B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ
Team Udayavani, Apr 25, 2024, 8:52 PM IST
ಬೀದರ: ಬಿಜೆಪಿ ಅಭ್ಯರ್ಥಿ ವಿರುದ್ಧ ಮುನಿಸಿನಿಂದಾಗಿ ಔರಾದ ಶಾಸಕ, ಮಾಜಿ ಸಚಿವ ಪ್ರಭು ಚವ್ಹಾಣ ಲೋಕಸಭಾ ಚುನಾವಣಾ ಪ್ರಚಾರದಿಂದ ದೂರ ಉಳಿದ ಬಗ್ಗೆ ಪ್ರತಿಕ್ರಿಯಿಸಲು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿರಾಕರಿಸಿದರಲ್ಲದೇ ಮಾಧ್ಯಮದವರ ವಿರುದ್ಧ ಗರಂ ಆದ ಘಟನೆ ನಡೆಯಿತು.
ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರ ಪ್ರಚಾರಾರ್ಥ ಗುರುವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದ ಬಿಎಸ್‌ವೈ ಮಾಧ್ಯಮಗಳ ಜತೆ ಮಾತನಾಡಿದರು. ಈ ವೇಳೆ ಶಾಸಕ ಚವ್ಹಾಣ ಹೆಸರು ಹೇಳುತ್ತಿದ್ದಂತೆ ಸಿಡಿಮಿಡಿಕೊಂಡರು.
ಲೋಕಸಭೆ ಚುನಾವಣೆ ಮತದಾನಕ್ಕೆ ದಿನಗಣನೆ ಶುರುವಾದರೂ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಜತೆಗಿನ ಔರಾದ ಶಾಸಕ ಪ್ರಭು ಚವ್ಹಾಣ ಮುನಿಸು ಮಾತ್ರ ಇನ್ನೂ ಶಮನವಾಗಿಲ್ಲ. ಪಕ್ಷದ ಹೈಕಮಾಂಡ್ ಮುನಿಸು ಶಮನಕ್ಕೆ ಶತ ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಸದ್ಯ ಆರೋಗ್ಯದ ಸಮಸ್ಯೆ ಕಾರಣ ಮಹಾರಾಷ್ಟ್ರದ ಮುಂಬೈನಲ್ಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಶಾಸಕ ಚವ್ಹಾಣ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಿದರೂ ಅವರತ್ತ ಸುಳಿಯಲೇ ಇಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Air India; ಮಂಗಳೂರು – ಅಬುಧಾಬಿ ವಿಮಾನ 12 ತಾಸು ವಿಳಂಬ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.