![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 2, 2020, 2:34 PM IST
ಬಸವಕಲ್ಯಾಣ: ನಿರಗುಡಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಕೆಲಸ ಮಾಡುವ ಕಾರ್ಮಿಕರಿಗೆ ಶಾಸಕ ರಾಜಶೇಖರ ಪಾಟೀಲ ಮಾಸ್ಕ್ ವಿತರಿಸಿದರು.
ಬಸವಕಲ್ಯಾಣ: ಲಾಕ್‌ಡೌನ್ ಮುಗಿಯುವವರೆಗೂ ಕೊರೊನಾ ವೈರಸ್ ಹರಡದಂತೆ ಮುಂಜಾಗೃತೆ ವಹಿಸಬೇಕು ಹಾಗೂ ಬಿತ್ತನೆ ಸಮಯದಲ್ಲಿ ರೈತರಿಗೆ ಯಾವುದೇ ತೊಂದರೆ ಆಗದಂತೆ ಬೀಜ ಹಾಗೂ ರಸಾಯನಿಕ ಗೊಬ್ಬರ ಸಂಗ್ರಹ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ರಾಜೇಶಖರ ಪಾಟೀಲ ಹೇಳಿದರು.
ತಾಲೂಕಿನಲ್ಲಿ ಹುಮನಾಬಾದ್ ವಿಧಾನಸಭೆ ಒಳಪಡುವ ವಿವಿಧ ಗ್ರಾಮಗಳಲ್ಲಿ ಕೈಗೊಂಡಿರುವ ಉದ್ಯೋಗ ಖಾತ್ರಿ ಕೆಲಸ ಪರಿಶೀಲಿಸಿ ರಾಜೇಶ್ವರನಲ್ಲಿ ಅಧಿಕಾರಿಗಳ ಜತೆಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೆಲಸ ನಡೆಯುವ ಸ್ಥಳಗಳಲ್ಲಿ ಕಾರ್ಮಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವಂತೆ ಸೂಚಿಸಬೇಕು. ಈಗಾಗಲೇ ವಿವಿಧೆಡೆ ನರೇಗಾ ಕೆಲಸ ಉತ್ತಮವಾಗಿ ನಡೆಯುತ್ತಿದೆ. ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಕೆಲಸ ನೀಡಬೇಕು. ಜನರಿಗೆ ಜೀವನ ಮಾಡಲು ಅನುಕೂಲ ಮಾಡಿಕೊಡಬೇಕು ಎಂದು ಸೂಚಿದರು. ಜೂನ್ ತಿಂಗಳಲ್ಲಿ ಬಿತ್ತನೆ ಆರಂಭವಾಗುತ್ತದೆ. ಹೀಗಾಗಿ ರೈತರಿಗೆ ಬೇಕಾದ ಬೀಜ, ರಸಾಯನಿಕ ಗೊಬ್ಬರವನ್ನು ಕಡಿಮೆ ಬೀಳದಂತೆ ಸಂಗ್ರಹ ಮಾಡಿಕೊಳ್ಳಬೇಕು ಮತ್ತು ಕೊರೊನಾ ವೈರಸ್ ಮುಂಜಾಗೃತೆ ಹಿನ್ನೆಲೆಯಲ್ಲಿ ಜಾರಿಗೊಳಿಸಲಾದ ಲಾಕ್‌ಡೌನ್ ಮುಗಿಯುವವರೆಗೂ ರೈತರು ಬೆಳೆದ ಬೆಳೆಗಳನ್ನು ನೇರವಾಗಿ ಮಾರಾಟ ಮಾಡಲು ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಸೂಚಿಸಿದರು.
ನಂತರ ತೋಟಗಾರಿಕೆ ಇಲಾಖೆ, ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಕೈಗೊಂಡಿರುವ ಕೆಲಸಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್, ಜಿಪಂ ಉಪಾಧ್ಯಕ್ಷ ಲಕ್ಷ¾ಣರಾವ್ ಬುಳ್ಳಾ, ರಾಜೇಶ್ವರ ಜಿಪಂ ಸದಸ್ಯ ಗುಂಡುರೆಡ್ಡಿ ಹಮಲಾಪುರೆ, ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೊಡ, ತಾಪಂ ಇಒ ಮಡೋಳಪ್ಪ ಪಿ.ಎಸ್., ವ್ಯವಸ್ಥಾಪಕ ಜಯಪ್ರಕಾಶ ಚವ್ಹಾಣ, ಸಿಡಿಪಿಒ ಶಾರದಾ ಕಲಮಲಕರ್ ಇದ್ದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.