ಕಸಮುಕ್ತ ನಗರಕ್ಕೆ ಕೈ ಜೋಡಿಸಿ


Team Udayavani, Feb 1, 2019, 9:24 AM IST

bid-1.jpg

ಬೀದರ: ನಗರವನ್ನು ಪ್ಲಾಸ್ಟಿಕ್‌ ಮತ್ತು ಕಸಮುಕ್ತವಾಗಿಸುವ ಕಾರ್ಯಕ್ಕೆ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ನಗರ ಸಭೆ ಅಧ್ಯಕ್ಷೆ ಶಾಲಿನಿ ರಾಜು ಚಿಂತಾಮಣಿ ಹೇಳಿದರು.

ನಗರದ ಸಿದ್ಧಾರ್ಥ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಚ್ಛತೆ ಕಾಪಾಡಲು ಯುವಕ ಯುವತಿಯರು ಜವಾಬ್ದಾರಿಯುತರಾಗಿ ಕೆಲಸ ನಿರ್ವಹಿಸಬೇಕು. ಸ್ವ-ಇಚ್ಛೆಯಿಂದ ಪ್ಲಾಸ್ಟಿಕ್‌ ಬಳಸುವುದನ್ನು ನಿಲ್ಲಿಸಬೇಕು. ಹಾಗೆಯೇ ವಿದ್ಯಾವಂತರು ತಮ್ಮ ಸುತ್ತಲಿನ ಜನರಿಗೆ ಶೌಚಾಲಯ ಮತ್ತು ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಬೇಕು. ಹೀಗಾದಲ್ಲಿ ಮಾತ್ರ ಸ್ವಚ್ಛ ಭಾರತ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಸ್ವಚ್ಛತೆಯ ನಿರ್ವಹಣೆ ಕೇವಲ ಸರ್ಕಾರದ ಜವಾಬ್ದಾರಿ ಎಂದು ಭಾವಿಸದೇ, ತಮ್ಮ ಮನೆ ಮತ್ತು ಓಣಿಗಳಿಂದ ಸ್ವಚ್ಛತಾ ಅಭಿಯಾನ ಆರಂಭಿಸಬೇಕು ಎಂದ ಅವರು, ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇರುವುದರಿಂದ ಪ್ರತಿಯೊಬ್ಬರು ನೀರನ್ನು ಮಿತವಾಗಿ ಬಳಕೆ ಮಾಡಬೇಕು ಎಂದು ಕೋರಿದರು.

ಸ್ವಚ್ಛ ಭಾರತ ಅಭಿಯಾನದ ಜಿಲ್ಲಾ ನೋಡಲ್‌ ಅಧಿಕಾರಿ ಡಾ| ಗೌತಮ ಅರಳಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯಗಳನ್ನು ಬಳಕೆ ಮಾಡದೇ ಇರುವುದರಿಂದ ಸಾಕಷ್ಟು ಮಹಿಳೆಯರು ಹಾವು ಕಡಿತ, ಲೈಂಗಿಕ ದೌರ್ಜನ್ಯದಂತಹ ಸಮಸ್ಯೆಗಳಿಗೆ ಬಲಿಯಾಗುತ್ತಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಶೌಚಾಲಯದ ಕುರಿತು ಅರಿವು ಮೂಡಿಸಿ ಇಂತಹ ಅವಘಡಗಳು ಸಂಭವಿಸದಂತೆ ನೋಡಿಕೊಳ್ಳಬೇಕಿದೆ ಎಂದು ಹೇಳಿದರು.

ಕಾಲೇಜು ಪ್ರಾಂಶುಪಾಲ ಡಾ| ಎಂ.ಎಸ್‌.ಖರ್ಗೆ ಮಾತನಾಡಿ, ಸ್ವಚ್ಛ ಭಾರತ ಅಭಿಯಾನ ಕುರಿತು ವಿವರಣೆ ನೀಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಚೇಂದ್ರ ವಾಘಮೋರೆ, ಎನ್‌ಎಸ್‌ಎಸ್‌ ಅಧಿಕಾರಿ ಜಗನ್ನಾಥ ಬಡಿಗೇರ, ಉಪ ಪ್ರಾಚಾರ್ಯ ಡಾ| ರಾಜನಾಳೆ ಅನೀಲಕುಮಾರ, ವಾರ್ತಾ ಇಲಾಖೆಯ ತನ್ವೀರ ಇಕ್ಬಾಲ್‌, ಬಿಂದುಸಾರ್‌ ಧನ್ನೂರ್‌, ಕನ್ನಡ ವಿಭಾಗದ ಪ್ರೊ| ರಾಜಕುಮಾರ ಸಿಂಧೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು. ಬಳ್ಳಾರಿ ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ರಾಮಕೃಷ್ಣಪ್ಪ ಸ್ವಾಗತಿಸಿದರು. ಕಲಬುರಗಿ ಕಾರ್ಯಾಲಯದ ನಾಗಪ್ಪ ಅಂಬಾಗೋಳ ವಂದಿಸಿದರು. ಕಲಬುರಗಿ-ಬಳ್ಳಾರಿ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ, ನಗರ ಸಭೆ, ಶಿಶು ಅಭಿವೃದ್ಧಿ ಯೋಜನೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.