ಬಸವಕಲ್ಯಾಣ: ಸಿಟಿ ಬಸ್‌ ಸೌಲಭ್ಯಕ್ಕೆ ಎಬಿವಿಪಿ ಮನವಿ


Team Udayavani, Oct 5, 2018, 11:27 AM IST

bid-3.jpg

ಬಸವಕಲ್ಯಾಣ: ನಗರದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸಿಟಿ ಬಸ್‌ ಸೌಲಭ್ಯ ಒದಗಿಸಲು ಒತ್ತಾಯಿಸಿ ಗುರುವಾರ
ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ ಈ.ಕ.ರ.ಸಾ. ಸಂಸ್ಥೆ ವ್ಯವಸ್ಥಾಪಕರಿಗೆ ಬರೆದ ಮನವಿಯನ್ನು ಉಪ ತಹಸೀಲ್ದಾರ್‌ ಶಿವಾನಂದ ಮೇತ್ರೆ ಅವರಿಗೆ ಸಲ್ಲಿಸಲಾಯಿತು.

ವಿದ್ಯಾರ್ಥಿಗಳು ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಹಳೆ ತಹಶೀಲ್ದಾರ್‌ ಕಚೇರಿಗೆ ಪ್ರತಿಭಟನಾ ರ್ಯಾಲಿ ಮೂಲಕ
ತೆರಳಿದರು. ನಗರದ ಶಾಲಾ-ಕಾಲೇಜುಗಳು ಪ್ರಾರಂಭವಾಗುವ ಸಮಯದಲ್ಲಿ ಬಸ್‌ಗಳ ಕೊರತೆಯಾಗುತ್ತಿದೆ.

ಇದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ. ಕೆಲವು ಸಲ ವಿಳಂಬವಾಗುತ್ತಿರುವುದರಿಂದ ತರಗತಿಗಳಿಂದ
ವಂಚಿತರಾಗುತ್ತಿದ್ದಾರೆ. ಆದ್ದರಿಂದ ನಗರದಲ್ಲಿ ಎರಡು ಸಿಟಿ (ಲೋಕಲ್‌) ಬಸ್‌ ಸೌಕರ್ಯ ಒದಗಿಸಬೇಕು, ಬಸ್‌ ತಂಗುದಾಣ ಸ್ಥಳಗಳಲ್ಲಿ ಕುಳಿತಿಕೊಳ್ಳಲು ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದರು.

ನಗರದ ಪ್ರಮುಖ ಸ್ಥಳಗಳಾದ ನಾರಾಯಣಪೂರ ಕ್ರಾಸ್‌, ತ್ರಿಪೂರಾಂತ ಐ.ಬಿ., ಹಳೆಯ ತಹಶೀಲ್ದಾರ್‌ ಕಚೇರಿ
ಎದುರು ಬಸ್‌ಗಳನ್ನು ನಿಲ್ಲಿಸುವಂತೆ ಚಾಲಕರಿಗೆ ಸೂಚನೆ ನೀಡಬೇಕು. ಏಕೆಂದರೆ ಈ ಕುರಿತು ಸಾಕಷ್ಟು ಬಾರಿ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಇದರ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.

ಎಬಿವಿಪಿ ಪ್ರಮುಖ ಲೋಕೇಶ ಮೋಳಕೆರೆ, ತಾಲೂಕು ಸಂಚಾಲಕ ನವನಾಥ ಮೇತ್ರೆ, ಅಂಬರೀಶ್‌ ಸ್ವಾಮಿ, ನಗರ ಸಹ ಕಾರ್ಯದರ್ಶಿ ಶಂಕರ ಕಾಮಶೆಟ್ಟಿ, ಪೂಜಾ ಬಿರಾದಾರ್‌, ಸ್ವಾತಿ ಬಿರಾದಾರ್‌, ಅಮಿತ್‌, ಆದಿತ್ಯ ಶಿವಾಜಿ, ಓಂಕಾರ ಮಹಾದೇವ, ರೇಣುಕಾ, ಮಾಲಾಶ್ರೀ, ಸೀಮಾ, ಪಲ್ಲವಿ, ರೇಣುಕಾ ಮತ್ತಿತರರು ಇದ್ದರು.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಮ್ಮ ಸಮಸ್ಯೆಗೆ ಕೂಡಲೇ ಅಧಿಕಾರಿಗಳು ಸ್ಪಂದಿಸಬೇಕು. ಇಲ್ಲದಿದ್ದರೆ ಮುಂದಿನ
ದಿನಗಳಲ್ಲಿ ಸಂಬಂಧ ಪಟ್ಟ ಇಲಾಖೆ ಕಚೇರಿಗೆ ಎಬಿವಿಪಿಯಿಂದ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು.
 ಲೋಕೇಶ ಮೋಳಕೇರೆ, ಎಬಿವಿಪಿ ಪ್ರಮುಖ

ಟಾಪ್ ನ್ಯೂಸ್

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ವಾಡಿ ಬಂದ್ ನಡೆಸಿ ಪ್ರತಿಭಟನೆ

1-bharat

Bharatanatyam; ರಾಜ್ಯ ಮಟ್ಟದ ಶಿಷ್ಯವೇತನಕ್ಕೆ ಅದಿತಿ ಜಿ.ಮಂಡೀಚ,ಸ್ವಾತಿ ಆಯ್ಕೆ

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.