ಬೀದರನಲ್ಲೇ ರಾಜ್ಯ ಕ್ರೀಡಾಕೂಟಕ್ಕೆ ಪ್ರಯತ್ನ

ಕ್ರೀಡಾಕೂಟವು ಅವರಲ್ಲಿನ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ ಒದಗಿಸಲಿದೆ.

Team Udayavani, Feb 13, 2021, 6:18 PM IST

ಬೀದರನಲ್ಲೇ ರಾಜ್ಯ ಕ್ರೀಡಾಕೂಟಕ್ಕೆ ಪ್ರಯತ್ನ

ಬೀದರ: ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಬೀದರನಲ್ಲೇ ಆಯೋಜಿಸಲು ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ರಘುನಾಥರಾವ್‌ ಮಲ್ಕಾಪುರೆ ಭರವಸೆ ನೀಡಿದರು. ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿರುವ ರಾಜ್ಯ ಸರ್ಕಾರಿ ನೌಕರರ ಎರಡು ದಿನಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯಮಟ್ಟದ ಕ್ರೀಡಾಕೂಟ ಇಲ್ಲಿಯೇ ನಡೆಯಬೇಕು ಎನ್ನುವುದು ಜಿಲ್ಲೆಯ ಸರ್ಕಾರಿ ನೌಕರರ ಆಶಯವಾಗಿದೆ ಎಂದರು.

ರಾಜ್ಯ ಸರ್ಕಾರ ನೌಕರರ ಬೇಡಿಕೆಗಳಿಗೆ ಸ್ಪಂದಿಸುತ್ತ ಬಂದಿದೆ. ಕೋವಿಡ್‌ ಸಂಕಷ್ಟದಲ್ಲಿ ಅನೇಕ ರಾಜ್ಯಗಳು ನೌಕರರ ವೇತನ ಕಡಿತಗೊಳಿಸಿದ್ದವು. ಆದರೆ, ರಾಜ್ಯ ಸರ್ಕಾರ ಮಾತ್ರ ಯಾವುದೇ ಕಡಿತ ಮಾಡದೇ ನೌಕರರ ಹಿತ ರಕ್ಷಿಸಿತು ಎಂದು ತಿಳಿಸಿದರು.

ರಾಜೇಂದ್ರಕುಮಾರ ಗಂದಗೆ ಕ್ರಿಯಾಶೀಲರಾಗಿದ್ದಾರೆ. ನೌಕರರಿಗಾಗಿ ವಿವಿಧ ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಚಟುವಟಿಕೆಗಳಿಗೆ ತಮ್ಮ ಸಹಾಯ, ಸಹಕಾರ ಸದಾ ಇರಲಿದೆ ಎಂದರು.

ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಮಾತನಾಡಿ, ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ವ್ಯವಸ್ಥಿತವಾಗಿ ಸಂಘಟಿಸಲಾಗಿದೆ. ಆನ್‌ಲೈನ್‌ ನೋಂದಣಿ ಮೂಲಕ ಕ್ರೀಡಾಪಟುಗಳ ಸಮಯ ಹಾಗೂ ಹಣ ವ್ಯರ್ಥವಾಗುವುದನ್ನು ತಪ್ಪಿಸಿರುವುದು ಪ್ರಶಂಸನೀಯ. ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಬೀದರನಲ್ಲೇ ಏರ್ಪಡಿಸುವ ಸಂಬಂಧ ಸರ್ಕಾರ ಹಾಗೂ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ಕ್ರೀಡಾಜ್ಯೋತಿ ಸ್ವೀಕರಿಸಿದ ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ ಮಾತನಾಡಿ, ಕ್ರೀಡಾಕೂಟಗಳು ನೌಕರರಲ್ಲಿ ಹೊಸ ಉತ್ಸಾಹ, ಹುಮ್ಮಸ್ಸು ಮೂಡಿಸಲು ನೆರವಾಗಲಿವೆ ಎಂದರು. ಅಧ್ಯಕ್ಷತೆ ವಹಿಸಿದ್ದ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮಾತನಾಡಿ, ನೌಕರರನ್ನು ಒತ್ತಡಮುಕ್ತಗೊಳಿಸಲು ಪ್ರತಿ ವರ್ಷ ಜಿಲ್ಲಾ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ಸರ್ಕಾರಿ ನೌಕರರಲ್ಲೂ ಬಹಳಷ್ಟು ಕ್ರೀಡಾಪಟುಗಳು ಇದ್ದಾರೆ.

ಕ್ರೀಡಾಕೂಟವು ಅವರಲ್ಲಿನ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ ಒದಗಿಸಲಿದೆ. ರಾಜ್ಯಮಟ್ಟದ ಕ್ರೀಡಾಕೂಟ ಬೀದರನಲ್ಲೇ ಆಯೋಜಿಸುವ ನಿಟ್ಟಿನಲ್ಲಿ ಸಂಘ ಪ್ರಯತ್ನ ನಡೆಸುತ್ತಿದೆ. ಅವಕಾಶ ದೊರೆತರೆ ರಾಜ್ಯದಲ್ಲೇ ಮಾದರಿಯಾಗಿ ಸಂಘಟಿಸಲಾಗುವುದು ಎಂದರು.

ಸಚಿವರ ಸಂದೇಶ: ಅನಿವಾರ್ಯ ಕಾರಣಕ್ಕಾಗಿ ದೆಹಲಿಗೆ ಬಂದಿರುವ ಕಾರಣ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ನೌಕರರು ಕ್ರೀಡಾಕೂಟದಲ್ಲಿ ಆಸಕ್ತಿಯಿಂದ ಭಾಗವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಕಳುಹಿಸಿದ ಸಂದೇಶವನ್ನು ಗಂದಗೆ ಓದಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಇದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಆರ್‌.ಜಿ. ನಾಡಗೀರ ಸ್ವಾಗತಿಸಿದರು. ಶಿವಕುಮಾರ ಬಾವಗೆ ನಿರೂಪಿಸಿದರು. ರಾಜಕುಮಾರ ಹೊಸದೊಡ್ಡೆ ವಂದಿಸಿದರು. ಇದಕ್ಕೂ ಮೊದಲು ರೋಟರಿ ಕನ್ನಡಾಂಬೆ ವೃತ್ತದಿಂದ ನೆಹರು ಕ್ರೀಡಾಂಗಣವರೆಗೆ ಕ್ರೀಡಾಜ್ಯೋತಿ ಮೆರವಣಿಗೆ ನಡೆಯಿತು.

ಉತ್ಸಾಹದಿಂದ ಪಾಲ್ಗೊಂಡ ನೌಕರರು ನೆಹರು ಕ್ರೀಡಾಂಗಣ ಹಾಗೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸರ್ಕಾರಿ ನೌಕರರು ಉತ್ಸಾಹದಿಂದ ಪಾಲ್ಗೊಂಡರು. ಮೊದಲ ದಿನ 800 ಮೀ. ಓಟ, ವಾಲಿಬಾಲ್‌, ಕಬಡ್ಡಿ, ಕ್ರಿಕೆಟ್‌, ಡಿಸ್ಕಸ್‌ ಥ್ರೋ, ಶಾಟ್‌ಪುಟ್‌, ಉದ್ದ-ಎತ್ತರ ಜಿಗಿತ, ಚೆಸ್‌, ಕೇರಂ, ಷಟಲ್‌ ಬ್ಯಾಡ್ಮಿಂಟನ್‌, ಬಾಸ್ಕೆಟ್‌ಬಾಲ್‌, ಥ್ರೋಬಾಲ್‌ ಮೊದಲಾದ ಕ್ರೀಡೆಗಳು ನಡೆದವು. ನೌಕರರ ಸಂಘವು ಕ್ರೀಡಾಪಟುಗಳಿಗೆ ಟೀ ಶರ್ಟ್‌ ಹಾಗೂ ಟೊಪ್ಪಿಗೆ ವಿತರಿಸಿತು. ಕ್ರೀಡಾಕೂಟದಲ್ಲಿ ಪಾಲ್ಗೊಂಡವರಿಗೆ ಬೆಳಗ್ಗೆ ಚಹಾ, ಉಪಾಹಾರ ಹಾಗೂ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು. ಕ್ರೀಡಾಕೂಟದಲ್ಲಿ ಜಿಲ್ಲೆಯ ಒಟ್ಟು 1,680 ಸರ್ಕಾರಿ ನೌಕರರು ಹೆಸರು ನೊಂದಾಯಿಸಿದ್ದಾರೆ.

ಟಾಪ್ ನ್ಯೂಸ್

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!

1-qweewqe

TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ

1-ewewqe

Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

POlice

Kasaragod: ರೈಲುಗಾಡಿಗೆ ಕಲ್ಲು ತೂರಾಟ; ಪ್ರಯಾಣಿಕನಿಗೆ ಗಾಯ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

de

Malpe ಸೀವಾಕ್‌ ಸಮುದ್ರತೀರದಲ್ಲಿ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.