ಇಸ್ಪೀಟ್ ಅಡ್ಡೆ ಮೇಲೆ ದಾಳಿ; 4.25 ಲಕ್ಷ ರೂ. ನಗದು ವಶ
Team Udayavani, Apr 20, 2022, 5:31 PM IST
ಮುದಗಲ್ಲ: ಪಟ್ಟಣದ ಪೊಲೀಸ್ ಇಲಾಖೆಯ ಪಿಎಸೈ ಪ್ರಕಾಶ ಡಂಬಳ ನೇತೃತ್ವದಲ್ಲಿ ಬ್ಯಾಲಿಹಾಳ ಹಳ್ಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿ ನಾಲ್ವರು ಜೂಜುಕೋರರನ್ನು ಬಂಧಿಸಲಾಗಿದೆ.
ಬಂಧಿತರಿಂದ 4.25 ಲಕ್ಷ ರೂ. ನಗದು ಸೇರಿದಂತೆ 28.28 ಲಕ್ಷಕ್ಕೂ ಅಧಿಕ ಮೊತ್ತದ ವಾಹನ, ಪರಿಕರ ವಶಪಡಿಸಿಕೊಳ್ಳುವ ಮೂಲಕ ಭರ್ಜರಿ ಬೇಟೆಯನ್ನಾಡಿದ್ದಾರೆ.
ಠಾಣೆ ವ್ಯಾಪ್ತಿಯ ಹಾಗೂ ತಾಲೂಕು ಗಡಿ ಭಾಗವಾದ ಬ್ಯಾಲಿಹಾಳ ಹಳ್ಳದಲ್ಲಿ ಇಸ್ಪೀಟ್ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ ಲಿಂಗಸುಗೂರು ಮತ್ತು ಸಿಪಿಐ ಮಸ್ಕಿ ಮಾರ್ಗದರ್ಶನದಲ್ಲಿ ದಾಳಿ ಮಾಡಲಾಗಿದೆ.
ಬಸವರಾಜ ಬಸಪ್ಪ ಕ್ಯಾಡಿಗಿ ಸಾ| ನಾಲತವಾಡ, ಶರಣಬಸವ ಬಸನಗೌಡ ಸಾ| ಕುರಡಗಿ ಜಿ| ಬಳ್ಳಾರಿ, ಬಸವರಾಜ ಯತಮನಪ್ಪ ತೊಡಗೇರ ಸಾ| ಹುಲಿಹೈದರ್, ಬಳ್ಳಾರಿಯ ದೇವಕುಮಾರ ಮುನಿಲಾರಾಯ್ ಎಂಬವರನ್ನು ಬಂಧಿಸಲಾಗಿದ್ದು, ಬಂಧಿತರಿಂದ ನಗದು 4,15,770 ರೂ. ನಗದು, ನಾಲ್ಕು ಕಾರು, ನಾಲ್ಕು ಮೊಬೈಲ್ ಹಾಗೂ 28.28 ಲಕ್ಷ ರೂ. ಮೌಲ್ಯದ ಮಾಲನ್ನು ಜಪ್ತಿ ಮಾಡಿದ್ದಾರೆ. ತಂಡದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ, ಕೃಷ್ಣ, ಅಡಿವೆಪ್ಪ, ಅಮರೇಶ, ಹನುಮಂತ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.