ ಗಂಟೆ ತಡವಾಗಿ ಆಗಮಿಸಿದ ಅವರನ್ನು ಗುರುನಾನಕ ಪ್ರಬಂಧಕ ಕಮಿಟಿ ಅಧ್ಯಕ್ಷ ಬಲಬೀರ್ ಸಿಂಗ್ ಹೂಗುತ್ಛ ನೀಡಿ ಸ್ವಾಗತಿಸಿದರು. ಅಮಿತ್ ಶಾ ಅವರಿಗೆ ಧರ್ಮಪತ್ನಿ ಸೋನಲ್ ಸಾಥ್ ನೀಡಿದರು.
ಗುರುದ್ವಾರಕ್ಕೆ ಆಗಮಿಸಿದ ಶಾ ನೇರವಾಗಿ ಪ್ರಬಂಧಕ ಕಮಿಟಿಯ ಕಚೇರಿಗೆ ತೆರಳಿ ಹಸ್ತಾಕ್ಷರ ಮಾಡಿದರು. ಗುರುದ್ವಾರದ ಹಿನ್ನೆಲೆಯ ಮಾಹಿತಿಯನ್ನು ಮುಖಂಡರಿಂದ ಪಡೆದುಕೊಂಡರು. ನಂತರ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದರು. ಸಿಖ್ ಧರ್ಮ ಗುರುಗಳು ಮತ್ತು ಅನುಯಾಯಿಗಳ ಸಂದೇಶಗಳುಳ್ಳ ಭಾವಚಿತ್ರಗಳನ್ನು ಶಾ ವೀಕ್ಷಿಸಿ ಮಾಹಿತಿ ಪಡೆದುಕೊಂಡು, ಪ್ರಸಾದ ಸ್ವೀಕರಿಸಿದರು. ಈ ವೇಳೆ ಶಾ ದಂಪತಿಗೆ ಶಾಲು ಹೊದಿಸಿ, ಖಡ್ಗ ನೀಡಿ ಸನ್ಮಾನಿಸಲಾಯಿತು. ತದನಂತರ ಗುರುನಾನಕರು ತಮ್ಮ ಪಾದ ಸ್ಪರ್ಶದಿಂದ ನೀರು ಚಿಮ್ಮಿಸಿದ್ದ ಅಮೃತ ಕುಂಡದ ದರ್ಶನ ಮಾಡಿ, ನೀರು ಸೇವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.