ವಡಗಾಂವನಲ್ಲಿ ಅಶೋಕ ಗ್ರಾಮ ವಾಸ್ತವ್ಯ: ಸ್ಥಳ ಪರಿಶೀಲನೆ
Team Udayavani, May 15, 2022, 3:04 PM IST
ಬೀದರ/ಔರಾದ: ಕಂದಾಯ ಸಚಿವ ಆರ್. ಅಶೋಕ ಮೇ 21ರಂದು ಗ್ರಾಮ ವಾಸ್ತವ್ಯ ಹಿನ್ನೆಲೆ ಔರಾದ ತಾಲೂಕಿನ ವಡಗಾಂವ (ಡಿ) ಗ್ರಾಮಕ್ಕೆ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಭೇಟಿ ನೀಡಿ, ಸ್ಥಳ ಪರಿಶೀಲನೆ ಮಾಡಿದರು.
ಇದೇ ವೇಳೆ ಅಧಿಕಾರಿಗಳೊಂದಿಗೆ ಎರಡನೇ ಸಭೆ ನಡೆಸಿ ಗ್ರಾಮ ವಾಸ್ತವ್ಯದ ಪೂರ್ವ ತಯಾರಿ ಕುರಿತು ಮಾಹಿತಿ ಪಡೆದರು. ಕಾರ್ಯಕ್ರಮ ಹೇಗಿರಬೇಕು? ಎನ್ನುವ ಬಗ್ಗೆ ಗ್ರಾಮಸ್ಥರಿಂದಲೂ ಸಲಹೆಗಳನ್ನು ಪಡೆದರು. ಈ ಭಾಗದ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ, ಜನತೆಗೆ ಅನುಕೂಲ ಮಾಡಿಕೊಡಬೇಕೆಂಬ ಉದ್ದೇಶದಿಂದ ಕಂದಾಯ ಸಚಿವರೇ ಖುದ್ದಾಗಿ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಗ್ರಾಮಸ್ಥರ ಸಹಕಾರ ಸಾಕಷ್ಟು ಅಗತ್ಯವಿರುತ್ತದೆ. ತಮ್ಮ ಗ್ರಾಮದ ಅಭಿವೃದ್ಧಿ ಹಿತದೃಷ್ಟಿಯಿಂದ ಸ್ಥಳೀಯರು ಅಗತ್ಯ ಸಹಕಾರ ನೀಡಬೇಕೆಂದು ಸಚಿವರು ಕೋರಿದರು.
ತಹಶೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ಪಿಡಿಒಗಳು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿ ಯುತವಾಗಿ ನಿರ್ವಹಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಅಧಿಕಾರಿಗಳು ಕಾರ್ಯಕ್ರಮದ ರೂಪುರೇಷೆ ವಿವರಿಸಿ, ಮೇ 21ರಂದು ಬೆಳಗ್ಗೆ ಗ್ರಾಮದಲ್ಲಿನ ಬಸವೇಶ್ವರ ಹಾಗೂ ಅಂಬೇಡ್ಕರ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಲಾಗುತ್ತದೆ. ಗ್ರಾಮದಲ್ಲಿ ಕಳಸ ಹೊತ್ತ ಮಹಿಳೆಯರೊಂದಿಗೆ ಮೆರವಣಿಗೆ ನಡೆಯಲಿದೆ. ಕೋಲಾಟ, ಡೊಳ್ಳು ಕಲಾ ತಂಡಗಳು ಇರಲಿವೆ. ಬಳಿಕ ಕಂದಾಯ ಸಚಿವರು ವೇದಿಕೆಗೆ ಆಗಮಿಸುವರು. ರಾತ್ರಿ ಬಿ.ಸಿ.ಎಂ ವಸತಿ ನಿಲಯದಲ್ಲಿ ವಾಸ್ತವ್ಯ ಕೈಗೊಳ್ಳುವರು. ಕಾರ್ಯಕ್ರಮದಲ್ಲಿ ಕನಿಷ್ಠ 20 ಸಾವಿರ ಜನರು ಆಗಮಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಆಹಾರ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ಮಳಿಗೆಗಳನ್ನು ಅಳವಡಿಸುವಂತೆ ಹಿಂದಿನ ಸಭೆಯಲ್ಲಿ ತಿಳಿಸಲಾಗಿದೆ. ಇದರ ಅನುಷ್ಠಾನ ಅಚ್ಚುಕಟ್ಟಾಗಿ ಆಗಬೇಕು ಎಂದು ಸಚಿವ ಪ್ರಭು ಚವ್ಹಾಣ ಸೂಚಿಸಿದರು.
ಗ್ರಾಪಂ ಅಧ್ಯಕ್ಷೆ ತ್ರೀಶುಲಾಬಾಯಿ ಝರೆಪ್ಪಾ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಪಂ ಸಿಇಒ ಜಹೀರಾ ನಸೀಮ್, ಸಹಾಯಕ ಆಯುಕ್ತ ನಯೀಮ್ ಮೋಮಿನ್, ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬೀರೆಂದ್ರಸಿಂಗ್ ಠಾಕೂರ್, ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಬಂಡೆಪ್ಪ ಕಂಟೆ, ಪಶು ವಿವಿಯ ಆಡಳಿತ ಮಂಡಳಿ ಸದಸ್ಯ ವಸಂತ ವಕೀಲ್, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಮಲ್ಲಪ್ಪಾ ನೇಳಗೆ, ಪ್ರಕಾಶ ಮೇತ್ರೆ, ಪ್ರಕಾಶ ಜೀರ್ಗೆ, ಸಂಜು ರಾಠೊಡ್, ಧಾರಾಸಿಂಗ್ ಪವಾರ, ಶಂಕರ ರಾಠೊಡ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.