
ಮುಡಬಿ ಬಸ್ ನಿಲ್ದಾಣದಲ್ಲಿ ಶೌಚಾಲಯವಿಲ್ಲದೇ ಪರದಾಟ
Team Udayavani, Dec 1, 2019, 12:38 PM IST

ಬಸವಕಲ್ಯಾಣ: ತಾಲೂಕಿನ ಹೋಬಳಿ ಮಟ್ಟದ ಮುಡಬಿ ಗ್ರಾಮದ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಲ್ಲಿ ಶೌಚಾಲಯ ಇಲ್ಲದ ಕಾರಣ ಸಂಸ್ಥೆಯ ಸಿಬ್ಬಂದಿಹಾಗೂ ಪ್ರಯಾಣಿಕರು ಶೌಚಕ್ಕೆ ನಿತ್ಯ ಪರದಾಡುವಂತ ಸ್ಥಿತಿ ಎದುರಾಗಿದೆ.
ಹೋಬಳಿ ಮಟ್ಟದ ಗ್ರಾಮಗಳಲ್ಲಿಒಂದಾದ ಮುಡಬಿ ಗ್ರಾಮವು ಕಲಬುರಗಿ- ಬಸವಕಲ್ಯಾಣ ಸಂಪರ್ಕಕಲ್ಪಿಸುವ ರಸ್ತೆಯಮಧ್ಯದಲ್ಲಿರುವಗ್ರಾಮವಾಗಿದೆ. ಹೀಗಾಗಿ ನಿತ್ಯ ವಿದ್ಯಾರ್ಥಿಗಳು, ವೈದ್ಧರು, ಗರ್ಭಿಣಿಯರು ಮತ್ತು ಸಾವಿರಾರು ಪ್ರಯಾಣಿಕರು ಬಸ್‌ನಿಲ್ದಾಣದಲ್ಲಿಕುಳಿತುಕೊಂಡು ಪ್ರಯಾಣಿಸುವ ಕೇಂದ್ರಸ್ಥಾನ ಇದಾಗಿದೆ. ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ವತಿಯಿಂದಬಸ್‌ನಿಲ್ದಾಣದಲ್ಲಿ ಅಥವಾ ಪಕ್ಕದಲ್ಲಿ ಪ್ರಯಾಣಿಕರು ಅನುಕೂಲಕ್ಕಾಗಿ ಸಾರ್ವಜನಿಕ ಶೌಚಾಲಯ ನಿರ್ಮಿಸಿಲ್ಲ.
ಇದರಿಂದ ಸ್ಥಳೀಯ ವ್ಯಾಪಾರಸ್ಥರು, ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳಆಕ್ರೋಷಕ್ಕೆ ಕಾರಣವಾಗಿದೆ. ಹಗಲು-ರಾತ್ರಿ ಎನ್ನದೆ ಸಾರ್ವಜನಿಕರು ಮತ್ತು ಪ್ರಯಾಣಿಕರುಬಹಿರ್ದೆಶೆಗೆ ಬಯಲನ್ನೇಅವಲಂಬಿಸಬೇಕಾಗಿದೆ. ಆದರೂಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಲು ಮುಂದಾಗುತ್ತಿಲ್ಲ ಎಂದು ನಿಲ್ದಾಣದ ಪಕ್ಕದಲ್ಲಿ ವ್ಯಾಪಾರಮಾಡುವ ಬಸವರಾಜ ಎಂ.ಕುಂಬಾರ ಆರೋಪಿಸಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ಬಸ್‌ನಿಲ್ದಾಣದ ಪಕ್ಕದಲ್ಲಿ ಸಾರ್ವಜನಿಕರ ಶೌಚಾಲಯ ನಿರ್ಮಾಣ ಮಾಡಿದರೆ ಪ್ರಯಾಣಿಕರು ಮತ್ತು ಸಾರ್ವಜನಿಕರು ಬಹಿರ್ದೆಶೆಗೆ ಬಯಲಿಗೆ ಹೋಗುವುದು ತಪ್ಪುತ್ತದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.