‘ಚೌಡಯ್ಯ ಪೀಠಕ್ಕೆ 50 ಕೋಟಿ ನೀಡುವಂತೆ ಕೋರುವೆ’
ಸಿದ್ಧರಾಮಯ್ಯ 5 ಕೋಟಿ ಬಿಡುಗಡೆ ಮಾಡಿ ಕಾಮಗಾರಿ ಆರಂಭಿಸಿದ್ದರು
Team Udayavani, Jan 24, 2020, 5:07 PM IST
ಬಸವಕಲ್ಯಾಣ: ನಿಜ ಶರಣ ಅಂಬಿಗರ ಚೌಡಯ್ಯ ಪೀಠಕ್ಕೆ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಬಿಎಸ್‌ವೈ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಶಾಸಕ ಬಿ.ನಾರಾಯಣರಾವ್ ಹೇಳಿದರು.
ನಗರದ ಬಿಕೆಡಿಬಿ ಕಲ್ಯಾಣ ಮಂಟಪದಲ್ಲಿ ಗುರುವಾರ ತಾಲೂಕು ಆಡಳಿತದಿಂದ ನಡೆದ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಂಬಿಗರ ಚೌಡಯ್ಯ ಪೀಠಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಆರಂಭಿಸಿದ್ದರು. ಇಗ ಬಿಎಸ್‌ವೈ 10 ಕೋಟಿ ರೂ. ಅನುದಾನ ನೀಡಿದ್ದು, ಮುಂದಿನ ದಿನಗಳಲ್ಲಿ ಪೀಠದ ಸಮಗ್ರ ಅಭಿವೃದ್ಧಿಗಾಗಿ 50 ಕೋಟಿ ರೂ. ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದರು.
ಅಂಬಿಗರ ಚೌಡಯ್ಯ ಸಮಾಜ ಬಾಂಧವರಿಗೆ ನಗರದಲ್ಲಿ ಸ್ಮಶಾನ ಭೂಮಿ ಇಲ್ಲ. ಹೀಗಾಗಿ 5 ಎಕರೆ ಸರ್ಕಾರಿ ಜಮೀನು ಗುರುತಿಸಿ ಸ್ಮಶಾನ ಭೂಮಿಗೆ ನೀಡುವಂತೆ ಜಿಲ್ಲಾಧಿಕಾರಿಗೆ ಪತ್ರ ಬರೆಯಬೇಕೆಂದು ತಹಶೀಲ್ದಾರ್ ಸಾವಿತ್ರಿ ಶರಣು ಸಲಗರ ಅವರಿಗೆ ತಿಳಿಸಿದರು.
ಕಲ್ಯಾಣ ಮಂಟಪ ನಿರ್ಮಾಣಕ್ಕಾಗಿ 5 ಕೋಟಿ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದರು. ಶಿಕ್ಷಕ ಗೋವಿಂದ ಚಟ್ಟಂಪಳ್ಳಿ ವಿಶೇಷ ಉಪನ್ಯಾಸ ನೀಡಿದರು. ಇದಕ್ಕೂ ಮುನ್ನ ನಗರದ ಕೋಟೆ ಯಿಂದ ಬಿಕೆಡಿಬಿ ಕಲ್ಯಾಣ ಮಂಟಪದ ವರೆಗೆ ನಿಜ ಶರಣ ಅಂಬಿಗರ ಚೌಡಯ್ಯ ಅವರ ಭಾವಚಿತ್ರ ಮೆರವಣಿಗೆ ನಡೆಯಿತು. ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೊಡ, ತಹಶೀಲ್ದಾರ್ ಸಾವಿತ್ರಿ ಶರಣು ಸಲಗರ, ಸಿಎಂಸಿ ಪೌರಾಯುಕ್ತ ಸುರೇಶ ಬಬಲಾದ ಸೇರಿದಂತೆ ಸಮಾಜ ಬಾಂಧವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.