ಅಶೋಕ ಖೇಣಿ 198 ಕೋಟಿ ಒಡೆಯ
Team Udayavani, Apr 24, 2018, 7:00 AM IST
ಬೀದರ: ಬೀದರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ ಖೇಣಿ 198 ಕೋಟಿ ರೂ.ಗಳ ಒಡೆಯ.ಆದರೆ, ದೇಶ- ವಿದೇಶಗಳ ಬ್ಯಾಂಕ್ ಖಾತೆಗಳಲ್ಲಿ ಕೇವಲ 6.92 ಲಕ್ಷ ರೂ. ಮತ್ತು ಕೈಯಲ್ಲಿ ಕೇವಲ 50 ಸಾವಿರ ರೂ. ಮಾತ್ರ ನಗದು ಹೊಂದಿದ್ದಾರೆ. 109.92 ಕೋಟಿರೂ. ಚರಾಸ್ತಿ ಮತ್ತು 88.18 ಕೋಟಿ ರೂ. ಸ್ಥಿರಾಸ್ತಿ ಸೇರಿ 198 ಕೋಟಿ ರೂ. ಹಾಗೂ 54.19 ಕೋಟಿ ರೂ. ಸಾಲ ಇದೆ. ಅವರ ಯುಎಸ್ಎನಲ್ಲಿರುವ ಬ್ಯಾಂಕ್ ಖಾತೆಯಲ್ಲಿ ಕೇವಲ 9035 ರೂ. ಜಮೆ ಇದೆ. ಇನ್ನುಳಿದಂತೆ ಎಕ್ಸಿಸ್, ಕರ್ನಾಟಕ ಬ್ಯಾಂಕ್, ಐಸಿಐಸಿಐ, ಐಡಿಬಿಐ ಬ್ಯಾಂಕ್ಗಳು ಸೇರಿ 6.92 ಲಕ್ಷ ರೂ. ಹಣ ಇರುವುದಾಗಿ ತಿಳಿಸಿದ್ದಾರೆ.
ಯುಎಸ್ಎ ಸ್ಯಾಬ್ ಎಂಜಿನಿಯರಿಂಗ್ ಮತ್ತು ಎಆರ್ಎನ್ಬಿ ಕಂಪನಿ, ನಂದಿ ಇನಾ#†ಸ್ಟ್ರಕ್ಚರ್ ಸೇರಿ ವಿವಿಧ ಕಂಪನಿಗಳಲ್ಲಿ 21.13 ಕೋಟಿ ರೂ.ಷೇರುಗಳನ್ನು ಹೊಂದಿದ್ದಾರೆ. 1.69 ಕೋಟಿ ರೂ. ಮೌಲ್ಯದ ಚಿನ್ನಾಭರಣ, 27.55 ಲಕ್ಷ ಮೌಲ್ಯದ ಕೃಷಿಯೇತರ ಭೂಮಿ, 19.51 ಕೋಟಿ ರೂ. ಮೌಲ್ಯದ ವಾಣಿಜ್ಯ ಮಳಿಗೆಗಳು ಮತ್ತು 60.57 ಕೋಟಿ ರೂ. ಮೌಲ್ಯದ ವಸತಿ ಕಟ್ಟಡಗಳನ್ನು ಹೊಂದಿದ್ದಾರೆ. 99.24 ಲಕ್ಷ ರೂ. ಮೌಲ್ಯದ ಐಷಾರಾಮಿ ಕಾರುಗಳ ಒಡೆಯರಾಗಿರುವ ಅಶೋಕ ಖೇಣಿ ಬಳಿ ಫೋರ್ಡ್ ಮಸ್ಟಾಂಗ್, ಓಲ್ಡ್ಸ್ ಸಿಲ್ಹೌಟಿ ಬ್ಲೂ , ಮರ್ಸಿಡಿಜ್-350, ಫೆರಾರಿ ಮತ್ತು ಜಾಗ್ವಾರ್ ಕಂಪನಿಯ ಕಾರುಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.