ಕಲೆ-ಸಾಹಿತ್ಯ ಸಂರಕ್ಷಣೆಗೆ ದಾಖಲಾತಿ ಅಗತ್ಯ
Team Udayavani, Dec 14, 2018, 12:09 PM IST
ಬೀದರ: ಜನಪದ ಕಲೆ ಹಾಗೂ ಸಾಹಿತ್ಯ ಸಂರಕ್ಷಣೆಗೆ ದಾಖಲಾತಿ ಅಗತ್ಯವಾಗಿದೆ. ಜಾತಿ, ಭೇದ, ಪಂಥ ಹಾಗೂ ಪಂಗಡಗಳನ್ನು ಬದಿಗಿರಿಸಿ ಸರ್ವರನ್ನು ಒಂದುಗೂಡಿಸುವ ಶಕ್ತಿ ಸಾಹಿತ್ಯಕ್ಕಿದೆ ಎಂದು ಕರ್ನಾಟಕ ಪಶುಪಾಲನೆ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಚ್.ಡಿ. ನಾರಾಯಣಸ್ವಾಮಿ ಹೇಳಿದರು.
ನಗರದ ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಗುರುವಾರ ಕನ್ನಡ ಪುಸ್ತಕ ಪ್ರಾಧಿಕಾರದ ಅನುದಾನಕ್ಕೆ ಆಯ್ಕೆಯಾಗಿ ಪ್ರಕಟಗೊಂಡ ಎಸ್.ಬಿ. ಕುಚಬಾಳ ಅವರು
ರಚಿಸಿದ “ತಿಳಿದು ನಡೀರಿ ಇನ್ನ’ ಎಂಬ ತತ್ವಾಧಾರಿತ ಕವನ ಸಂಕಲನ ಲೋಕಾರ್ಪಣೆ ಹಾಗೂ ಜಾನಪದ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ಸಾಹಿತ್ಯ ಇಡೀ ದೇಶಕ್ಕೆ ತನ್ನದೆ ಆದ ಕೊಡುಗೆ ನೀಡಿದೆ. ಇಲ್ಲಿ ಎಂಟು ಜನ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿ ಪಡೆದಿರುವುದರಿಂದ ಕನ್ನಡ ಅತ್ಯಂತ ಶ್ರೀಮಂತವಾಗಿದೆ ಎಂದರು.
ಇಂದು ಅನೇಕ ಸಾಹಿತ್ಯದ ತುಣುಕುಗಳನ್ನು ವಾಟ್ಸಪ್ ಹಾಗೂ ಫೇಸ್‌ಬುಕ್‌ಗಳಲ್ಲಿ ಸಹಕಾಣುತ್ತೇವೆ. ಆದರೆ ಅದು ಉಪಯೋಗಕ್ಕಿಂತ ದುರುಪಯೋಗಕ್ಕೆ ಹೆಚ್ಚು ಇಂಬು ನೀಡುತ್ತಿದೆ. ಒಟ್ಟಾರೆ ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿ ವ್ಯಾಪಕವಾಗಿ ಬೆಳೆಯಲು ಯುವ ಸಾಹಿತಿಗಳು ಹೆಚ್ಚೆಚ್ಚು ಹೊರ ಬರಬೇಕು ಎಂದರು.
ಅನುಭವದ ಆಧಾರದಲ್ಲಿ ಸಾಹಿತ್ಯ ರಚನೆಗೊಂಡಲ್ಲಿ ಅದು ಗಟ್ಟಿ ಸಾಹಿತ್ಯವಾಗುತ್ತದೆ. ಪ್ರತಿಯೊಬ್ಬರು ಬಾಲ್ಯದಿಂದಲೇ ಸಾಹಿತ್ಯದ ಅಭಿರುಚಿ ಬೆಳೆಸಿಕೊಳ್ಳಬೇಕು. ಭಾವಿ ಪೀಳಿಗೆಗೆ ಸಾಹಿತ್ಯದ ರುಚಿ ತೋರಲು ಅದನ್ನು ಸಂಗ್ರಹಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಸಮಾಜದಲ್ಲಿ ಎಲ್ಲರ ಪ್ರೀತಿಗೆ ಪಾತ್ರವಾಗಬೇಕು. ಸಮಾಜಕ್ಕೆ ಉಪಯೋಗವಾಗುವ ರೀತಿಯಲ್ಲಿ ಜೀವಿಸಬೇಕು. ಒಂದಲ್ಲೊಂದು ಕಲೆ ಕರಗತ ಮಾಡಿಕೊಂಡಲ್ಲಿ ಸಮಾಜಮುಖೀಯಾಗಿ ಗುರುತಿಸಲು ಸಾಧ್ಯವಾಗಲಿದೆ ಎಂದರು.
ಕರ್ನಾಟಕ ಪುಸ್ತಕ ಪ್ರಾಧಿಕಾರದ ಸದಸ್ಯೆ ಜಯದೇವಿ ಗಾಯಕವಾಡ “ತಿಳಿದು ನಡಿರಿ ಇನ್ನ’ ಪುಸ್ತಕ ಕುರಿತು ಮಾತನಾಡಿ, ಈ ವರ್ಷ ಕರ್ನಾಟಕ ಪುಸ್ತಕ ಪ್ರಾ ಧಿಕಾರಕ್ಕೆ ದಲಿತ ಸಾಹಿತ್ಯ ಯೋಜನೆರಯಡಿ 250 ಪುಸ್ತಕಗಳು ದಾಖಲಾಗಿದ್ದವು. ಆದರೆ ಪ್ರಾಧಿಕಾರ ಕೇವಲ 50 ಪುಸ್ತಕಗಳನ್ನು ಆಯ್ಕೆ ಮಾಡಿದೆ.
ಅದರಲ್ಲಿ 20 ಪುಸ್ತಕಗಳು ಹೈದ್ರಾಬಾದ್ ಕರ್ನಾಟಕಕ್ಕೆ ಸಂಬಂಧಿಸಿದ್ದಾಗಿದ್ದರಿಂದಲೇ ಈ ಭಾಗದ ಸಾಹಿತ್ಯಲೋಕ ಶ್ರೀಮಂತಗೊಳ್ಳಲು ಕಾರಣವಾಗಿದೆ. ಬೀದರ್ ಜಿಲ್ಲೆಯಿಂದ ಕುಚಬಾಳ ಅವರು ಬರೆದ “ತಿಳಿದು ನಡಿರಿ ಇನ್ನ’ ಹಾಗೂ ಈಶ್ವರ ತಡೋಳಾ ಅವರು ಬರೆದ “ಸಮತೆಯ ಹಾಡು’ ಪುಸ್ತಕಗಳನ್ನು ಆಯ್ಕೆ ಮಾಡಲಾಗಿದೆ ಎಂದರು.
ತಜ್ಞ ಸಮಿತಿ ಸದಸ್ಯ ಡಾ| ಜಗನ್ನಾಥ ಹೆಬ್ಟಾಳೆ ಮಾತನಾಡಿ, ಸಾಹಿತ್ಯ ರಚನೆ ಹಾಗೂ ಪುಸ್ತಕ ಓದುವಿಕೆಯಿಂದ ಜ್ಞಾನ ವಿಕಾಸವಾಗುತ್ತದೆ. ಇಲ್ಲಿಯ ಪಶು ವಿಶ್ವವಿದ್ಯಾಲಯದಲ್ಲಿ ಕನ್ನಡ ಪುಸ್ತಕ ಅಧ್ಯಯನ ಕೇಂದ್ರ ಸ್ಥಾಪಿಸಬೇಕು ಹಾಗೂ ವಿವಿಧ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಲ್ಲಿ ಹಮ್ಮಿಕೊಳ್ಳಬೇಕೆಂದು ಸಲಹೆ ನೀಡಿದರು.
ಹಿರೇಮಠ ಸಂಸ್ಥಾನದ ಡಾ| ರಾಜಶೇಖರ ಶಿವಾಚಾರ್ಯರು, ಪರಿಷತ್ ಕಾರ್ಯದರ್ಶಿ ಡಾ| ರಾಜಕುಮಾರ ಹೆಬ್ಟಾಳೆ, ಎಸ್.ಬಿ. ಕುಚಬಾಳ, ಲುಂಬಿಣಿ ಗೌತಮ, ಪ್ರೊ| ಎಸ್.ಬಿ. ಬಿರಾದಾರ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ಡಾ| ಧನಲಕ್ಷ್ಮೀ ಪಾಟೀಲ, ರಮೇಶ ಕೊಳಾರ, ಲಕ್ಷ್ಮಣರಾವ್ ಕಾಂಚೆ, ವೀರಣ್ಣ ಕುಂಬಾರ, ನಿಜಲಿಂಗಪ್ಪ ತಗಾರೆ, ಸುನಿತಾ ಕುಡ್ಲಿಕರ್, ಪ್ರಕಾಶ ಕನ್ನಾಳೆ ಇನ್ನಿತರರು ಇದ್ದರು. ಅಖೀಲ ಭಾರತ ಜಾನಪದ ಬುಡಕಟ್ಟು ಹಾಗೂ ಕಲಾ ಪರಿಷತ್ತು ನವದೆಹಲಿ, ಕರ್ನಾಟಕ ಸಾಹಿತ್ಯ ಸಂಘ ಮತ್ತು ಕರ್ನಾಟಕ ಜಾನಪದ ಪರಿಷತ್ತು ಹಾಗೂ ತಾಲೂಕು ಘಟಕಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.