ಬಾಬೂಜಿ ಆದರ್ಶ ಪಾಲಿಸಿ: ಪಾಟೀಲ
Team Udayavani, Apr 6, 2018, 3:47 PM IST
ಭಾಲ್ಕಿ: ದಲಿತರ ಏಳ್ಗೆಗಾಗಿ ಜೀವನವಿಡೀ ಶ್ರಮಿಸಿದ ಡಾ|ಬಾಬು ಜಗಜೀವನರಾಮ್ ಅವರ ಆದರ್ಶವನ್ನು ನಾವೆಲ್ಲರೂ ಪಾಲಿಸುವಂತಾಗಬೇಕು ಎಂದು ತಹಶೀಲ್ದಾರ ದಯಾನಂದ ಪಾಟೀಲ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಡಾ| ಬಾಬು ಜಗಜೀವನರಾಮ ಅವರ 111ನೇ ಜಯಂತಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಡಾ| ಬಾಬು ಜಗಜೀವನರಾಮ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದಾರೆ. ಜೀವನವೀಡಿ ದಲಿತರ ಏಳ್ಗೆಗಾಗಿ ಶ್ರಮಿಸಿದ್ದಾರೆ.
ಪ್ರತಿಯೊಬ್ಬ ವ್ಯಕ್ತಿ ತಮ್ಮ ಜಾತಿ ಮೀರಿ ಬೆಳೆಯಬೇಕು ಎನ್ನುವುದು ಅವರ ಆಶಯವಾಗಿತ್ತು. ಸ್ವಾತಂತ್ರ್ಯ ಪೂರ್ವದಲ್ಲಿ ದಲಿತರು, ಸ್ತ್ರೀಯರು, ರೈತರು, ರಾಷ್ಟ್ರೀಯ ಚಳವಳಿಗೆ ಧುಮಕಲು ಕಾರಣರಾದ ಡಾ| ಜಗಜೀವನರಾಮ್ ಅವರು 26 ತಿಂಗಳ ಸೆರೆಮನೆ ವಾಸ ಅನುಭವಿಸಿ ದೇಶಕ್ಕೆ ಸ್ವಾತಂತ್ರ್ಯ ತರುವಲ್ಲಿ ಶ್ರಮ ವಹಿಸಿದ್ದರು ಎಂದು ಸ್ಮರಿಸಿದರು.
ಉಪ ತಹಶೀಲ್ದಾರ ರಮೇಶ ಪೆದ್ದೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಂದಾಯ ನಿರೀಕ್ಷಕ ಜ್ಞಾನೇಶ್ವರ ಕಾರಬಾರಿ, ಪ್ರಮುಖರಾದ ಸಿದ್ರಾಮ, ಶಂಕರ ಚವ್ಹಾಣ, ಇಂದುಮತಿ, ಮೀನಾಕ್ಷಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.